ADVERTISEMENT

ಜಯಂತ್ಯುತ್ಸವ ಇಂದು

​ಪ್ರಜಾವಾಣಿ ವಾರ್ತೆ
Published 4 ಜೂನ್ 2013, 6:52 IST
Last Updated 4 ಜೂನ್ 2013, 6:52 IST

ಮಂಡ್ಯ: ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತ್ಯುತ್ಸವವನ್ನು ಮಂಗಳವಾರ (ಜೂನ್ 4) ಬೆಳಿಗ್ಗೆ 11 ಗಂಟೆಗೆ ನಗರದ ಕಲಾಮಂದಿರದಲ್ಲಿ ಏರ್ಪಡಿಸಲಾಗಿದೆ.

ವಸತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಎಚ್.ಅಂಬರೀಶ್ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದು, ಕರ್ನಾಟಕ ಸಂಘದ ಅಧ್ಯಕ್ಷ ಪ್ರೊ. ಜಯಪ್ರಕಾಶ್‌ಗೌಡ ಉಪನ್ಯಾಸ ನೀಡಲಿದ್ದಾರೆ. ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಶಸ್ತಿ ಪುರಸ್ಕೃತ, ಸಮಾಜ ಸೇವಕ              ಎಸ್. ಹೊನ್ನಯ್ಯ ಅವರನ್ನು ಸನ್ಮಾನಿಸಿ ಗೌರವಿಸಲಾಗುತ್ತದೆ.

ಬೆಳಿಗ್ಗೆ 9 ಗಂಟೆಗೆ ಜಿಲ್ಲಾಧಿಕಾರಿ ಕಚೇರಿ ಆವರಣದಿಂದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಅಲಂಕೃತ ಭಾವಚಿತ್ರದ ಮೆರವಣಿಗೆ ನಗರದ ಪ್ರಮುಖ ಬೀದಿಗಳಲ್ಲಿ ನಡೆಯಲಿದ್ದು, ಜಿಲ್ಲಾಧಿಕಾರಿ ಬಿ.ಎನ್.ಕೃಷ್ಣಯ್ಯ ಚಾಲನೆ ನೀಡಲಿದ್ದಾರೆ.  ಸಂಜೆ 5 ಗಂಟೆಗೆ ಕಲಾಮಂದಿರದಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು, ಸುಗಮ ಸಂಗೀತ ಹಾಗೂ ನೃತ್ಯ ರೂಪಕಗಳು ನಡೆಯಲಿದೆ.

ಜಾಗೃತಿ ಜಾಥಾ: ತಾಲ್ಲೂಕಿನ ಸೂನಗಹಳ್ಳಿ ಗ್ರಾಮ ಪಂಚಾಯಿತಿ ವತಿಯಿಂದ ಡೆಂಗೆ ರೋಗದ ಬಗೆಗೆ ಜನರಲ್ಲಿ ಅರಿವು ಮೂಡಿಸಲು ಜಾಗೃತಿ ಜಾಥಾವನ್ನು ಇತ್ತೀಚೆಗೆ ಏರ್ಪಡಿಸಲಾಗಿತ್ತು. ತಾಲ್ಲೂಕು ಪಂಚಾಯಿತಿ ಸದಸ್ಯ ಎಸ್.ಕೆ. ಪ್ರಕಾಶ್ ಜಾಥಾಗೆ ಚಾಲನೆ ನೀಡಿದರು.  ಗ್ರಾಮ ಪಂಚಾಯಿತಿ ಅಧ್ಯಕ್ಷೆ ಎಂ.ಎಲ್. ತುಂಗಭದ್ರಾ, ಡಾ. ಬೆಟ್ಟಸ್ವಾಮಿ, ಡಾ. ಲಕ್ಷ್ಮೀಶ್, ಪಿಡಿಒ ಬಿ.ವಿ. ಸೋಮಶೇಖರ್, ಗ್ರಾಮ ಪಂಚಾಯಿತಿ ಸದಸ್ಯರು, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆರು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.