ADVERTISEMENT

ಯಲಬುರ್ಗಾ: ಯೋಗ ದಿನಾಚರಣೆಯಲ್ಲಿ 2 ಸಾವಿರ ವಿದ್ಯಾರ್ಥಿಗಳ ಪಾಲ್ಗೊಳ್ಳುವ ನಿರೀಕ್ಷೆ

​ಪ್ರಜಾವಾಣಿ ವಾರ್ತೆ
Published 19 ಜೂನ್ 2025, 15:23 IST
Last Updated 19 ಜೂನ್ 2025, 15:23 IST
ಯಲಬುರ್ಗಾ ಪಟ್ಟಣದ ತಹಶೀಲ್ದಾರ್‌ ಕಚೇರಿಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ತಹಶೀಲ್ದಾರ್‌ ಬಸವರಾಜ ತನ್ನಳ್ಳಿ, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ನಾಗೇಶ, ಮಾಜಿ ಅಧ್ಯಕ್ಷ ಅಮರೇಶ ಹುಬ್ಬಳ್ಳಿ, ಆಯುಷ್ ವೈದ್ಯಾಧಿಕಾರಿ ವಿವೇಕ ಇದ್ದರು
ಯಲಬುರ್ಗಾ ಪಟ್ಟಣದ ತಹಶೀಲ್ದಾರ್‌ ಕಚೇರಿಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ತಹಶೀಲ್ದಾರ್‌ ಬಸವರಾಜ ತನ್ನಳ್ಳಿ, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ನಾಗೇಶ, ಮಾಜಿ ಅಧ್ಯಕ್ಷ ಅಮರೇಶ ಹುಬ್ಬಳ್ಳಿ, ಆಯುಷ್ ವೈದ್ಯಾಧಿಕಾರಿ ವಿವೇಕ ಇದ್ದರು   

ಯಲಬುರ್ಗಾ: ‘ವಿಶ್ವ ಯೋಗ ದಿನಾಚರಣೆ ಪ್ರಯುಕ್ತ ಇದೇ ಜೂ.21ರಂದು ಬೆಳಿಗ್ಗೆ 5.30ಕ್ಕೆ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ವೇದಿಕೆ ಕಾರ್ಯಕ್ರಮ ಹಾಗೂ ಯೋಗಾಭ್ಯಾಸ ಕಾರ್ಯಕ್ರಮ ಆಯೋಜಿಸಲಾಗಿದೆ’ ಎಂದು ತಹಶೀಲ್ದಾರ್‌ ಬಸವರಾಜ ತೆನ್ನಳ್ಳಿ ಹೇಳಿದರು.

ಪಟ್ಟಣದ ತಹಶೀಲ್ದಾರ್‌ ಕಚೇರಿಯಲ್ಲಿ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು.

‘ಪಟ್ಟಣದ ವಿವಿಧ ಶಾಲೆ, ಕಾಲೇಜುಗಳಿಂದ ಸುಮಾರು ಒಂದು ಸಾವಿರಕ್ಕೂ ಅಧಿಕ ಸಂಖ್ಯೆಯ ಮಕ್ಕಳು ಯೋಗಾಭ್ಯಾಸದಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ. ಹಾಗೆಯೇ ವಿವಿಧ ಸಂಘ ಸಂಸ್ಥೆಯ ಪದಾಧಿಕಾರಿಗಳು, ಯೋಗ ಪಟುಗಳು ಆಗಮಿಸಲಿದ್ದಾರೆ. ಅದಕ್ಕಾಗಿ ಸ್ಥಳೀಯ ಪಂಚಾಯಿತಿಯವರು ಸ್ವಚ್ಚತೆ ಮಾಡುವುದು, ಮೈಕ್ ಸೆಟ್ ಅಳವಡಿಸುವುದು ಹಾಗೂ ಹಾಸಿಗೆಯ ವ್ಯವಸ್ಥೆ ಮಾಡಬೇಕು’ ಎಂದು ಹೇಳಿದರು.

ADVERTISEMENT

ಈ ವೇಳೆ ಶಿರಸ್ತೇದಾರ ಎಂ. ದೇವರಡ್ಡಿ, ದೈಹಿಕ ಶಿಕ್ಷಣಾಧಿಕಾರಿ ವೀರಭದ್ರಪ್ಪ ಅಂಗಡಿ, ಬಸವರಾಜ ಉಮಲೂಟಿ, ಹನುಮಗೌಡ ಮಾಲಿಪಾಟೀಲ, ಆಯುಷ್ ಇಲಾಖೆ ವೈದ್ಯಾಧಿಕಾರಿ ವಿವೇಕ ವಾಗ್ಲೆ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.