ADVERTISEMENT

ಮಂಡ್ಯ: ಜಿಲ್ಲಾ ಪಂಚಾಯಿತಿ ಸಭೆಯಲ್ಲಿ ಭಾರಿ ಗದ್ದಲ

​ಪ್ರಜಾವಾಣಿ ವಾರ್ತೆ
Published 13 ಸೆಪ್ಟೆಂಬರ್ 2013, 9:05 IST
Last Updated 13 ಸೆಪ್ಟೆಂಬರ್ 2013, 9:05 IST

ಮಂಡ್ಯ: ಇಲ್ಲಿಯ ಜಿಲ್ಲಾ ಪಂಚಾಯಿತಿ ಸಾಮಾನ್ಯ ಸಭೆ ಶುಕ್ರವಾರ ಗದ್ದಲಕ್ಕೆ ಸಾಕ್ಷಿಯಾಯಿತು. ಸ್ಥಾಯಿ ಸಮಿತಿಗಳ ನಿರ್ಣಯದ ಪ್ರತಿಗಳನ್ನು ತಮಗೆ ನೀಡಿಲ್ಲ ಹಾಗಾಗಿ ಸಭೆಯನ್ನು ಮುಂದೂಡಬೇಕೆಂದು ಪ್ರತಿಪಕ್ಷಗಳ ಸದಸ್ಯರು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಆಡಳಿತ ಮತ್ತು ವಿರೋಧ ಪಕ್ಷಗಳ ಸದಸ್ಯರ ನಡುವೆ ಬಿರುಸಿನ ಮಾತಿನ  ಚಕಮಕಿ ನಡೆಯಿತು. ಒಂದು ಹಂತದಲ್ಲಿ ಸ್ಥಾಯಿ ಸಮಿತಿ ಸದಸ್ಯರೊಬ್ಬರು ವೇದಿಕೆಯಿಂದಿಳಿದು ತೀವ್ರ ವಾಗ್ವಾದಕ್ಕೆ ಇಳಿದಾಗ ಪರಿಸ್ಥಿತಿ ಕೈ ಕೈ ಮಿಲಾಯಿಸುವ ಸ್ವರೂಪ ಪಡೆಯಿತು.

ನಂತರ ಪ್ರತಿಪಕ್ಷಗಳು ಸಭೆಯನ್ನು ಬಹಿಷ್ಕರಿಸಿ ಸಭಾತ್ಯಾಗ ಮಾಡಿದವು. ನಂತರ ಸಭೆಯನ್ನು ಮುಂದೂಡಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.