ADVERTISEMENT

ಬರ ಅಧ್ಯಯನ ಪ್ರವಾಸ ನಾಳೆ

​ಪ್ರಜಾವಾಣಿ ವಾರ್ತೆ
Published 16 ಏಪ್ರಿಲ್ 2012, 8:05 IST
Last Updated 16 ಏಪ್ರಿಲ್ 2012, 8:05 IST

ಮಂಡ್ಯ: ಬರ ಪರಿಸ್ಥಿತಿ ಬಗೆಗೆ ಅಧ್ಯಯನ ನಡೆಸಲು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ನೇತೃತ್ವದ ತಂಡ ಮಂಗಳವಾರ (ಏ. 17) ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದೆ.

ಸರ್ಕಾರ, ಜಿಲ್ಲೆಯ ಏಳೂ ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಿರುವ ಹಿನ್ನೆಲೆಯಲ್ಲಿ ಮದ್ದೂರು, ನಾಗಮಂಗಲ, ಕೃಷ್ಣರಾಜ ಪೇಟೆ, ಪಾಂಡವಪುರ ತಾಲ್ಲೂಕುಗಳಿಗೆ ಪರಮೇಶ್ವರ್ ನೇತೃತ್ವದ ತಂಡ ಭೇಟಿ ನೀಡಲಿದ್ದು, ಮಾಹಿತಿ ಸಂಗ್ರಹಿಸಲಿದೆ ಎಂದು ಕಾಂಗ್ರೆಸ್ ಜಿಲ್ಲಾ ಘಟಕದ ವಕ್ತಾರ ಟಿ.ಎಸ್.ಸತ್ಯಾನಂದ ತಿಳಿಸಿದ್ದಾರೆ.

ಕುಡಿಯುವ ನೀರು, ಜಾನುವಾರು ಗಳಿಗೆ ಮೇವು ಸೇರಿದಂತೆ ಇತರೆ ಸಮಸ್ಯೆಗಳ ಬಗೆಗೆ  ಸಾರ್ವಜನಿಕ ರೊಡನೆ ಚರ್ಚಿಸಲಿದ್ದಾರೆ ಎಂದು ತಿಳಿಸಿದ್ದಾರೆ.

ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು, ಇದೇ 28ರಂದು ರಾಜ್ಯಕ್ಕೆ ಆಗಮಿಸಲಿದ್ದಾರೆ. ಅವರಿಗೆ ಬರ ಪರಿಸ್ಥಿತಿಯ ಸಂಪೂರ್ಣ ವರದಿಯನ್ನು ನೀಡಲಿದ್ದು, ಕೇಂದ್ರ ಸರ್ಕಾರದಿಂದ ಹೆಚ್ಚಿನ ಪರಿಹಾರ ಕೋರಲಾಗುವುದು ಎಂದು ವಿವರಿಸಿದ್ದಾರೆ.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಎಸ್.ಆತ್ಮಾನಂದ ಅವರು, ಜಿಲ್ಲೆಯಲ್ಲಿನ ಬರ ಸ್ಥಿತಿ ಬಗೆಗೆ ಈಗಾ ಗಲೇ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಿಂದ ಮಾಹಿತಿಯನ್ನು ಪಡೆದಿದ್ದು, ಕೆಪಿಸಿಸಿ ಅಧ್ಯಕ್ಷರ ನೇತೃತ್ವದ ತಂಡಕ್ಕೆ ಮಾಹಿತಿ ಒದಗಿಸಲಿದ್ದಾರೆ ಎಂದು ಅವರು ತಿಳಿಸಿದಿದ್ದಾರೆ.

ಅಭಿನಂದನೆ: ಕೃಷ್ಣರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹಾಗೂ ಹಿರಿಯ ಕಾಂಗ್ರೆಸ್ ಮುಖಂಡ ಎಂ.ಡಿ. ಕೃಷ್ಣಮೂರ್ತಿ ಅವರು ಭಾರತ ಆಹಾರ ನಿಗಮದ ನಿರ್ದೇಶಕರಾಗಿ ನೇಮಕ ಗೊಂಡಿರುವುದಕ್ಕೆ ಜಿಲ್ಲಾ ಕಾಂಗ್ರೆಸ್ ಅಭಿನಂದಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.