ADVERTISEMENT

ಪೊಲೀಸರ ವಿರುದ್ಧ ರೈತರ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 14 ಸೆಪ್ಟೆಂಬರ್ 2013, 6:43 IST
Last Updated 14 ಸೆಪ್ಟೆಂಬರ್ 2013, 6:43 IST

ಪಾಂಡವಪುರ: ಪಾಂಡವಪುರ ಸಹಕಾರ ಸಕ್ಕರೆ ಕಾರ್ಖಾನೆಗೆ ಕಬ್ಬು ಸರಬರಾಜು ಮಾಡುತ್ತಿಲ್ಲ ಎಂಬ ಕಾರಣದಿಂದ ಲಾರಿ ಮತ್ತು ಎತ್ತಿನಗಾಡಿಗಳ ಮೂಲಕ ಬೇರೆ ಕಾರ್ಖಾನೆಗೆ ಕಬ್ಬು ಸರಬರಾಜು ಮಾಡುತ್ತಿದ್ದ ರೈತರನ್ನು ತಡೆದ ಪೊಲೀಸರ ವಿರುದ್ಧ ರೈತರು ಒಂದು ಗಂಟೆ ಕಾಲ ರಸ್ತೆ ನಡೆಸಿ ಪ್ರತಿಭಟಿಸಿದ ಘಟನೆ ಪಟ್ಟಣದಲ್ಲಿ ಶುಕ್ರವಾರ  ನಡೆದಿದೆ.

ಪಾಂಡವಪುರ ಸಹಕಾರ ಸಕ್ಕರೆ ಕಾರ್ಖಾನೆಗೆ ಕಬ್ಬು ಸರಬರಾಜು ಮಾಡದೇ ಬನ್ನಾರಿ ಷುಗರ್ಸ್‌ ಕಂಪೆನಿ ಹಾಗೂ ಕೊಪ್ಪ ಕಾರ್ಖಾನೆಗೆ ರೈತರು ಕಬ್ಬು ಸರಬರಾಜು ಮಾಡುತ್ತಿದ್ದ ಲಾರಿಯನ್ನು ತಡೆದ ಕಂದಾಯ ಇಲಾಖೆ ಹಾಗೂ ಪೊಲೀಸರ ವಿರುದ್ಧ ರೈತರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ರೈತರು ಹಾಗೂ ಪೊಲೀಸರ ನಡುವೆ ತೀವ್ರ ಮಾತಿನ ಚಕಮಕಿ ನಡೆಯಿತು. ಸ್ಥಳಕ್ಕೆ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಆಗಮಿಸಬೇಕು ಎಂದು ರೈತರು ಪಟ್ಟು ಹಿಡಿದರು. ನಂತರ ಪೊಲೀಸ್ ಸಬ್ಇನ್ಸ್‌ಪೆಕ್ಟರ್ ಅಜರುದ್ದೀನ್ ಮತ್ತು ಕಂದಾಯ ಇಲಾಖೆಯ ಅಧಿಕಾರಿಗಳು ದೂರವಾಣಿ ಮೂಲಕ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದರು. ಸಮಸ್ಯೆ ಬಗೆಹರಿಸುವುದಾಗಿ ಅಧಿಕಾರಿಗಳು ಭರವಸೆ ನೀಡಿದ ಮೇಲೆ ರೈತರು ಪ್ರತಿಭಟನೆ ಹಿಂಪಡೆದರು. ಪ್ರತಿಭಟನೆಯಲ್ಲಿ ಜವರೇ ಗೌಡ, ಬಾಲಗಂಗಾಧರ್, ಎಚ್.ಕೆ. ರಮೇಶ್, ಚನ್ನೇಗೌಡ, ವೆಂಕಟೇಶ್ ಇತರರು  ರೈತರು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.