ADVERTISEMENT

ವಾಲ್ಮೀಕಿ ಜಯಂತಿಗೆ ಜನಪದ ನೃತ್ಯದ ಮೆರುಗು

​ಪ್ರಜಾವಾಣಿ ವಾರ್ತೆ
Published 18 ಅಕ್ಟೋಬರ್ 2012, 5:10 IST
Last Updated 18 ಅಕ್ಟೋಬರ್ 2012, 5:10 IST

ಶ್ರೀರಂಗಪಟ್ಟಣ: ಈ ಬಾರಿ ವಾಲ್ಮೀಕಿ ಜಯಂತಿಯನ್ನು ಸಂಭ್ರಮದಿಂದ ಆಚರಿಸಲಾಗುವುದು ಎಂದು ತಹಶೀಲ್ದಾರ್ ಅರುಳ್‌ಕುಮಾರ್ ತಿಳಿಸಿದರು.

ಪಟ್ಟಣದ ಮಿನಿ ವಿಧಾನಸೌಧದಲ್ಲಿ ಬುಧವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.
ಅ.29ರಂದು ಪಟ್ಟಣದ ಅಂಬೇಡ್ಕರ್ ಭವನದಲ್ಲಿ ಮಹರ್ಷಿ ವಾಲ್ಮೀಕಿ ಅವರ ಜಯಂತಿ ಕಾರ್ಯಕ್ರಮ ನಡೆಯಲಿದೆ.

ಅದಕ್ಕೂ ಮುನ್ನ ಪಟ್ಟಣದ ರಾಜ ಬೀದಿಯಲ್ಲಿ ಮೆರವಣಿಗೆ ನಡೆಯಲಿದೆ. ಡೊಳ್ಳು ಕುಣಿತ, ಪಟದ ಕುಣಿತ, ನಂದಿ ಕೋಲು ಇತರ ಜಾನಪದ ಕಲಾ ತಂಡಗಳು ಮೆರವಣಿಗೆಯಲ್ಲಿ ಪಾಲ್ಗೊಳ್ಳಲಿವೆ. ತಾಲ್ಲೂಕಿನ ವಿವಿಧ ಗ್ರಾಮಗಳ ನಾಯಕ ಜನರು ಹಾಗೂ ಪ್ರಮುಖರು ಆಹ್ವಾನ ತಲುಪಿಸಲಾಗುವುದು. ಅರ್ಥಪೂರ್ಣ ವಾಲ್ಮೀಕಿ ಜಯಂತಿ ಆಚರಣೆಗೆ ಸಹಕರಿಸಬೇಕು ಎಂದು ಅವರು ಕೋರಿದರು.

ಎಂ.ಶ್ರೀನಿವಾಸ್, ಮಹದೇವನಾಯಕ, ಚಂದ್ರಶೇಖರ್, ರಾಜಣ್ಣ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

ಕನ್ನಡ ರಾಜ್ಯೋತ್ಸವ: ಬರುವ ನ.1ರಂದು ತಾಲ್ಲೂಕು ಆಡಳಿತ ನಡೆಸುವ ಕನ್ನಡ ರಾಜ್ಯೋತ್ಸವ ಆಚರಣೆ ಹಿನ್ನೆಲೆಯಲ್ಲಿ ಬುಧವಾರ ಮಿನಿ ವಿಧಾನಸೌಧದಲ್ಲಿ ಪೂರ್ವಭಾವಿ ಸಭೆ ನಡೆಯಿತು. ತಹಶೀಲ್ದಾರ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ಡಾ.ನಾಗರಾಜು, ಪಶುಪಾಲನಾ ಇಲಾಖೆ ಸಹಾಯಕ ನಿರ್ದೇಶಕ ಡಾ.ರವಿಕುಮಾರ್, ಸಿಡಿಪಿಒ ಮಂಜುನಾಥ್, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಪುರುಷೋತ್ತಮ, ಕರ್ನಾಟಕ ರಕ್ಷಣಾ ವೇದಿಕೆ ತಾಲ್ಲೂಕು ಅಧ್ಯಕ್ಷ ಕೆ.ಬಿ.ಬಸವರಾಜು, ದಸಂಸ ಮುಖಂಡ ಕುಬೇರಪ್ಪ, ಕೆ.ಬಾಬು ಇತರರು ಪಾಲ್ಗೊಂಡಿದ್ದರು.

`ಆರೋಗ್ಯಕ್ಕಾಗಿ ಕೈ ತೊಳೆಯಿರಿ~
ಕಿಕ್ಕೇರಿ: ನಿತ್ಯವೂ ಕೈ ತೊಳೆಯುವ ಪರಿಪಾಠ ರೂಢಿಸಿಕೊಂಡರೆ ಕಾಯಿಲೆಗಳನ್ನು ನಿಯಂತ್ರಿಸಬಹುದು  ಎಂದು ಗ್ರಾಮ ಪಂಚಾಯಿತಿ ಅಧ್ಯಕ್ಷ ಕೆ.ಟಿ.ಪರಮೇಶ್ ಅಭಿಪ್ರಾಯಪಟ್ಟರು.

ಗ್ರಾಮ ಪಂಚಾಯಿತಿಯಲ್ಲಿ ಬುಧವಾರ ನಡೆದ `ವಿಶ್ವ ಕೈ ತೊಳೆಯುವ ದಿನಾಚರಣೆ~ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

 ಬಹುತೇಕ ಕ್ರಿಮಿಕೀಟಗಳು ಕೈಯಲ್ಲಿನ ಉಗುರು ಸಂದಿಯಲ್ಲಿ ಇರುವುದರಿಂದ ಕೈ ತೊಳೆಯದೆ ಏನನ್ನೂ ತಿನ್ನದಿರಿ ಎಂದು ಸಲಹೆ ನೀಡಿದರು.

ತಾಲ್ಲೂಕು ಕಾರ್ಯ ನಿರ್ವಾಹಣಾಧಿಕಾರಿ ಚಂದ್ರಮೌಳಿ ಮಾತನಾಡಿದರು.
ಗ್ರಾಮ ಪಂಚಾಯಿತಿ ಸದಸ್ಯ ಕೆ.ವಿ.ಅರುಣ್‌ಕುಮಾರ್, ಆರೋಗ್ಯ ಸಹಾಯಕ ರಾಜು ಮಾತನಾಡಿದರು. ಉಪಾಧ್ಯಕ್ಷೆ ಭಾಗ್ಯಮ್ಮ, ಕೆ.ವಿ.ಅರುಣ್‌ಕುಮಾರ್, ಪುಟ್ಟಲಕ್ಷ್ಮೀ, ಜಯಮ್ಮ, ಆಹಾರ ಪರಿವೀಕ್ಷಕ ನಾಗರಾಜು, ಕೆ.ಜೆ.ಅಣ್ಣಯ್ಯ, ವಿವಿಧ ಸ್ತ್ರೀ ಶಕ್ತಿ ಸಂಘ ಸಮೂಹದವರು, ಮಹಿಳಾ ಸಮಾಜದವರು, ಆಶಾ ಕಾರ್ಯಕರ್ತೆಯರು ಇದ್ದರು.

ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಕೆ.ಎನ್.ಕುಮಾರ್ ಸ್ವಾಗತಿಸಿ, ಮಧುಕರ್ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.