ADVERTISEMENT

ಕಾರ್ಮಿಕ ವಿರೋಧಿ ನೀತಿ: ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 3 ಏಪ್ರಿಲ್ 2018, 12:52 IST
Last Updated 3 ಏಪ್ರಿಲ್ 2018, 12:52 IST

ಮಂಡ್ಯ: ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರಕಾರ್ಮಿಕ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ಸಿಐಟಿಯು ಕಾರ್ಯಕರ್ತರು ಸೋಮವಾರ ಸಿಲ್ವರ್‌ ಜ್ಯೂಬಿಲಿ ಉದ್ಯಾನದ ಬಳಿ ಪ್ರತಿಭಟನೆ ನಡೆಸಿದರು. ಕೇಂದ್ರ ಸರ್ಕಾರ ಮಾರ್ಚ್‌ 16ರಂದು ಬಜೆಟ್ ಅನುಮೋದನೆಯ ಭಾಗವಾಗಿ ಕೈಗಾರಿಕೆ ಮಾಲೀಕರಿಗೆ ನಿಗದಿತ ಅವಧಿಗಾಗಿ ಮಾತ್ರ ಕಾರ್ಮಿಕರ ನೇಮಕಾತಿ ಮಾಡಿಕೊಳ್ಳುವಂತೆ ಮುಕ್ತ ಅವಕಾಶ ನೀಡಿ ದುಡಿಯುವ ವರ್ಗಕ್ಕೆ ದ್ರೋಹ ಮಾಡಿದೆ.ಕಾರ್ಮಿಕ ವಿರೋಧಿ ಆಡಳಿತ ಮಾಡುತ್ತಿರುವ ಕೇಂದ್ರ ಸರ್ಕಾರ ಬಂಡವಾಳಗಾರರು ಹಾಗೂ ಕಾರ್ಪೊರೇಟ್ ವ್ಯವಹಾರ ಮಾಡುವವರ ಪರವಾಗಿ ಆಡಳಿತ ನಡೆಸುತ್ತಿದೆ. ಸರ್ಕಾರ ಬಡವರ ಪರವಾಗಿ ಕೆಲಸ ಮಾಡಿ ದುಡಿಯುವ ಕೈಗಳಿಗೆ ಉದ್ಯೋಗ ನೀಡಬೇಕು. ಆದರೆ ಉದ್ಯೋಗ ಸೃಷ್ಟಿ ಮಾಡುವುದಾಗಿ ಹೇಳಿಕೊಂಡು ಅಧಿಕಾರಕ್ಕೆ ಬಂದಿರುವ ಕೇಂದ್ರ ಸರ್ಕಾರ ಕಾರ್ಮಿಕರಿಗೆಹಾಗೂ ಯುವ ಜನರಿಗೆ ಮೋಸ ಮಾಡುತ್ತದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಕೇಂದ್ರ ಸರ್ಕಾರದ ನಿಗದಿತ ಅವಧಿಯ ಕಾರ್ಮಿಕರ ನೇಮಕಾತಿ ಮಾಡಿಕೊಂಡರೆ ಕಾರ್ಮಿಕರು ಇಎಸ್‌ಐ, ಪಿಎಫ್ ಹಾಗೂ ಕಾರ್ಖಾನೆಗಳ ಕೆಲವು ಯೋಜನೆಗಳಿಂದ ವಂಚಿತರಾಗುತ್ತಾರೆ. ನಿವೃತ್ತಿ ಅಂಚಿಗೆ ಬಂದಾಗ ಬೀದಿಗೆ ಬೀಳಬೇಕಾಗುತ್ತದೆ. ಪ್ರಧಾನಿ ನರೇಂದ್ರ ಮೋದಿ ಕಾಯಂ ದುಡಿಮೆ, ಕಾರ್ಮಿಕರ ರಕ್ಷಣೆ, ಕನಿಷ್ಠ ವೇತನ ಹಾಗೂ ಕಾರ್ಮಿಕ ಅಭಿವೃದ್ಧಿಗಾಗಿ ಯೋಜನೆ ರೂಪಿಸಬೇಕು. ಕಾರ್ಮಿಕರ ಕ್ಷೇಮಾಭಿವೃದ್ಧಿ ದೃಷ್ಟಿಯಲ್ಲಿ ಇಟ್ಟುಕೊಂಡು ನಿಗದಿತ ಅವಧಿಯ ಕಾರ್ಮಿಕರ ನೇಮಕಾತಿ ಆದೇಶವನ್ನು ರದ್ದು ಮಾಡಬೇಕು ಎಂದು ಒತ್ತಾಯಿಸಿದರು.

ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಿ.ಕುಮಾರಿ, ಖಜಾಂಚಿ ಎಂ.ಶಿವಕುಮಾರ್, ಸದಸ್ಯರಾದ ಪುಟ್ಟಮ್ಮ, ಚಂದ್ರಶೇಖರ್, ಎನ್.ರವೀಂದ್ರ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.