
ಯಲಬುರ್ಗಾ: ‘ಪಠ್ಯೇತರ ಚಟುವಟಿಕೆಗಳು ಮಕ್ಕಳನ್ನು ಚೈತನ್ಯಶೀಲರನ್ನಾಗಿ ಮಾಡುವುದರ ಜೊತೆಗೆ ಕಲಿಕೆಯಲ್ಲಿ ಹೆಚ್ಚಿನ ಆಸಕ್ತಿ ಮೂಡುವಂತೆ ಮಾಡುತ್ತದೆ’ ಎಂದು ಆರ್‌ಡಿಸಿಸಿ ಬ್ಯಾಂಕ್ ನಿರ್ದೇಶಕ ಶೇಖರಗೌಡ ಉಳ್ಳಾಗಡ್ಡಿ ಹೇಳಿದರು.
ಪಟ್ಟಣದ ಅಕ್ಷಯ ಪಬ್ಲಿಕ್ ಸ್ಕೂಲ್‌ನಲ್ಲಿ ಆಯೋಜಿಸಲಾಗಿದ್ದ ವಾರ್ಷಿಕೋತ್ಸವ ಮತ್ತು ಮಕ್ಕಳ ವೈಭವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು,‘ಗುಣಮಟ್ಟದ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡುವ ಮೂಲಕ ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ’ ಎಂದರು.
ವೈದ್ಯ ಡಾ.ಬಿ.ವಿ.ಇಟಗಿ ಮಾತನಾಡಿ,‘ಮಕ್ಕಳ ವಿಕಾಸಕ್ಕೆ ಪಾಲಕರು ಹೆಚ್ಚಿನ ಮುತುವರ್ಜಿ ತೋರಬೇಕಾದ ಅನಿವಾರ್ಯತೆ ಇದೆ. ಶಿಕ್ಷಣ ಮತ್ತು ರಕ್ಷಣೆಯನ್ನು ವಿಶೇಷ ಕಾಳಜಿಯೊಂದಿಗೆ ಒದಗಿಸಬೇಕಾಗಿದೆ’ ಎಂದು ಹೇಳಿದರು.
ಸಂಸ್ಥೆಯ ಉಪಾಧ್ಯಕ್ಷ ಡಾ.ಶಿವನಗೌಡ ದಾನರಡ್ಡಿ ಮಾತನಾಡಿ,‘ಮಕ್ಕಳೇ ದೊಡ್ಡ ಆಸ್ತಿ. ಅದನ್ನು ಸಂರಕ್ಷಿಸುವುದು ಎಲ್ಲರ ಹೊಣೆ’ ಎಂದರು.
ಉಪ ತಹಶೀಲ್ದಾರ್ ವಿಜಯಕುಮಾರ ಗುಂಡೂರು, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ನಾಗೇಶ್, ಕಲ್ಲನಗೌಡ ಓಜನಹಳ್ಳಿ, ಉಪನ್ಯಾಸಕ ಪವನಕುಮಾರ ಗುಂಡೂರು, ಹಿರಿಯ ವಕೀಲ ಪ್ರಕಾಶ ಬೆಲೇರಿ, ಉಪನ್ಯಾಸಕ ಶಂಕರ್ ಕಟ್ಟಿ, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಸುಧೀರ್ ಕೋರ್ಲಳ್ಳಿ, ಸವಿತಾ ಓಜನಹಳ್ಳಿ, ಶಿಕ್ಷಕ ಹನುಮಂತಪ್ಪ ಪುರದ, ಓಬಯ್ಯ, ಪ್ರಕಾಶ ಸೇರಿ ಅನೇಕರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.