ADVERTISEMENT

ಚುನಾವಣೆ ಗೆಲುವು; ಬಿಜೆಪಿ ಸಂಭ್ರಮಾಚರಣೆ

​ಪ್ರಜಾವಾಣಿ ವಾರ್ತೆ
Published 19 ಡಿಸೆಂಬರ್ 2017, 5:29 IST
Last Updated 19 ಡಿಸೆಂಬರ್ 2017, 5:29 IST

ಮಂಡ್ಯ: ಗುಜರಾತ್‌ ಮತ್ತು ಹಿಮಾಚಲ ಪ್ರದೇಶದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲುವು ಹಿನ್ನೆಲೆಯಲ್ಲಿ ಸೋಮವಾರ ಸಂಜಯ ಸರ್ಕಲ್‌ನಲ್ಲಿ ಬಿಜೆಪಿ ಕಾರ್ಯಕರ್ತರು ಸಿಹಿ ಹಂಚಿ ವಿಜಯೋತ್ಸವ ಆಚರಿಸಿದರು.

ಎರಡೂ ರಾಜ್ಯಗಳ ಫಲಿತಾಂಶ ಮುಂದೆ ರಾಜ್ಯ ವಿಧಾನಸಭೆ ಚುನಾವಣೆಗೆ ದಿಕ್ಸೂಚಿಯಾಗಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ನೀಡಿದ ಜನಪರ ಯೋಜನೆಗಳಿಂದಾಗಿ ಜನರು ಬಿಜೆಪಿಯನ್ನು ಗೆಲ್ಲಿಸಿದ್ದಾರೆ ಎಂದು ಮುಖಂಡರು ಹೇಳಿದರು.

ಕರ್ನಾಟಕದಲ್ಲೂ ಬಿಜೆಪಿ ಅಭೂತಪೂರ್ವ ಜಯಗಳಿಸುವ ನಿರೀಕ್ಷೆ ಇದೆ. ಕಾಂಗ್ರೆಸ್‌ ಮುಖಂಡರಿಗೆ ಸೋಲುವ ಭೀತಿ ಇದ್ದು ಇವಿಎಂ ಬೇಡ, ಮತಪತ್ರ ಬಳಸಬೇಕು ಎಂಬ ಹೊಸ ರಾಗ ಆರಂಭಿಸಿದ್ದಾರೆ ಎಂದು ಮುಖಂಡರು ಆರೋಪಿಸಿದರು.

ADVERTISEMENT

ಈಚೆಗೆ ರಾಜ್ಯದಲ್ಲಿ ನಡೆದ ಎರಡು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಪಕ್ಷಗಳು ಮೈತ್ರಿ ಮಾಡಿಕೊಂಡು ಜಯಗಳಿಸಿದವು. ಇದು ರಾಜ್ಯದ ಮುಂಬರುವ ಚುನಾವಣೆಗೆ ದಿಕ್ಸೂಚಿ ಆಗಲಿದೆ ಎಂದು ಬಣ್ಣಿಸಿದವು. ಆದರೆ ಈಗ ಗುಜರಾತ್‌ ಹಾಗೂ ಹಿಮಾಚಲ ಪ್ರದೇಶದ ಚುನಾವಣಾ ಫಲಿತಾಂಶ ಕರ್ನಾಟಕದ ಚುನಾವಣೆಗೆ ದಿಕ್ಸೂಚಿ ಆಗಲಿದೆ ಎಂದು ಪ್ರತಿಪಾದಿಸಿದರು.

ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಪಕ್ಷಗಳು ಒಂದೇ ನಾಣ್ಯದ ಎರಡು ಮುಖವಿದ್ದಂತೆ. ಕಾಂಗ್ರೆಸ್‌ ದುರಾಡಳಿತದಿಂದಾಗಿ ದೇಶದ ಹಲವು ರಾಜ್ಯಗಳಲ್ಲಿ ಅಧಿಕಾರ ಕಳೆದುಕೊಂಡಿದೆ. ಅಂತೆಯೇ 2018ರ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರ ಕಳೆದುಕೊಳ್ಳಲಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಕೆ.ನಾಗಣ್ಣಗೌಡ, ನಗರ ಘಟಕದ ಅಧ್ಯಕ್ಷ ಎಚ್‌.ಆರ್‌.ಅರವಿಂದ್‌, ಸಿದ್ದರಾಜುಗೌಡ, ಎಂ.ಸಿ.ಕಾಂತರಾಜು, ಜಿ.ಎಂ.ರವೀಂದ್ರ, ಎಚ್‌.ಆರ್‌.ಅಶೋಕ್‌ ಕುಮಾರ್‌, ಎಂ.ಸಿ.ವರದರಾಜು, ಶಿವಕುಮಾರ್‌ ಆರಾಧ್ಯ, ಕೆ.ಎಸ್‌.ಚಂದ್ರಶೇಖರ್‌,ಪುಟ್ಟಮ್ಮ, ಎಂ.ಕೆ.ರಮೇಶ್‌, ಎಂ.ಬಿ.ರಮೇಶ್‌ ಹಾಜರಿದ್ದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.