ಶ್ರೀರಂಗಪಟ್ಟಣ: ತಾಲ್ಲೂಕಿನ ವಿವಿಧೆಡೆ ಮೂರು ದಿನಗಳ ಕಾಲ ಸಂಚರಿಸಲಿರುವ ಕಾನೂನು ಸಾಕ್ಷರತಾ ರಥಕ್ಕೆ ಸೆಷನ್ಸ್ ಜಿಲ್ಲಾ ನ್ಯಾಯಾಧೀಶರಾದ ಪ್ರಭಾವತಿ ಎಂ.ಹಿರೇಮಠ್ ಶುಕ್ರವಾರ ಚಾಲನೆ ನೀಡಿದರು.
ನ್ಯಾಯಾಲಯದ ಆವರಣದಲ್ಲಿ ಉಚಿತ ಕಾನೂನು ಅರಿವು- ನೆರವು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಕಾನೂನು ಸೇವಾ ಪ್ರಾಧಿಕಾರದ ನೆರವಿನಿಂದ ಗ್ರಾಮೀಣ ಪ್ರದೇಶದ ಜನರಿಗೆ ದಿನನಿತ್ಯದ ವ್ಯವಹಾರಗಳಿಗೆ ಅನುಕೂಲ ಆಗಬಲ್ಲ ಸರಳ ಕಾನೂನುಗಳ ಬಗ್ಗೆ ಅರಿವು ಮೂಡಿಸಬೇಕು ಎಂದು ಹೇಳಿದರು. ಪ್ರಧಾನ ಸಿವಿಲ್ ನ್ಯಾಯಾಧೀಶ ಪುಟ್ಟರಂಗಸ್ವಾಮಿ, ವಿ.ನಾಗರಾಜು, ಎ.ಜಿ.ಶಿಲ್ಪ, ವಕೀಲರ ಸಂಘದ ಅಧ್ಯಕ್ಷ ಕೆ. ಕುಮಾರ್, ಕಾರ್ಯದರ್ಶಿ ಎ. ಕುಮಾರ್, ಡಿವೈಎಸ್ಪಿ ಕಲಾ ಕೃಷ್ಣಸ್ವಾಮಿ ಇತರರು ಇದ್ದರು.
ತಾಲ್ಲೂಕು ಪಂಚಾಯಿತಿ: ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ಸಂಜೆ ನಡೆದ ಕಾನೂನು ಅರಿವು- ನೆರವು ಕಾರ್ಯಕ್ರಮದಲ್ಲಿ ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ರಾಜೇಶ್ವರಿ ನಂದೀಶ್‌ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಕಾರ್ಯನಿರ್ವಾಹಕ ಅಧಿಕಾರಿ ಕೆ.ವಿ. ಅಮರನಾಥ್ ಮಾತನಾಡಿದರು. ವಕೀಲ ಮಹದೇವಸ್ವಾಮಿ `ಪಂಚಾಯತ್ ರಾಜ್ ಅಧಿನಿಯಮ' ಹಾಗೂ ಜಯಕುಮಾರ್ `ಭೂ ಕಂದಾಯ ಅಧಿನಿಯಮ' ಕುರಿತು ಮಾಹಿತಿ ನೀಡಿದರು. ತೇಜಸ್ವಿನಿಗೌಡ ಇತರರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.