ADVERTISEMENT

ನೇಕಾರರ ಒಕ್ಕೂಟ: ಪಂಜಿನ ಮೆರವಣಿಗೆ

​ಪ್ರಜಾವಾಣಿ ವಾರ್ತೆ
Published 9 ಅಕ್ಟೋಬರ್ 2012, 8:25 IST
Last Updated 9 ಅಕ್ಟೋಬರ್ 2012, 8:25 IST

ಕೃಷ್ಣರಾಜಪೇಟೆ: ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ಸ್ಥಗಿತಗೊಳಿಸಬೇಕೆಂದು ಒತ್ತಾಯಿಸಿ ತಾಲ್ಲೂಕಿನ ವಿವಿಧೆಡೆ ಸೋಮವಾರ ಪ್ರತಿಭಟಗಳು ನಡೆದವು.

ತಾಲ್ಲೂಕು ನೇಕಾರರ ಒಕ್ಕೂಟದಿಂದ ಸೋಮವಾರ ಸಂಜೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಪಂಜಿನ ಮೆರವಣಿಗೆ ನಡೆಸಿದರು. ಜಿಲ್ಲಾ ನೇಕಾರರ ಒಕ್ಕೂಟದ ಅಧ್ಯಕ್ಷ ಕೆ.ಆರ್.ಮಹೇಶ್, ಕಾರ್ಯಾಧ್ಯಕ್ಷ ಜಿ.ಸೋಮಶೇಖರ್, ಜಿಲ್ಲಾ ತೊಗಟವೀರ ಕ್ಷತ್ರಿಯ ಯುವವೇದಿಕೆ ಅಧ್ಯಕ್ಷ ಹಂಸ  ರಮೇಶ್,ಲಕ್ಷ್ಮೀನಾರಾಯಣಸ್ವಾಮಿ ನೇಯ್ಗೆಯವರ ಸಹಕಾರ ಸಂಘದ ಅಧ್ಯಕ್ಷ ಎಚ್.ಆರ್.ಲೋಕೇಶ್, ಕಾರ್ಯದರ್ಶಿ  ಎಚ್.ಡಿ.ಶ್ರೀನಿವಾಸ್, ಪುರಸಭೆ ಮಾಜಿ ಅಧ್ಯಕ್ಷ ಕೆ.ಸಿ.ವಾಸು, ಮಾಜಿ ಉಪಾಧ್ಯಕ್ಷ ಎಚ್.ಟಿ.ರಾಜು, ಪಿಕಾರ್ಡ್ ಬ್ಯಾಂಕ್ ನಿರ್ದೇಶಕ ಕೆ.ಆರ್.ಪುಟ್ಟಸ್ವಾಮಿ, ಒಕ್ಕೂಟದ ಮುಖಂಡರಾದ ಸುರೇಶ್, ನಾಗೇಂದ್ರ, ನರೇಂದ್ರ ಬಾಬು ಭಾಗವಹಿಸಿದ್ದರು.

ಜೆಡಿಎಸ್ ಪ್ರತಿಭಟನೆ :  ತಾಲ್ಲೂಕು ಜೆಡಿಎಸ್ ಮುಖಂಡರು ಪಟ್ಟಣದ ಎಂ.ಕೆ.ಬೊಮ್ಮೇಗೌಡ ವೃತ್ತದಲ್ಲಿ ಮಾನವ ಸರಪಳಿ ರಚಿಸಿ ಮೈಸೂರು - ಅರಸೀಕೆರೆ ಹೆದ್ದಾರಿ ತಡೆ ನಡೆಸಿದರು. ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರ ಪ್ರತಿಕೃತಿ ದಹಿಸಿದರು.

ವಿಧಾನಸಭೆ ಮಾಜಿ ಅಧ್ಯಕ್ಷ ಕೃಷ್ಣ, ಮಾಜಿ ಶಾಸಕ ಬಿ.ಪ್ರಕಾಶ್, ತಾಲ್ಲೂಕು ಜೆಡಿಎಸ್ ಅಧ್ಯಕ್ಷ ವೆಂಕಟಸುಬ್ಬೇಗೌಡ, ಕಾರ್ಯಾಧ್ಯಕ್ಷ ಕೆ.ಎಸ್.ರಾಮೇಗೌಡ, ತಾಲ್ಲೂಕು ಯುವ ಘಟಕದ ಅಧ್ಯಕ್ಷ ಪುಟ್ಟಸ್ವಾಮಿಗೌಡ, ರಾಜ್ಯ ಯುವ ಜೆಡಿಎಸ್ ಪ್ರಧಾನ ಕಾರ್ಯದರ್ಶಿ  ಎಸ್.ಆರ್.ದಿನೇಶ್, ಮಂಡ್ಯ ಜಿಲ್ಲಾ ಹಾಲು ಒಕ್ಕೂಟದ ಅಧ್ಯಕ್ಷ ಎಂ.ಬಿ.ಹರೀಶ್, ಜಿಲ್ಲಾ ಕೃಷಿ ಉತ್ಪನ್ನ ಮಾರಾಟ ಸಹಕಾರ ಸಂಘದ ಅಧ್ಯಕ್ಷ ಜೈನಹಳ್ಳಿ ರಾಮಕೃಷ್ಣೇಗೌಡ, ಟಿಎಪಿಸಿಎಂಎಸ್ ಅಧ್ಯಕ್ಷ ಎಸ್.ಗಿರಿಗೌಡ, ಜಿಲ್ಲಾ ಪಂಚಾಯಿತಿ ಸದಸ್ಯರಾದ ಕೆ.ಎಸ್.ಪ್ರಭಾಕರ್, ಗೌರಮ್ಮ ಶ್ರೀನಿವಾಸ್, ತಾಲ್ಲೂಕು ಪಂಚಾಯಿತಿ ಉಪಾಧ್ಯಕ್ಷ ರಾಮೇಗೌಡ, ಮಾಜಿ ಉಪಾಧ್ಯಕ್ಷ ಮಹದೇವೇಗೌಡ, ಸ್ಥಾಯಿ ಸಮಿತಿ ಅಧ್ಯಕ್ಷ ಎಂ.ಬಿ.ಅಶೋಕ್, ಮಾಜಿ ಅಧ್ಯಕ್ಷ ಹೆಳವೇಗೌಡ ಇದ್ದರು.

ಅಣಕು ಶವಯಾತ್ರೆ: ಕಾವೇರಿ ವಿಷಯದಲ್ಲಿ ಕರ್ನಾಟಕಕ್ಕೆ ಅನ್ಯಾಯವಾಗುತ್ತಿದೆ ಎಂದು ತಾಲ್ಲೂಕು ಮುಸ್ಲಿಂ ಜನಾಂಗದ ಕ್ಷೇಮಾಭಿವೃದ್ಧಿ ಸಂಘದ ಆಶ್ರಯದಲ್ಲಿ ಸೋಮವಾರ ಪ್ರತಿಭಟನೆ ನಡೆಸಲಾಯಿತು. ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ತಮಿಳುನಾಡು ಮುಖ್ಯಮಂತ್ರಿ ಅಣಕು ಶವಯಾತ್ರೆ ನಡೆಸಿದ ಮುಸ್ಲಿಂ ಬಾಂಧವರು, ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದರು.

ಮುಖಂಡರಾದ ಕೆ.ಗೌಸ್‌ಖಾನ್, ಮುಮ್ತಾಜ್, ಮಹಮ್ಮದ್ ಹಸೇನ್, ಪಠಾಣ್ ಬಾಬು, ಕಲೀಲ್ ಪ್ರತಿಭಟನೆಯ ನೇತೃತ್ವ ವಹಿಸಿದ್ದರು. 

ರೈಲುತಡೆ: ಕಾವೇರಿ ಚಳವಳಿಯನ್ನು ಬೆಂಬಲಿಸಿ ಮೈಸೂರು- ಶಿವಮೊಗ್ಗ ರೈಲನ್ನು ತಾಲ್ಲೂಕಿನ ಮಂದಗೆರೆ ರೈಲ್ವೆ ನಿಲ್ದಾಣದಲ್ಲಿ ಸೋಮವಾರ ತಡೆದು ಪ್ರತಿಭಟನೆ ನಡೆಸಲಾಯಿತು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.