ADVERTISEMENT

ಯುವ ಕಾಂಗ್ರೆಸ್‌ ಪ್ರತಿಭಟನೆ; ಮೋದಿ ರಾಜೀನಾಮೆಗೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 10 ಫೆಬ್ರುವರಿ 2026, 6:50 IST
Last Updated 10 ಫೆಬ್ರುವರಿ 2026, 6:50 IST
ಕೊಪ್ಪಳದಲ್ಲಿ ಸೋಮವಾರ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು
ಕೊಪ್ಪಳದಲ್ಲಿ ಸೋಮವಾರ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು   

ಕೊಪ್ಪಳ: ವಿವಾದಿತ ಜೆಫ್ರಿ ಎಪ್‌ಸ್ಟೈನ್ ಫೈಲ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಹೆಸರು ಉಲ್ಲೇಖವಾಗಿದೆ ಎನ್ನಲಾಗಿದ್ದು, ಇದು ದೇಶದ ಘನತೆಗೆ ಕಪ್ಪುಚುಕ್ಕೆ ತರುವ ವಿಚಾರವಾಗಿದೆ ಎಂದು ಖಂಡಿಸಿ ನಗರದಲ್ಲಿ ಸೋಮವಾರ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಕಾರ್ಯಕರ್ತರು ವೃತ್ತದಲ್ಲಿ ಜಮಾಯಿಸಿ ಪ್ರಧಾನಿ ಮೋದಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿ ಎಪ್‌ಸ್ಟೈನ್ ಫೈಲ್ಸ್‌ನಲ್ಲಿ ಪ್ರಧಾನಿ ಹೆಸರು ಉಲ್ಲೇಖವಾಗಿರುವುದು ದೇಶಕ್ಕೆ ಮುಜುಗರ ತರುವ ಹಾಗೂ ಘನತೆಗೆ ಚ್ಯುತಿ ತರುವ ವಿಚಾರವಾಗಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ಕೈಗೊಂಬೆಯಾಗಿ ನಡೆದುಕೊಳ್ಳುತ್ತಿರುವ ಮೋದಿ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.

ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಲಿಂಗೇಶ್ ಕಲ್ಗುಡಿ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಜಿಲ್ಲಾ ಉಪಾಧ್ಯಕ್ಷ ಸಲೀಂ ಅಳವಂಡಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪರಶುರಾಮ ಮೆಕ್ಕೆ, ಜಿಲ್ಲಾ ಕಾನೂನು ಘಟಕದ ಅಧ್ಯಕ್ಷ ಮೊಹಮ್ಮದ್ ರಜಾಕ್, ಸಾಮಾಜಿಕ ಜಾಲತಾಣದ ಜಿಲ್ಲಾ ಸಂಚಾಲಕ ಮಂಜು ಕೆ ಪೂಜಾರ, ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಸಂತೋಷ್ ಬೂದಿಹಾಳ, ಯಲಬುರ್ಗಾ ಕ್ಷೇತ್ರದ ಅಧ್ಯಕ್ಷ  ನಾಗರಾಜ ಎಂ ಭಂಗಿ, ಗಂಗಾವತಿ ಗ್ರಾಮೀಣ ಘಟಕದ ಅಧ್ಯಕ್ಷ ಸಿದ್ದು ಹೊಸಮಠ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.