ADVERTISEMENT

ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ

ಪೆಟ್ರೋಲ್, ಡೀಸೆಲ್ ಬೆಲೆ ಇಳಿಸಲು ಯುವ ಕಾಂಗ್ರೆಸ್ ಆಗ್ರಹ

​ಪ್ರಜಾವಾಣಿ ವಾರ್ತೆ
Published 11 ಏಪ್ರಿಲ್ 2022, 4:57 IST
Last Updated 11 ಏಪ್ರಿಲ್ 2022, 4:57 IST
ಕೇಂದ್ರ ಸರ್ಕಾರದ ಬೆಲೆ ಏರಿಕೆ ನೀತಿ ಖಂಡಿಸಿ ಕೊಪ್ಪಳದಲ್ಲಿ ಶನಿವಾರ ಯುವ ಕಾಂಗ್ರೆಸ್ ಕಾರ್ಯಕರ್ತರು ಅಶೋಕ ವೃತ್ತದಲ್ಲಿ ಅಡುಗೆ ಅನಿಲ ಸಿಲಿಂಡರ್‌ಗಳನ್ನು ಇಟ್ಟುಕೊಂಡು ಪ್ರತಿಭಟನೆ ನಡೆಸಿದರು
ಕೇಂದ್ರ ಸರ್ಕಾರದ ಬೆಲೆ ಏರಿಕೆ ನೀತಿ ಖಂಡಿಸಿ ಕೊಪ್ಪಳದಲ್ಲಿ ಶನಿವಾರ ಯುವ ಕಾಂಗ್ರೆಸ್ ಕಾರ್ಯಕರ್ತರು ಅಶೋಕ ವೃತ್ತದಲ್ಲಿ ಅಡುಗೆ ಅನಿಲ ಸಿಲಿಂಡರ್‌ಗಳನ್ನು ಇಟ್ಟುಕೊಂಡು ಪ್ರತಿಭಟನೆ ನಡೆಸಿದರು   

ಕೊಪ್ಪಳ: ಪೆಟ್ರೋಲ್, ಡಿಸೇಲ್‌, ಸಿಲಿಂಡರ್ ಮತ್ತು ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಯುವ ಕಾಂಗ್ರೆಸ್‌ ವತಿಯಿಂದ ಪ್ರತಿಭಟನೆ ನಡೆಯಿತು.

ನಗರದ ಗಡಿಯಾರ ಕಂಭದಿಂದ ಅಶೋಕ ವೃತ್ತದವರೆಗೆ ಅಡುಗೆ ಅನಿಲ ಸಿಲಿಂಡರ್ ಹೊತ್ತುಕೊಂಡು ಮೆರವಣಿಗೆ ನಡೆಸಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಯುವ ಕಾಂಗ್ರೆಸ್ ಅಧ್ಯಕ್ಷ ಕೃಷ್ಣ ಗಲಿಬಿ ಮಾತನಾಡಿ, ದೇಶದ ಪ್ರತಿಷ್ಠಿತ ಸಂಸ್ಥೆಗಳನ್ನು ಮಾರಾಟ ಮಾಡುತ್ತಿರುವುದಲ್ಲದೇ ನಿತ್ಯ ಬೆಲೆ ಏರಿಕೆ ಮಾಡುವ ಮೂಲಕ ಜನಸಾಮಾನ್ಯರ ಮೇಲೆ ಬರೆ ಎಳೆಯುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ADVERTISEMENT

ಜನವಿರೋಧಿ ಕಾರ್ಯಕ್ರಮಗಳನ್ನು ಮುನ್ನೆಲೆಗೆ ತರುವ ಮೂಲಕ ಅಭಿವೃದ್ಧಿಯನ್ನು ಮರೆಮಾಚಿ ಕೋಮು ಸಂಘರ್ಷಕ್ಕೆ ಕಾರಣವಾಗುತ್ತಿದ್ದಾರೆ. ನಿರುದ್ಯೋಗ, ಹಸಿವು, ಬಡತನ, ಉದ್ಯೋಗದ ಯಾವುದೇ ವಿಷಯಗಳನ್ನು ಪ್ರಸ್ತಾಪ ಮಾಡದೇ ದೇಶವನ್ನು ಅಧೋಗತಿಗೆ ಕೊಂಡೊಯ್ಯುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.ಬ್ಲಾಕ್‌ ಕಾಂಗ್ರೆಸ್ ಅಧ್ಯಕ್ಷ ಕಾಟನ್ ಪಾಶಾ ಮಾತನಾಡಿದರು.

ಯುವ ಕಾಂಗ್ರೆಸ್ ಪದಾಧಿಕಾರಿಗಳು, ವಿವಿಧ ಮೋರ್ಚಾ ಸದಸ್ಯರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.