ADVERTISEMENT

ಜಿಲ್ಲಾ ಆಸ್ಪತ್ರೆ ಅವ್ಯವಸ್ಥೆ: ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 1 ಜೂನ್ 2011, 10:35 IST
Last Updated 1 ಜೂನ್ 2011, 10:35 IST

ಮಂಡ್ಯ: ಜಿಲ್ಲಾ ಆಸ್ಪತ್ರೆಯಲ್ಲಿ ಇರುವ ಅವ್ಯವಸ್ಥೆ ಖಂಡಿಸಿ ಮತ್ತು ರೋಗಿಗಳಿಗೆ ಆಗುತ್ತಿರುವ ಅನಾನುಕೂಲ ಸರಿಪಡಿಸ ಬೇಕು ಎಂದು ಆಗ್ರಹಪಡಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ಮಂಗಳವಾರ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಮಿಮ್ಸ ಮತ್ತು ಆಸ್ಪತ್ರೆ ಮುಖ್ಯಸ್ಥರ ನಿರ್ಲಕ್ಷ್ಯತನದ ಪರಿಣಾಮ ಈಚಿನ ದಿನಗಳಲ್ಲಿ  ಸಾರ್ವಜನಿಕರಿಗೆ ತೀರಾ ತೊಂದರೆ ಆಗುತ್ತಿದೆ. ಈ ಬಗೆಗೆ ಸಂಬಂಧಿಸಿದ ಮುಖ್ಯಸ್ಥರ ಗಮನಕ್ಕೆ ತಂದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದರು.

ಸಂಜೆ ಮತ್ತು ರಾತ್ರಿಯ ವೇಳೆ  ರೋಗಿಯ
ಸಂಬಂಧಿಕರನ್ನು ಆಸ್ಪತ್ರೆಯ ಒಳಗೆ ಬಿಡಲು ಸಿಬ್ಬಂದಿ ಲಂಚ ಪಡೆಯುವ ನಿದರ್ಶನವು ಇದೆ. ಹೆಚ್ಚಿನ ಸಂದರ್ಭದಲ್ಲಿ ಸಿಬ್ಬಂದಿಗಳು ಹಾಜರಿಲ್ಲ ದೆಯೂ ಸಮಸ್ಯೆಯಾಗುತ್ತಿದೆ ಎಂದು ದೂರಿದರು.

ಈ ಕುರಿತು ಆಸ್ಪತ್ರೆಯ ಅಧೀಕ್ಷಕರ ಕಚೇರಿಗೆ ಮನವಿ ನೀಡಿದ ಜಿಲ್ಲಾ ಘಟಕದ ಅಧ್ಯಕ್ಷ ಉಮಾಶಂಕರ್, ಈ ಲೋಪ ಗಳನ್ನು ಸರಿಪಡಿಸಲು ಆಡಳಿತ ಮುಖ್ಯ ಸ್ಥರು ಕ್ರಮ ಜರುಗಿಸಬೇಕು. ಇಲ್ಲವಾದಲ್ಲಿ ಹೆಚ್ಚಿನ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು.

ಪ್ರತಿಭಟನೆಯಲ್ಲಿ ಜಿಲ್ಲಾ ಘಟಕದ ಸ್ವಾಮಿಗೌಡ, ಸಾದಿಕ್, ಚಿರಂಜೀವಿ, ತಾಲ್ಲೂಕು ಘಟಕದ ಅಧ್ಯಕ್ಷ ಡಿ. ಅಶೋಕ್, ಶಿವಕುಮಾರ್, ಮಹೇಶ್, ನಾರಾಯಣ, ಹೊಸಕರೆ ಕೃಷ್ಣ ಇತರರು  ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.