ADVERTISEMENT

ಕಬ್ಬಿನ ಗದ್ದೆಗೆ ಉರುಳಿದ ಬಸ್: 10 ಮಂದಿಗೆ ಗಾಯ

​ಪ್ರಜಾವಾಣಿ ವಾರ್ತೆ
Published 16 ಅಕ್ಟೋಬರ್ 2012, 4:45 IST
Last Updated 16 ಅಕ್ಟೋಬರ್ 2012, 4:45 IST

ಮಂಡ್ಯ: ತಾಲ್ಲೂಕಿನ ಆಲಕೆರೆ ಗ್ರಾಮದ ಸಮೀಪ ಸೋಮವಾರ ಖಾಸಗಿ ಬಸ್ಸೊಂದು ಕಬ್ಬಿನ ಗದ್ದೆಗೆ ಉರುಳಿ ಹತ್ತಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ನಡೆದಿದೆ.

ಮಂಡ್ಯದಿಂದ ಕೀಲಾರ-ಆಲಕೆರೆ ಮಾರ್ಗವಾಗಿ ಬೆಸಗರಹಳ್ಳಿಗೆ ಹೋಗುತ್ತಿದ್ದ ಸಂದರ್ಭದಲ್ಲಿ ಈ ಅವಘಡ ಸಂಭವಿಸಿದೆ. ವಿಷಯ ತಿಳಿಯುತ್ತಿದ್ದಂತೆಯೇ ಘಟನಾ ಸ್ಥಳಕ್ಕೆ ಆಗಮಿಸಿದ ಆಲಕೆರೆ ಗ್ರಾಮಸ್ಥರು, ಬಸ್ಸಿನ ಗಾಜು ಒಡೆದು ಪ್ರಯಾಣಿಕರನ್ನು ಹೊರಗಡೆ ಎಳೆದುಕೊಂಡರು. ನಂತರ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಕೆರಗೋಡು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಿರಿದಾಗಿರುವ ರಸ್ತೆಯಲ್ಲಿ ಟ್ರ್ಯಾಕ್ಟರ್‌ವೊಂದಕ್ಕೆ ಕಬ್ಬು ತುಂಬಲಾಗುತ್ತಿತ್ತು. ಅದರ ಪಕ್ಕದಿಂದಲೇ ವಾಹನ ಸಾಗಲು ಮುಂದಾದಾಗ ಚಾಲಕನ ನಿಯಂತ್ರಣ ತಪ್ಪಿ ವಾಹನ ಕೆಳಗುರುಳಿತು.

ಆಗ್ರಹ: ಕೀಲಾರ-ಆಲಕೆರೆ-ಮುದುಂಗೆರೆ ಗ್ರಾಮಗಳ ನಡುವಿನ ರಸ್ತೆ ತೀರ ಹದಗೆಟ್ಟಿದ್ದು, ಹಲವಾರು ಹೊಂಡಗಳು ಬಿದ್ದಿವೆ. ರಸ್ತೆಯನ್ನು ಅಗಲೀಕರಣಗೊಳಿಸಿ ಕೂಡಲೇ ದುರಸ್ತಿ ಮಾಡಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.