ಮದ್ದೂರು: ತಾಲ್ಲೂಕಿನ ಕುದರಗುಂಡಿ ಕಾಲೋನಿ ಹಾಗೂ ಮಲ್ಲಯ್ಯನದೊಡ್ಡಿ ಗ್ರಾಮಗಳಲ್ಲಿ ತಲೆದೋರಿರುವ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಆಗ್ರಹಿಸಿ ಗ್ರಾಮಸ್ಥರು ಇಲ್ಲಿನ ಜಿಲ್ಲಾಪಂಚಾಯಿತಿ ಎಂಜನಿಯರಿಂಗ್ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.
ಖಾಲಿ ಕೊಡಗಳೊಂದಿಗೆ ಕಚೇರಿ ಎದುರು ಅರ್ಧತಾಸಿಗೂ ಹೆಚ್ಚು ಕಾಲ ಪ್ರತಿಭಟನೆ ನಡೆಸಿದ ಗ್ರಾಮಸ್ಥರು, ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ಘೋಷಣೆಗಳನ್ನು ಮೊಳಗಿಸಿದರು.
ಗ್ರಾಮದಲ್ಲಿ ಹೊಸದಾಗಿ ಕೊಳವೆ ಬಾವಿ ಕೊರೆಸಲು ಆದೇಶ ನೀಡಲಾಗಿದ್ದರೂ, ಅಧಿಕಾರಿಗಳು ಗ್ರಾಮದ ಕೆಲವು ಪ್ರಭಾವಿಗಳ ಮರ್ಜಿಗೆ ಒಳಗಾಗಿ ಕೊಳವೆ ಬಾವಿ ಕೊರೆಸಲು ಮುಂದಾಗಿಲ್ಲ. ಈ ಕೂಡಲೇ ಮಂಜೂರಾಗಿರುವ ಕೊಳವೆ ಬಾವಿ ಕೊರೆಸುವ ಮೂಲಕ ನೀರಿನ ಸಮಸ್ಯೆ ನಿವಾರಣೆಗೆ ಮುಂದಾಗಬೇಕು. ಇಲ್ಲದಿದ್ದಲ್ಲಿ ಉಗ್ರ ಪ್ರತಿಭಟನೆ ಅನಿವಾರ್ಯ ಎಂದು ಗ್ರಾಮದ ಮುಖಂಡ ಶ್ರೀನಿವಾಸ್ ಎಚ್ಚರಿಕೆ ನೀಡಿದರು.
ಮುಖಂಡರಾದ ನಾಗೇಶ್, ಆನಂದ್, ಕೆ.ಶಿವರಾಮು, ಚಿಕ್ಕಬೋರಯ್ಯ, ಗೀತಾ, ಸಾವಿತ್ರಮ್ಮ, ಸುಜಾತ ಸೇರಿದಂತೆ ಹಲವರು ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.