ADVERTISEMENT

ಕೆಆರ್‌ಎಸ್‌ನಲ್ಲಿ 92 ಅಡಿ ನೀರು

​ಪ್ರಜಾವಾಣಿ ವಾರ್ತೆ
Published 10 ಆಗಸ್ಟ್ 2012, 5:45 IST
Last Updated 10 ಆಗಸ್ಟ್ 2012, 5:45 IST
ಕೆಆರ್‌ಎಸ್‌ನಲ್ಲಿ 92 ಅಡಿ ನೀರು
ಕೆಆರ್‌ಎಸ್‌ನಲ್ಲಿ 92 ಅಡಿ ನೀರು   

ಶ್ರೀರಂಗಪಟ್ಟಣ: ತಾಲ್ಲೂಕಿನ ಪ್ರಸಿದ್ಧ ಕೆಆರ್‌ಎಸ್ ಜಲಾಶಯದಲ್ಲಿ ಗುರುವಾರ ಸಂಜೆ ವೇಳೆಗೆ 92.30 ಅಡಿಗಳಷ್ಟು ನೀರು ಸಂಗ್ರಹವಾಗಿದೆ.

ಜಲಾಶಯಕ್ಕೆ 23,823 ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಜಲಾಶಯದಿಂದ 522 ಕ್ಯೂಸೆಕ್ ನೀರನ್ನು ಹೊರ ಬಿಡಲಾಗುತ್ತಿದೆ. ಬುಧವಾರ ಸಂಜೆ 31,662 ಕ್ಯೂಸೆಕ್ ನೀರು ಹರಿದು ಬರುತ್ತಿತ್ತು. ಗುರುವಾರ ಮುಂಜಾನೆಯಿಂದ ಒಳ ಹರಿನ ಪ್ರಮಾಣ ಇಳಿಮುಖವಾಗುತ್ತಿದೆ. ಗುರುವಾರ ಬೆಳಿಗ್ಗೆ 27 ಸಾವಿರ ಕ್ಯೂಸೆಕ್ ಇದ್ದ ಒಳ ಹರಿವಿನ ಪ್ರಮಾಣ ಸಂಜೆ ವೇಳೆ 23,823 ಕ್ಯೂಸೆಕ್‌ಗೆ ಇಳಿದಿದೆ. 41 ಟಿಎಂಸಿ ಸಾಮರ್ಥ್ಯದ ಜಲಾಶಯದಲ್ಲಿ ಸದ್ಯ 9 ಟಿಎಂಸಿ ಮಾತ್ರ ನೀರಿನ ಸಂಗ್ರಹ ಇದೆ ಎಂದು ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು `ಪ್ರಜಾವಾಣಿ~ಗೆ ತಿಳಿಸಿದ್ದಾರೆ. 

ಕಳೆದ ವರ್ಷ ಇದೇ ದಿನ ಜಲಾಶಯದಲ್ಲಿ 122 ಅಡಿಗಳಷ್ಟು ನೀರು ಇದ್ದು, 27 ಸಾವಿರ ಕ್ಯೂಸೆಕ್ ಒಳ ಹರಿವು ಇತ್ತು. ಜಲಾಶಯದಿಂದ 20,538 ಕ್ಯೂಸೆಕ್ ನೀರನ್ನು ಹೊರ ಬಿಡಲಾಗುತ್ತಿತ್ತು. ಕೊಡಗು ಪ್ರದೇಶದಲ್ಲಿ ಮಳೆಯ ಪ್ರಮಾಣ ಕ್ಷೀಣಿಸಿರುವುದರಿಂದ ಕೆಆರ್‌ಎಸ್ ಜಲಾಶಯಕ್ಕೆ ಹರಿದು ಬರುವ ನೀರಿನ ಪ್ರಮಾಣ ಕಡಿಮೆಯಾಗುತ್ತಿದೆ ಎಂದು ಅವರು ಹೇಳಿದ್ದಾರೆ.
 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.