ADVERTISEMENT

ಮಂಡ್ಯ: ಮತದಾರರ ಜಾಗೃತಿಗಾಗಿ ರ್‌್್ಯಾಲಿ

​ಪ್ರಜಾವಾಣಿ ವಾರ್ತೆ
Published 14 ಮಾರ್ಚ್ 2014, 6:10 IST
Last Updated 14 ಮಾರ್ಚ್ 2014, 6:10 IST

ಮಂಡ್ಯ: ಸೀರೆ, ಹಣ, ಹೆಂಡ ಹಂಚುವವರಿಗೆ ಮತ ನೀಡಿದರೆ ಮುಂದೆ ನಿಮಗೆ ತೊಂದರೆ, ಜವಾಬ್ದಾರಿಯಿಂದ ಹಿಂದೆ ಸರಿಯದಿರಿ, ಮತ ಹಾಕಲು ಸಮಯ ಕಾದಿಡಿ, ಸೂಕ್ತ ಅಭ್ಯರ್ಥಿಯ ಆಯ್ಕೆ ಮಾಡಿ, ಅಭಿವೃದ್ಧಿಯಲ್ಲಿ ಭಾಗಿಯಾಗಿ...

ಈ ಫಲಕಗಳು ಮತದಾರರಿಗೆ ವ್ಯವಸ್ಥಿತ ಶಿಕ್ಷಣ ಹಾಗೂ ಮತದಾರರ ಸಹಭಾಗಿತ್ವ ಸಮಿತಿ ವತಿಯಿಂದ ಗುರುವಾರ ನಗರದಲ್ಲಿ ಮತದಾರರ ಜಾಗೃತಿಗಾಗಿ ಹಮ್ಮಿಕೊಂಡಿದ್ದ ರ್‌್ಯಾಲಿಯಲ್ಲಿ ಕಂಡು ಬಂದವು.

ಮತದಾರರಲ್ಲಿ ಜಾಗೃತಿ ಮೂಡಿಸುವಂತಹ ಇಂತಹ ಹತ್ತಾರು ಫಲಕಗಳನ್ನು ಹಿಡಿದುಕೊಂಡು, ಘೋಷಣೆಗಳನ್ನು ಕೂಗುತ್ತಾ ಸಾಗಿದರು.

ಮತದಾದಲ್ಲಿ ಭಾಗವಹಿಸುವ ಮೂಲಕ ಹಕ್ಕನ್ನು ಚಲಾಯಿಸಬೇಕು ಎಂದು ರ್‌್ಯಾಲಿಯಲ್ಲಿ ಹೊರಟವರು ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡರು. ಕೇಂದ್ರ ಬಸ್‌ ನಿಲ್ದಾಣದ ಸಮೀಪ ಮಾನವ ಸರಪಳಿಯನ್ನು ರಚಿಸುವ ಮೂಲಕ ಸಾರ್ವಜನಿಕರ ಗಮನ ಸೆಳೆಯಲಾಯಿತು.

ರ್‌್ಯಾಲಿಗೆ ಜಿಲ್ಲಾಧಿಕಾರಿ ಡಾ.ಅಜಯ್‌್ ನಾಗಭೂಷಣ್‌ ಚಾಲನೆ ನೀಡಿದರು. ಜಿ.ಪಂ. ಸಿಇಒ ಪಿ.ಸಿ. ಜಯಣ್ಣ, ಹೆಚ್ಚುವರಿ ಜಿಲ್ಲಾಧಿಕಾರಿ ಶಂಕರಪ್ಪ, ಉಪವಿಭಾಗಾಧಿಕಾರಿ ಶಾಂತಾ ಹುಲ್ಮನಿ, ತಹಶೀಲ್ದಾರ್‌್ ಡಾ.ಮಮತಾ, ಆರ್‌್. ರಾಜು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.