ADVERTISEMENT

ಯಲಬುರ್ಗಾ| ಮಾದರಿ ಪಟ್ಟಣವನ್ನಾಗಿಸುವ ಗುರಿ: ಬಸವರಾಜ ರಾಯರಡ್ಡಿ

​ಪ್ರಜಾವಾಣಿ ವಾರ್ತೆ
Published 15 ನವೆಂಬರ್ 2025, 6:30 IST
Last Updated 15 ನವೆಂಬರ್ 2025, 6:30 IST
<div class="paragraphs"><p>ಯಲಬುರ್ಗಾ ಪಟ್ಟಣದ ಬಸ್ ನಿಲ್ದಾಣದ ಎದುರು ಸಣ್ಣ ಶೆಡ್‍ಗಳ ಉದ್ಘಾಟನೆಯನ್ನು ಸಿಎಂ. ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ ನೆರವೇರಿಸಿದರು. </p></div>

ಯಲಬುರ್ಗಾ ಪಟ್ಟಣದ ಬಸ್ ನಿಲ್ದಾಣದ ಎದುರು ಸಣ್ಣ ಶೆಡ್‍ಗಳ ಉದ್ಘಾಟನೆಯನ್ನು ಸಿಎಂ. ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ ನೆರವೇರಿಸಿದರು.

   

ಯಲಬುರ್ಗಾ: ‘ಮಾದರಿ ಪಟ್ಟಣವನ್ನಾಗಿ ಮಾಡುವ ಉದ್ದೇಶದಿಂದ ಸಾಕಷ್ಟು ಅನುದಾನವನ್ನು ಪಟ್ಟಣದ ಅಭಿವೃದ್ಧಿಗೆ ಸರ್ಕಾರದಿಂದ ಬಿಡುಗಡೆ ಮಾಡಲಾಗಿದೆ. ಯೋಜನೆಗಳು ಸರಿಯಾಗಿ ಅನುಷ್ಠಾನಗೊಂಡರೆ ಮಾದರಿ ಪಟ್ಟಣ ಮತ್ತು ತಾಲ್ಲೂಕು ಆಗುವುದರಲ್ಲಿ ಯಾವುದೇ ಸಂಶಯವಿಲ್ಲ’ ಎಂದು ಸಿಎಂ ಆರ್ಥಿಕ ಸಲಹೆಗಾರಿ ಬಸವರಾಜ ರಾಯರಡ್ಡಿ ಹೇಳಿದರು.

ಸ್ಥಳೀಯ ಕೇಂದ್ರ ಬಸ್ ನಿಲ್ದಾಣದ ಎದುರು ಪಟ್ಟಣ ಪಂಚಾಯಿತಿ ವತಿಯಿಂದ ನಿರ್ಮಿಸಿರುವ 24 ಶೆಡ್‍ಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು.

ADVERTISEMENT

ಸಣ್ಣ ವ್ಯಾಪಾರಸ್ಥರಿಗೆ ಅನುಕೂಲವಾಗಿಸುವ ಉದ್ದೇಶದಿಂದ ಸಣ್ಣ ಪ್ರಮಾಣದ ಶೆಡ್‍ಗಳನ್ನು ನಿರ್ಮಿಸಲಾಗಿದೆ. ಪಟ್ಟಣದ ಹಾಗೂ ತಾಲ್ಲೂಕು ವೇಗದಲ್ಲಿಯೇ ಅಭಿವೃದ್ಧಿಗೊಳ್ಳುತ್ತಿದೆ. ಸಾಕಷ್ಟು ಕಾಮಗಾರಿಗಳು ತಾಲ್ಲೂಕಿನಲ್ಲಿ ನಡೆಯುತ್ತಿವೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಅಭಿವೃದ್ಧಿ ಕಾರ್ಯಗಳು ಪಟ್ಟಣ ಮತ್ತು ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ನಡೆಯಲಿವೆ. ಕ್ಷೇತ್ರದ ಜನರ ವಿಶ್ವಾಸಕ್ಕೆ ಯಾವುದೇ ಧಕ್ಕೆಯಾಗದ ರೀತಿಯಲ್ಲಿ ಅಭಿವೃದ್ಧಿಗೊಳಿಸಲು ಹಗಲಿರುಳು ಶ್ರಮಿಸಲಾಗುವುದು’ ಎಂದರು.

ಪ.ಪಂ ಮುಖ್ಯಾಧಿಕಾರಿ ನಾಗೇಶ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆರಿಬಸಪ್ಪ ನಿಡಗುಂದಿ, ಡಾ.ಶಿವನಗೌಡ ದಾನರೆಡ್ಡಿ, ಮಲ್ಲಿಕಾರ್ಜುನ ಜಕ್ಕಲಿ, ಡಾ.ನಂದಿತಾ ದಾನರೆಡ್ಡಿ, ಸಂಗಣ್ಣ ಟೆಂಗಿನಕಾಯಿ, ಹನಮಂತಪ್ಪ ಭಜಂತ್ರಿ, ರಿಯಾಜ ಖಾಜಿ, ಶರಣಮ್ಮ ಪೂಜಾರ, ಅಶೋಕ ತೋಟದ, ಎಂ.ಎಫ್.ನದಾಫ್ ಸೇರಿ ಅನೇಕರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.