ADVERTISEMENT

ಅಧಿಕಾರಿಗಳಿಂದ ಮಳೆ ಹಾನಿ ಪರಿಶೀಲನೆ

​ಪ್ರಜಾವಾಣಿ ವಾರ್ತೆ
Published 27 ಫೆಬ್ರುವರಿ 2011, 9:50 IST
Last Updated 27 ಫೆಬ್ರುವರಿ 2011, 9:50 IST

ಕೃಷ್ಣರಾಜಪೇಟೆ: ಕಳೆದ ಎರಡು ದಿನಗಳಿಂದ ತಾಲ್ಲೂಕಿನ ವಿವಿಧ ಭಾಗಗಳಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಗೆ ಬೆಳೆಗಳು ಕೊಚ್ಚಿಹೋಗಿದ್ದು, ರೈತರಿಗೆ ಅಪಾರ ನಷ್ಟ ಉಂಟಾಗಿದೆ.ತಾಲ್ಲೂಕಿನ ಮರುವನಹಳ್ಳಿ ಗ್ರಾಮದ ವ್ಯಾಪ್ತಿಯ ಹತ್ತಕ್ಕೂ ಹೆಚ್ಚು ರೈತರಿಗೆ ಸೇರಿದ ಜಮೀನಿನಲ್ಲಿ ಬೆಳೆದು ನಿಂತಿದ್ದ, ಬತ್ತದ ಬೆಳೆ ಸಂಪೂರ್ಣ ಕೊಚ್ಚಿಹೋಗಿದೆ.

ಇದಲ್ಲದೆ ತಾಲ್ಲೂಕಿನ ಭಾರತೀಪುರ ಕ್ರಾಸ್ ಪಂಚಾಯ್ತಿ ವ್ಯಾಪ್ತಿಗೆ ಸೇರಿದ ಗ್ರಾಮಗಳ ರೈತರ ಕಣಗಳಲ್ಲಿ ಒಣಗಿ ಹಾಕಿದ್ದ ರಾಗಿಹುಲ್ಲು ಮತ್ತು ರಾಗಿ ಫಸಲು ಮಳೆಗೆ ಆಹುತಿಯಾಗಿದೆ. ಈ ಘಟನೆಗಳಿಂದ ರೈತರಿಗೆ ಲಕ್ಷಾಂತರ ರೂ. ನಷ್ಟವಾಗಿದೆ. ತಾ.ಪಂ ಉಪಾಧ್ಯಕ್ಷ ಮಹದೇವೇಗೌಡ, ಮಾಜಿ ಅಧ್ಯಕ್ಷ ವೆಂಕಟಸುಬ್ಬೇಗೌಡ, ರೈತಮುಖಂಡ ಮರುವನಹಳ್ಳಿ ಶಂಕರ್ ಸೇರಿದಂತೆ ಹಲವು ಮುಖಂಡರು ಸ್ಥಳಗಳಿಗೆ ಭೇಟಿ ನೀಡಿದ್ದು, ಸಂತ್ರಸ್ತರ ರೈತರಿಗೆ ಪರಿಹಾರ ಒದಗಿಸುವ ಭರವಸೆ ನೀಡಿದ್ದಾರೆ.

ಮರುವನಹಳ್ಳಿ ಗ್ರಾಮದ ಬಳಿ ನೀರಿನ ಪ್ರವಾಹದಿಂದ ಕೊಚ್ಚಿ ಹೋಗಿರುವ ಮುದ್ದನಕಟ್ಟೆ ಪ್ರದೇಶಕ್ಕೆ ಕಾವೇರಿ ನೀರಾವರಿ ನಿಗಮದ ಕಾರ್ಯ ಪಾಲಕ ಎಂಜಿನಿಯರ್ ಮರಿಸ್ವಾಮಿ, ಸಹಾಯಕ ಕಾರ್ಯಪಾಲಕ ಅಭಿಯಂತರ ಶಿವಮಾದಪ್ಪ ಮತ್ತಿತರ ಅಧಿಕಾರಿಗಳು ಭೇಟಿ ನೀಡಿ ಬೆಳೆ ಹಾನಿ ಪರಿಶೀಲನೆ ನಡೆಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.