ADVERTISEMENT

ಉರುಳಿದ ಬಸ್‌: ವಿದ್ಯಾರ್ಥಿಗಳು ಪಾರು

​ಪ್ರಜಾವಾಣಿ ವಾರ್ತೆ
Published 14 ಫೆಬ್ರುವರಿ 2017, 6:53 IST
Last Updated 14 ಫೆಬ್ರುವರಿ 2017, 6:53 IST
ಶ್ರೀರಂಗಪಟ್ಟಣ ತಾಲ್ಲೂಕು ಬೊಮ್ಮೂರು ಅಗ್ರಹಾರ ಬಳಿ ಮಕ್ಕಳನ್ನು ಬಳ್ಳಾರಿ ಜಿಲ್ಲೆ ಹಗರಬೊಮ್ಮನಹಳ್ಳಿಯಿಂದ ಪ್ರವಾಸಕ್ಕೆ ಕರೆ ತಂದಿದ್ದ ಬಸ್‌ ಶನಿವಾರ ತಡರಾತ್ರಿ ಹಳ್ಳಕ್ಕೆ ಉರುಳಿ ಬಿದ್ದಿತ್ತು
ಶ್ರೀರಂಗಪಟ್ಟಣ ತಾಲ್ಲೂಕು ಬೊಮ್ಮೂರು ಅಗ್ರಹಾರ ಬಳಿ ಮಕ್ಕಳನ್ನು ಬಳ್ಳಾರಿ ಜಿಲ್ಲೆ ಹಗರಬೊಮ್ಮನಹಳ್ಳಿಯಿಂದ ಪ್ರವಾಸಕ್ಕೆ ಕರೆ ತಂದಿದ್ದ ಬಸ್‌ ಶನಿವಾರ ತಡರಾತ್ರಿ ಹಳ್ಳಕ್ಕೆ ಉರುಳಿ ಬಿದ್ದಿತ್ತು   

ಶ್ರೀರಂಗಪಟ್ಟಣ: ಪ್ರವಾಸಕ್ಕೆ ವಿದ್ಯಾರ್ಥಿಗಳನ್ನು ಕರೆ ತಂದಿದ್ದ ಸಾರಿಗೆ ಸಂಸ್ಥೆ ಬಸ್‌ ಹಳ್ಳಕ್ಕೆ ಉರುಳಿ ಬಿದ್ದ ಘಟನೆ ತಾಲ್ಲೂಕಿನ ಬೊಮ್ಮೂರು ಅಗ್ರಹಾರ ಬಳಿ ಶನಿವಾರ ರಾತ್ರಿ ನಡೆದಿದೆ.

ಬಳ್ಳಾರಿ ಜಿಲ್ಲೆ ಹಗರಿಬೊಮ್ಮನಹಳ್ಳಿ ತಾಲ್ಲೂಕಿನ ವಿವಿಧ ಶಾಲೆಗಳ ವಿದ್ಯಾರ್ಥಿಗಳನ್ನು ಕರೆ ತಂದಿದ್ದ ಈಶಾನ್ಯ ಸಾರಿಗೆ ಸಂಸ್ಥೆ ಬಸ್‌ ರಸ್ತೆ ಬದಿಗೆ ಉರುಳಿದೆ. ಕೆಲವು ವಿದ್ಯಾರ್ಥಿಗಳಿಗೆ ತರಚಿತ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಬಸ್‌ನಲ್ಲಿ 46 ವಿದ್ಯಾರ್ಥಿಗಳು ಹಾಗೂ ನಾಲ್ವರು ಶಿಕ್ಷಕರು ಇದ್ದರು. ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳನ್ನು ‘ಕರ್ನಾಟಕ ದರ್ಶನ’ ಪ್ರವಾಸಕ್ಕೆ ಕರೆ ತಂದಿದ್ದಾಗ ಈ ಅವಘಡ ಸಂಭವಿಸಿದೆ. ಮೈಸೂರಿನಿಂದ ಶ್ರೀರಂಗಪಟ್ಟಣ ಕಡೆ ಬರುವಾಗ ಆಯತಪ್ಪಿ ಬಸ್‌ ಹಳ್ಳಕ್ಕೆ ಉರುಳಿದೆ. ಚಾಲಕನ ಅಜಾಗರೂಕತೆಯಿಂದ ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.

ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಮಕ್ಕಳನ್ನು ತಾಲ್ಲೂಕು ಕೇಂದ್ರದ ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ಕೊಡಿಸಿದರು. ಪಾಂಡವಪುರ ಘಟಕದಿಂದ ಬಸ್‌ ತರಿಸಿ ವಿದ್ಯಾರ್ಥಿಗಳು ಮತ್ತು ಶಿಕ್ಷಕರನ್ನು ಕಳುಹಿಸಿಕೊಡಲಾಯಿತು. ಹಗರಿ ಬೊಮ್ಮನಹಳ್ಳಿ ತಾಲ್ಲೂಕಿನ ವಿವಿಧ ಶಾಲೆಗಳ ವಿದ್ಯಾರ್ಥಿಗಳನ್ನು ಮಂಡ್ಯ ಸಾರಿಗೆ ಇಲಾಖೆಯ ಟ್ರಾಫಿಕ್‌ ಕಂಟ್ರೋಲರ್‌ ದೀಪಕ್‌ ಮತ್ತು ಶ್ರೀನಿವಾಸ್‌ಮೂರ್ತಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.