ಮಂಡ್ಯ: ಗ್ರಾಮೀಣ ಭಾಗದಲ್ಲಿ ಸ್ಮಶಾನ ಮತ್ತು ಕೆರೆ ಪ್ರದೇಶವನ್ನು ಒತ್ತುವರಿ ಮಾಡಿ ಕೊಂಡಿರುವ ರೈತರು ಸ್ವಯಂ ಪ್ರೇರಿತವಾಗಿ ಅದನ್ನು ತೆರವುಗೊಳಿಸಿ ಸಹಕರಿಸಬೇಕು ಎಂದು ತಹಶೀಲ್ದಾರ್ ರಾಜೇಂದ್ರ ಪ್ರಸಾದ್ ಮನವಿ ಮಾಡಿದ್ದಾರೆ.
ತಾಲೂಕು ಆಡಳಿತ ತಾಲೂಕಿನ ಬೇವಿನಹಳ್ಳಿ ಗ್ರಾಮದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಜನಸ್ಪಂದನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ,ಒತ್ತುವರಿ ತೆರವುಗೊಳಿಸುವ ವಿಷಯದಲ್ಲಿ ತಾಲ್ಲೂಕು ಆಡಳಿತ ಈ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಂಡಿದೆ. ಈ ವಿಷಯದಲ್ಲಿ ಕಾನೂನು ಕ್ರಮವನ್ನು ಕೈಗೊಳ್ಳಲಾಗುವುದು ಎಂದರು.
ಅಧ್ಯಕ್ಷತೆ ವಹಿಸಿದ್ದ ಶಾಸಕ ಎ.ಬಿ.ರಮೇಶ್‌ಬಾಬು ಅವರು, ಜನರ ಅನುಕೂಲಕ್ಕಾಗಿ ಸರಕಾರ ಹಲವು ಜನಪರ ಯೋಜನೆ ಜಾರಿ ಮಾಡಿದೆ. ಗ್ರಾಮೀಣ ಪ್ರದೇಶದ ಪ್ರತಿಯೊಬ್ಬರಿಗೂ ಯೋಜನೆ ದೊರಕುವಂತಾಗಲು ಅಧಿಕಾರಿಗಳು ಕೆಲಸ ಮಾಡಬೇಕು ಎಂದರು. ಜಿ.ಪಂ. ಸದಸ್ಯರಾದ ಚಂದ್ರಕಲಾ,ಜಯಕಾಂತಾ, ಕಂಠಿ ಸುರೇಶ್‌ಮತ್ತುವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.