ADVERTISEMENT

ಜೀರ್ಣೋದ್ಧಾರ ದೇಗುಲ ಲೋಕಾರ್ಪಣೆ

​ಪ್ರಜಾವಾಣಿ ವಾರ್ತೆ
Published 3 ಡಿಸೆಂಬರ್ 2012, 8:29 IST
Last Updated 3 ಡಿಸೆಂಬರ್ 2012, 8:29 IST

ಮದ್ದೂರು: ಸಮೀಪದ ಮಾದನಾಯಕನಹಳ್ಳಿಯಲ್ಲಿ ಜೀರ್ಣೋದ್ಧಾರಗೊಂಡ ಇತಿಹಾಸ ಪ್ರಸಿದ್ಧ ಮಹಾಬಲೇಶ್ವರ ಹಾಗೂ ಮಲ್ಲಿಕಾರ್ಜುನೇಶ್ವರ ದೇವಾಲಯ ಪುನರ್ ಪ್ರತಿಷ್ಠಾಪನಾ ಮಹೋತ್ಸವ ಭಾನುವಾರ ನಡೆಯಿತು.

ಶನಿವಾರದಿಂದಲೇ ಪ್ರತಿಷ್ಠಾಪನಾ ಮಹೋತ್ಸವದ ಪೂರ್ವಭಾವಿಯಾಗಿ ವಿವಿಧ ಯಾಗ, ಪೂಜಾ ಕೈಂಕರ್ಯ ಪ್ರಧಾನ ಅರ್ಚಕ ಸೂರ್ಯ ನಾರಾಯಣ ದೀಕ್ಷಿತ್ ನೇತೃತ್ವದಲ್ಲಿ ನಡೆದವು.

ಮಾಜಿ ಶಾಸಕ ಡಿ.ಸಿ. ತಮ್ಮಣ್ಣ ಮಾತನಾಡಿ, ಗಂಗ ಹಾಗೂ ಚೋಳರ ಕಾಲಕ್ಕೆ ಸೇರಿದ್ದ ಈ ಎರಡು ಇತಿಹಾಸ ಪ್ರಸಿದ್ಧ ದೇಗುಲಗಳು ಶಿಥಿಲಗೊಂಡಿದ್ದವು. ಪುರಾತತ್ವ ಇಲಾಖೆ ಹಾಗೂ ಧರ್ಮಸ್ಥಳದ ಮಂಜುನಾಥೇಶ್ವರ ಧರ್ಮೋತ್ಥಾನ ಟ್ರಸ್ಟ್ ಜಂಟಿಯಾಗಿ ಈ ಎರಡು ದೇಗುಲಗಳನ್ನು ಜೀರ್ಣೋದ್ಧಾರಗೊಳಿಸಿವೆ. ನಮ್ಮ ದೇವಾಲಯ ಸಂಸ್ಕೃತಿ ಪುನರುತ್ಥಾನಕ್ಕೆ ಮುಂದಾಗಿರುವುದು ಸ್ವಾಗತಾರ್ಹ ಎಂದರು.

ಇದೇ ಸಂದರ್ಭದಲ್ಲಿ ನಿವೃತ್ತ ಐಎಎಸ್ ಅಧಿಕಾರಿ ಗೋಪಾಲಕೃಷ್ಣಗೌಡ, ಪುರಾತತ್ವ ಇಲಾಖೆಯ ಆಯುಕ್ತ ಕೆ.ಆರ್. ರಾಮಕೃಷ್ಣ, ಮಂಜುನಾಥೇಶ್ವರ ಧರ್ಮೋತ್ಥಾನ ಟ್ರಸ್ಟ್ ಉಪಾಧ್ಯಕ್ಷ ಸುರೇಂದ್ರಕುಮಾರ್, ಎಸ್.ಎಂ.ಪೂಜಾರ್ ಅವರನ್ನು ಸನ್ಮಾನಿಸಲಾಯಿತು.

ಶಾಸಕರಾದ ಕಲ್ಪನಾ ಸಿದ್ದರಾಜು, ಬಿ. ರಾಮಕೃಷ್ಣ, ಮಾಜಿ ಶಾಸಕ ಮಧು ಜಿ.ಮಾದೇಗೌಡ, ಇತಿಹಾಸ ಸಂಶೋಧಕ ಸಾಹಿತಿ ತೈಲೂರು ವೆಂಕಟಕೃಷ್ಣ, ಜಿಲ್ಲಾ ಪಂಚಾಯಿತಿ ಸದಸ್ಯೆ ಲಲಿತಾ ಪ್ರಕಾಶ್, ತಾಲ್ಲೂಕು ಪಂಚಾಯಿತಿ ಸದಸ್ಯ ಸಂದರ್ಶ, ಗ್ರಾಮ ಪಂಚಾಯಿತಿ ಅಧ್ಯಕ್ಷ ಬೋಜಪ್ಪ, ಸದಸ್ಯ ಪ್ರಕಾಶ್, ಮುಖಂಡರಾದ ಅಪ್ಪಾಜಿಗೌಡ, ಕೆ. ರಾಜಣ್ಣ, ಮೀಸೆ ರಾಜಣ್ಣ, ಲಿಂಗೇಗೌಡ, ತೈಲೂರು ರಘು, ರಾಜೇಂದ್ರಕುಮಾರ್, ಶಿವಾಜಿ, ತಹಶೀಲ್ದಾರ್ ಎಂ.ಕೆ. ಸವಿತಾ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.