ADVERTISEMENT

ಬೆಲೆ ಏರಿಕೆ ಖಂಡಿಸಿ ಯುವ ಕಾಂಗ್ರೆಸ್‌ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 12 ಏಪ್ರಿಲ್ 2022, 5:18 IST
Last Updated 12 ಏಪ್ರಿಲ್ 2022, 5:18 IST
ಕೇಂದ್ರ, ರಾಜ್ಯ ಸರ್ಕಾರದ ವಿರುದ್ದ ಯುವ ಕಾಂಗ್ರೆಸ್ ಕಾರ್ಯಕರ್ತರು ಭಾನುವಾರ ಕಾರಟಗಿ ಪಟ್ಟಣದ ಕನಕದಾಸ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು
ಕೇಂದ್ರ, ರಾಜ್ಯ ಸರ್ಕಾರದ ವಿರುದ್ದ ಯುವ ಕಾಂಗ್ರೆಸ್ ಕಾರ್ಯಕರ್ತರು ಭಾನುವಾರ ಕಾರಟಗಿ ಪಟ್ಟಣದ ಕನಕದಾಸ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು   

ಕಾರಟಗಿ: ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಯುವ ಕಾಂಗ್ರೆಸ್ ಕಾರ್ಯಕರ್ತರು ಪಟ್ಟಣದ ಕನಕದಾಸ ವೃತ್ತದಲ್ಲಿ ಭಾನುವಾರ ಪ್ರತಿಭಟನೆ ನಡೆಸಿದರು.

ಸಿಲಿಂಡರ್‌, ಡಿಸೇಲ್, ಪೆಟ್ರೋಲ್ ದರ ನಿರಂತರವಾಗಿ ಏರಿಕೆಯಾಗುತ್ತಿದೆ. ಕೇಂದ್ರ, ರಾಜ್ಯ ಸರ್ಕಾರಗಳು ಜನಸಾಮಾನ್ಯರ ಹಿತ ಮರೆತಿವೆ. ಪಂಚರಾಜ್ಯಗಳ ಚುನಾವಣೆ ಸಂದರ್ಭದಲ್ಲಿ ಬೆಲೆ ಏರಿಕೆ ತಡೆದು, ಇದೀಗ ಆಕಾಶದೆತ್ತರಕ್ಕೆ ಏರಿಸಲಾಗಿದೆ. ಇದರಿಂದ ಜನಸಾಮಾನ್ಯರು ಜೀವನ ನಡೆಸಲು ಹೆಣಗಾಡುತ್ತಿದ್ದಾರೆ. ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ನೇತೃತ್ವದ ಸರ್ಕಾರಗಳು ಬೆಲೆ ಏರಿಕೆ ನಿಯಂತ್ರಿಸಲು ವಿಫಲವಾಗಿವೆ ಎಂದು ಮುಖಂಡರು ದೂರಿದರು.

ಸರ್ಕಾರದ ನಡೆ ಪ್ರಶ್ನಿಸುವುದೇ ಅಪರಾಧವಾಗಿದೆ. ಜಾತಿ, ಧರ್ಮದ ಹೆಸರಿನಲ್ಲಿ ರಾಜಕೀಯ ನಡೆಸುತ್ತಾ, ಸರ್ಕಾರ ಲೂಟಿಗಿಳಿದಿದೆ ಎಂದು ಪ್ರತಿಭಟನಾನಿರತರು ಆಕ್ರೋಶ ವ್ಯಕ್ತಪಡಿಸಿದರು.

ADVERTISEMENT

ರಸ್ತೆಯಲ್ಲಿ ಅಡುಗೆ ಎಣ್ಣೆ, ಸಿಲಿಂಡರ್, ಬೈಕ್ ನಿಲ್ಲಿಸಿ ಕೇಂದ್ರ, ರಾಜ್ಯ ಸರ್ಕಾರಗಳ ವಿರುದ್ಧ ಘೋಷಣೆಗಳನ್ನು ಹಾಕಲಾಯಿತು.

ಪುರಸಭೆ ಸದಸ್ಯ ಮಂಜುನಾಥ ಮೆಗೂರು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶರಣೇಗೌಡ ಮಾಲಿಪಾಟೀಲ್, ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸಿ.ಎಚ್.ರವಿನಂದ ಪ್ರಮುಖರಾದ ಶರಣಪ್ಪ ಪರಕಿ, ಬಸವರಾಜ ಪಗಡದಿನ್ನಿ, ಮಹೇಶ ಕಂದಗಲ್, ಉದಯಕುಮಾರ ಈಡಿಗೇರ, ವೀರೇಶ ಶೆಟ್ಟರ್, ಸೋಮನಾಥ ಮರ್ಲಾನಹಳ್ಳಿ, ಸಾಗರ ಕುಲಕರ್ಣಿ, ಎಚ್. ವೀರೇಂದ್ರ, ದುರುಗೇಶ ಪ್ಯಾಟ್ಯಾಳ, ಶಿವಕುಮಾರ ಈಳಿಗನೂರು, ಅಭಿಷೇಕ ಸುಂಕದ, ಶಿವಕುಮಾರ ನಾಯಕ, ರಮೇಶ ಕೋಟ್ಯಾಳ ಹಾಗೂ ಕಾರ್ಯಕರ್ತರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.