ADVERTISEMENT

ಏಳು ತಿಂಗಳ ನಂತರ ಮಂಡ್ಯಕ್ಕೆ ಬಂದ ಅಂಬರೀಷ್‌

​ಪ್ರಜಾವಾಣಿ ವಾರ್ತೆ
Published 24 ಅಕ್ಟೋಬರ್ 2017, 8:48 IST
Last Updated 24 ಅಕ್ಟೋಬರ್ 2017, 8:48 IST
ಮಂಡ್ಯದ ಮರೀಗೌಡ ಬಡಾವಣೆಯಲ್ಲಿ ಶಾಸಕ ಅಂಬರೀಷ್‌ ಮನೆಮನೆಗೆ ಕಾಂಗ್ರೆಸ್‌ ಅಭಿಯಾನದಲ್ಲಿ ಪಾಲ್ಗೊಂಡು ಕಾರ್ಯಕರ್ತರೊಂದಿಗೆ ಸಂವಾದ ನಡೆಸಿದರು
ಮಂಡ್ಯದ ಮರೀಗೌಡ ಬಡಾವಣೆಯಲ್ಲಿ ಶಾಸಕ ಅಂಬರೀಷ್‌ ಮನೆಮನೆಗೆ ಕಾಂಗ್ರೆಸ್‌ ಅಭಿಯಾನದಲ್ಲಿ ಪಾಲ್ಗೊಂಡು ಕಾರ್ಯಕರ್ತರೊಂದಿಗೆ ಸಂವಾದ ನಡೆಸಿದರು   

ಮಂಡ್ಯ: ಏಳು ತಿಂಗಳ ನಂತರ ಸೋಮವಾರ ಕ್ಷೇತ್ರಕ್ಕೆ ಬಂದ ಶಾಸಕ ಅಂಬರೀಷ್‌ ಅವರನ್ನು ಕಾಂಗ್ರೆಸ್‌ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಬಹಳ ವೈಭವದಿಂದ ಸ್ವಾಗತಿಸಿದರು

ಮನೆಮನೆಗೆ ಕಾಂಗ್ರೆಸ್‌ ಅಭಿಯಾನದ ಅಂಗವಾಗಿ ಕ್ಷೇತ್ರಕ್ಕೆ ಬಂದ ಅಂಬರೀಷ್‌ ಅವರನ್ನು ಸ್ವಾಗತಿಸಲು ಅಭಿಮಾನಿಗಳು ನಗರದ ವಿವಿಧೆಡೆ ಕಟೌಟ್‌, ಫ್ಲೆಕ್ಸ್‌ ಅಳವಡಿಸಿದ್ದರು. ಮರೀಗೌಡ ಬಡಾವಣೆಯಲ್ಲಿ ನಡೆದ ಕಾಂಗ್ರೆಸ್‌ ಅಭಿಯಾನಕ್ಕೆ ಅವರು ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು ‘ಕಳೆದ ಆರೇಳು ತಿಂಗಳಿಂದ ಅನಾರೋಗ್ಯದ ಸಮಸ್ಯೆ ಇದ್ದ ಕಾರಣ ಕ್ಷೇತ್ರಕ್ಕೆ ಬರಲು ಸಾಧ್ಯವಾಗಿಲ್ಲ. ಹಾಗಾಗಿ ಇದಕ್ಕೆ ಬೇರೆ ಅರ್ಥ ಕಲ್ಪಿಸುವುದು ಬೇಡ. ಈ ಬಾರಿಯೂ ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬರಲು ಜನರು ಆಶೀರ್ವದಿಸಬೇಕು. ಮನೆಮನೆಗೆ ಕಾಂಗ್ರೆಸ್‌ ಅಭಿಯಾನದ ಮೂಲಕ ರಾಜ್ಯ ಸರ್ಕಾರದ ಜನಪರ ಯೋಜನೆಗಳ ಬಗ್ಗೆ ತಿಳಿಸುವ ಕಾರ್ಯ ಪ್ರಾರಂಭವಾಗಿದ್ದು, ಅದು ಯಶಸ್ವಿಗೊಳಿಸಲು ಕಾರ್ಯಕರ್ತರು ಸಮರ್ಪಕವಾಗಿ ಕೆಲಸ ಮಾಡಬೇಕು’ಎಂದು ಹೇಳಿದರು.

ADVERTISEMENT

‘ಕಾಂಗ್ರೆಸ್‌ ಸರ್ಕಾರ ಎಲ್ಲಾ ವರ್ಗದ ಜನರಿಗೆ ಹಲವು ಜನಪರ ಯೋಜನೆಗಳನ್ನು ಜಾರಿಗೊಳಿಸಿದೆ. ಸರ್ಕಾರ ಮಾಡಿದ ಎಲ್ಲಾ ಸಾಧನೆಗಳನ್ನು ಕಾರ್ಯಕರ್ತರು ಮನೆಮೆನೆಗೆ ತೆರಳಿ ಪ್ರಚಾರ ಮಾಡುತ್ತಿದ್ದಾರೆ’ ಎಂದು ಹೇಳಿದರು.

ಮುಖಂಡರಾದ ಅಮರಾವತಿ ಚಂದ್ರಶೇಖರ್‌, ನಗಾರಾಜು, ಮಹೇಶ್‌, ಅನಿಲ್‌ಕುಮಾರ್‌, ಲೋಕೇಶ್‌, ಅಂಜನಾ ಶ್ರೀಕಾಂತ್‌, ಮುನಾವರ್‌ಖಾನ್‌, ಉಮ್ಮಡಹಳ್ಳಿ ಶಿವಪ್ಪ, ಬೇಲೂರು ಸೋಮಶೇಖರ್‌, ಕಾರ್ತಿಕ್‌ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.