ADVERTISEMENT

ಕೌಟುಂಬಿಕ ದೌರ್ಜನ್ಯ ವಿರೋಧಿಸಿ ಜಾಥಾ

​ಪ್ರಜಾವಾಣಿ ವಾರ್ತೆ
Published 21 ಡಿಸೆಂಬರ್ 2012, 6:51 IST
Last Updated 21 ಡಿಸೆಂಬರ್ 2012, 6:51 IST

ಮದ್ದೂರು: ಸಮೀಪದ ಬೆಸಗರಹಳ್ಳಿಯಲ್ಲಿ ಒಡಿಪಿ ಸಂಸ್ಥೆ, ಕರ್ನಾಟಕ ಜಾಗೃತಿ ವೇದಿಕೆ ಹಾಗೂ ಸುಗ್ರಾಮ ಒಕ್ಕೂಟದ ನೇತೃತ್ವದಲ್ಲಿ ಗುರುವಾರ ಕೌಟುಂಬಿಕ ದೌರ್ಜನ್ಯದ ವಿರುದ್ಧ ಜನ ಜಾಗೃತಿ ಜಾಥಾ ನಡೆಯಿತು.

ಗ್ರಾಮ ಪಂಚಾಯಿತಿ ಅಧ್ಯಕ್ಷೆ ಇಂದಿರಾ ಪುಟ್ಟಸ್ವಾಮಿ ಜಾಥಾಕ್ಕೆ ಚಾಲನೆ ನೀಡಿದರು. ಇಂದು ಮಹಿಳೆ ಎಲ್ಲಾ ಕ್ಷೇತ್ರಗಳ್ಲ್ಲಲೂ ಉತ್ತಮ ಸಾಧನೆ ಮಾಡ್ದ್ದಿದಾಳೆ. ಆದರೆ ಇಂದಿಗೂ ಕೌಟುಂಬಿಕ ದೌರ್ಜನ್ಯಗಳಿಂದ ಆಕೆಗೆ ಮುಕ್ತಿ ದೊರಕಿಲ್ಲ. ಕೌಟುಂಬಿಕ ದೌರ್ಜನ್ಯ ತಡೆ ಕಾಯಿದೆ ಎಂಬ ಅಸ್ತ್ರ ಅವಳ ಕೈಯಲ್ಲಿದ್ದರೂ, ಸಮಾಜದ ಕಟ್ಟುಪಾಡು, ಸಂಸಾರದ ಬಂಧ ಆಕೆಯನ್ನು ನಿಶ್ಯಕ್ತಗೊಳಿಸಿದೆ ಎಂದು ಅಭಿಪ್ರಾಯಪಟ್ಟರು.

ಮಹಿಳೆಯರ ಮೇಲೆ ಆಗುವ ದೌರ್ಜನ್ಯದ ವಿರುದ್ಧ ಮಹಿಳೆಯರು ಸಂಘಟಿತರಾಗಿ ಹೋರಾಟ ನಡೆಸುವುದೇ ಇದಕ್ಕೆ ಪರಿಹಾರ ಎಂದರು.ಬೆಸಗರಹಳ್ಳಿಯ ಪ್ರಮುಖ ಬೀದಿಗಳಲ್ಲಿ  ಸ್ತ್ರೀ ಶಕ್ತಿ ಸಂಘಟನೆಗಳ ಸದಸ್ಯರು ಹಾಗೂ ನೂರಾರು ಶಾಲಾ ಮಕ್ಕಳು ಕೌಟುಂಬಿಕ ದೌರ್ಜನ್ಯದ ವಿರುದ್ಧ ವಿವಿಧ ಘೋಷಣೆಗಳನ್ನು ಕೂಗುತ್ತ ಜಾಥಾ ನಡೆಸಿದರು.

ಒಡಿಪಿ ಯೋಜನಾಧಿಕಾರಿ ಯಮುನಾ, ಕರ್ನಾಟಕ ಜಾಗೃತಿ ವೇದಿಕೆ ಕಾರ್ಯದರ್ಶಿ ಜಯಶೀಲಾ, ಸುಗ್ರಾಮ ಒಕ್ಕೂಟದ ಅಧ್ಯಕ್ಷೆ ಲಕ್ಷ್ಮಮ್ಮ, ಗ್ರಾಮ ಪಂಚಾಯಿತಿ ಪಿಡಿಒ ಸುಮಲತಾ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.