ಕೃಷ್ಣರಾಜಪೇಟೆ: ಉತ್ಪಾದಕರು ಉತ್ತಮ ಗುಣಮಟ್ಟದ ಹಾಲು ಪೂರೈಕೆ ಮಾಡಬೇಕು ಎಂದು ಮನ್‌ಮುಲ್ ಅಧ್ಯಕ್ಷ ಎಂ.ಬಿ.ಹರೀಶ್ ಮನವಿ ಮಾಡಿದರು.ತಾಲ್ಲೂಕು ಪಂಚಾಯ್ತಿ ಕಚೇರಿ ಆವರಣದಲ್ಲಿರುವ ಜಿಲ್ಲಾ ಹಾಲು ಒಕ್ಕೂಟದ ಉಪಕಚೇರಿಯಲ್ಲಿ ಗುರುವಾರ ನಡೆದ ಸಮಾರಂಭದಲ್ಲಿ `ಜನಶ್ರೀ~ ವಿಮಾ ಚೆಕ್ ವಿತರಿಸಿ ಮಾತನಾಡಿದರು.
ಒಕ್ಕೂಟವು ಹಾಲು ಉತ್ಪಾದಕರ ಕುಟುಂಬದ ಅನುಕೂಲಕ್ಕಾಗಿ ಹಲವು ಯೋಜನೆ ರೂಪಿಸಿದೆ. ಮಕ್ಕಳ ಉನ್ನತ ಶಿಕ್ಷಣ, ರಾಸು ಖರೀದಿ ಸೇರಿದಂತೆ ವಿವಿಧ ಯೋಜನೆಗಳಿಗೆ ಆರ್ಥಿಕ ಸೌಲಭ್ಯ ನೀಡಲು ಕ್ರಮ ವಹಿಸಲಾಗಿದೆ. ದೇಶದ ಹೆಮ್ಮೆಯ ಸಹಕಾರಿ ಸಂಸ್ಥೆಗಳಲ್ಲಿ ಒಂದಾಗಿರುವ ಮನ್‌ಮುಲ್ ತಯಾರಿಸಿದ ಉತ್ಪನ್ನಕ್ಕೆ ತಿರುಪತಿ ಸೇರಿದಂತೆ ಹೊರ ರಾಜ್ಯಗಳಲ್ಲೂ ಬೇಡಿಕೆ ಇದೆ ಎಂದರು.
ರೈತರಿಂದಲೇ ಹಾಲು ಒಕ್ಕೂಟ ಅಭಿವೃದ್ಧಿಯಾಗಬೇಕಾಗಿದೆ. ಅದಕ್ಕಾಗಿ ಎಲ್ಲರೂ ಕೈಜೋಡಿಸಬೇಕು ಎಂದು ಹೇಳಿದ ಅವರು, ಮುಂದಿನ ದಿನಗಳಲ್ಲಿ ಇನ್ನೂ ಹಲವಾರು ಸೌಲಭ್ಯಗಳನ್ನು ನೀಡಲಾಗುವುದ ಎಂದು ತಿಳಿಸಿದರು.
ಒಕ್ಕೂಟದ ಮಾಜಿ ಅಧ್ಯಕ್ಷ ಚನ್ನಿಂಗೇಗೌಡ, ಅಧಿಕಾರಿಗಳಾದ ಪೂವಯ್ಯ, ರವೀಂದ್ರನಾಥ್, ಸಿದ್ದೇಗೌಡ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.