ADVERTISEMENT

ಮೂಲ ಸೌಕರ್ಯಕ್ಕೆ ಆಗ್ರಹ: ಗ್ರಾ.ಪಂ.ಗೆ ಬೀಗ ಜಡಿದು ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 14 ಅಕ್ಟೋಬರ್ 2011, 6:40 IST
Last Updated 14 ಅಕ್ಟೋಬರ್ 2011, 6:40 IST

ನಾಗಮಂಗಲ: ತಾಲ್ಲೂಕಿನ ಹೊಣಕೆರೆ ಗ್ರಾಮಕ್ಕೆ ಮೂಲ ಸೌಕರ್ಯ ಕಲ್ಪಿಸಲು ಗ್ರಾಮ ಪಂಚಾಯಿತಿ ವಿಫಲವಾಗಿದೆ ಎಂದು ಆರೋಪಿಸಿ ಗ್ರಾಮ ಪಂಚಾಯಿತಿ ಕಚೇರಿಗೆ ಗುರುವಾರ ಬೀಗ ಜಡಿದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.

ಹೊಣಕೆರೆ ಗ್ರಾಮ ಪಂಚಾಯಿತಿ ಹೊಣಕೆರೆ ಹೋಬಳಿಯ ಪ್ರಮುಖ ಕೇಂದ್ರವಾಗಿದ್ದು, ಗ್ರಾಮದಲ್ಲಿ ಸಮರ್ಪಕವಾಗಿ ಮೂಲ ಸೌಕರ್ಯಗಳು ಇಲ್ಲದಿರುವುದು ಹಾಗೂ ಗ್ರಾಮದಲ್ಲಿ ಚರಂಡಿಗಳ ನಿರ್ಮಿಸದೇ ಮನೆಗಳ ಮುಂದೆ ನೀರು ನಿಂತು ತೊಂದರೆ ಉಂಟಾಗುತ್ತಿದೆ. ಈ ಎಲ್ಲ ಸಮಸ್ಯೆಗಳಿಗೆ ಪರಿಹಾರ ಸೂಚಿಸಲು ಹಲವು ತಿಂಗಳುಗಳಿಂದ ಗ್ರಾಮಸ್ಥರು ಗ್ರಾಮ ಪಂಚಾಯಿತಿಗೆ ಅರ್ಜಿ, ಮನವಿ ಸಲ್ಲಿಸಿದ್ದಾರೆ. ಆದರೆ ಯಾವುದೇ ಕಾರ್ಯ ಪ್ರಗತಿಯಾಗಿಲ್ಲ ಎಂದು ಆರೋಪಿಸಿ ಆಕ್ರೋಶದಿಂದ ಪಂಚಾಯಿತಿಗೆ ಬೀಗ ಜಡಿದು ಪ್ರತಿಭಟನೆ ನಡೆಸುತ್ತಿರುವುದಾಗಿ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.

ಜನ ಪ್ರತಿನಿಧಿಗಳಿಗೆ ಛೀಮಾರಿ: ಇದೇ ವೇಳೆ ಗ್ರಾಮದ ಸಮಸ್ಯೆಗಳನ್ನು ಸಂಬಂಧ ಪಟ್ಟ ಜನಪ್ರತಿನಿಧಿಗಳಿಗೆ ತಿಳಿಸಿದ್ದರೂ ಯಾವುದೇ ಪ್ರಯೋಜನವಿಲ್ಲ. ಯಾವುದೇ ಜನಪ್ರತಿನಿಧಿ ಮತ್ತು ಅಧಿಕಾರಿ ನಮ್ಮ ಸಮಸ್ಯೆಗಳತ್ತ ತಿರುಗಿಯೂ ನೋಡುತ್ತಿಲ್ಲ. ಗ್ರಾಮದ ಸಮಸ್ಯೆಗಳತ್ತ ಕೂಡಲೇ ಗಮನ ಹರಿಸದಿದ್ದರೆ ಹೆದ್ದಾರಿಯಲ್ಲಿ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.