ADVERTISEMENT

ಅವ್ಯವಹಾರ ಖಂಡಿಸಿ ಮುಂದುವರಿದ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 8 ಜೂನ್ 2011, 9:00 IST
Last Updated 8 ಜೂನ್ 2011, 9:00 IST

ಮಂಡ್ಯ: ಪಾಂಡವಪುರ ಪಟ್ಟಣ ಪಂಚಾಯಿತಿಯಲ್ಲಿ ನಡೆದಿದೆ ಎನ್ನಲಾಗಿರುವ ಅವ್ಯವಹಾರ ಪ್ರಕರಣವನ್ನು ಖಂಡಿಸಿ, ಸೂಕ್ತ ಕ್ರಮಕ್ಕೆ ಆಗ್ರಹಪಡಿಸಿ ಅಲ್ಲಿನ ಪಟ್ಟಣ ಪಂಚಾಯಿತಿಯ ಮಾಜಿ ಅಧ್ಯಕ್ಷ ಹೊನ್ನಗಿರಿಗೌಡ ಅವರು ಜಿಲ್ಲಾಧಿಕಾರಿಗಳ ಕಚೇರಿ ಎದುರು ನಡೆಸುತ್ತಿರುವ ಧರಣಿ ಮಂಗಳವಾರ ಮುಂದುವರಿಯಿತು.

ಪಟ್ಟಣ ಪಂಚಾಯಿತಿಯಲ್ಲಿ ವ್ಯಾಪಕವಾಗಿ ಅನ್ಯಾಯ, ದುರ್ಬಳಕೆ ಆಗುತ್ತಿದೆ. ಈ ಆರೋಪಗಳ ಬಗೆಗೆ ಕ್ರಮ ಜರುಗಿಸಿ ಸರ್ಕಾರ ಸ್ಪಷ್ಟ ಕ್ರಮದ ಭರವಸೆ ನೀಡುವವರೆಗೂ ಪ್ರತಿಭಟನೆ ಕೈಬಿಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಮುಖ್ಯಮಂತ್ರಿಗಳೇ ಪಟ್ಟಣ ಪಂಚಾಯಿತಿಯಲ್ಲಿ ನಡೆದಿರುವ ಅವ್ಯವಹಾರ ಪ್ರಕರಣದ ಬಗೆಗೆ ತನಿಖೆ ನಡೆಸಬೇಕು ಎಂದು ಸೂಚನೆ ನೀಡಿದ್ದರೂ ಅಧಿಕಾರಿಗಳು ಮೌನವಾಗಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಜಿಲ್ಲಾಧಿಕಾರಿಗಳ ಕಚೇರಿ ಬಳಿ ಹೊನ್ನಗಿರಿಗೌಡರು ಧರಣಿ ನಡೆಸುತ್ತಿರುವ ಸ್ಥಳಕ್ಕೆ ಮಂಗಳವಾರ ಮೈಷುಗರ್ ಅಧ್ಯಕ್ಷ ನಾಗರಾಜಪ್ಪ ಅವರು ಭೇಟಿ ನೀಡಿದ್ದು, ದೂರಿನ ಮಾಹಿತಿ ಪಡೆದುಕೊಂಡರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.