ADVERTISEMENT

ವಿದ್ಯೆಯಷ್ಟೇ ರಕ್ತದಾನವೂ ಶ್ರೇಷ್ಠ: ಶಂಕರಪ್ಪ

​ಪ್ರಜಾವಾಣಿ ವಾರ್ತೆ
Published 15 ಜೂನ್ 2013, 5:20 IST
Last Updated 15 ಜೂನ್ 2013, 5:20 IST

ಮಂಡ್ಯ: ವಿದ್ಯಾದಾನದಷ್ಟೇ ರಕ್ತದಾನವೂ ಶ್ರೇಷ್ಠವಾದುದು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಶಂಕರಪ್ಪ ಅವರು ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ರಾಜ್ಯ ಏಡ್ಸ್ ಪ್ರತಿಬಂಧಕ ಮತ್ತು ನಿಯಂತ್ರಣ ಘಟಕ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಜೊತೆಗೊಡಿ ಶುಕ್ರವಾರ ನಗರದ ಗಾಂಧಿ ಭವನದಲ್ಲಿ ಆಯೋಜಿಸಿದ್ದ `ವಿಶ್ವ ರಕ್ತದಾನಿಗಳ ದಿನಾಚರಣೆ' ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಪ್ರತಿಯೊಬ್ಬರೂ, ಸ್ವಯಂ ಪ್ರೇರಿತವಾಗಿ ರಕ್ತದಾನ ಮಾಡುವ ಮೂಲಕ ಜೀವ ಉಳಿಸುವಂತಹ ಪವಿತ್ರ ಕೆಲಸಕ್ಕೆ ಮುಂದಾಗಬೇಕು ಎಂದು ಸಲಹೆ ನೀಡಿದರು.

ಇದೇ ಸಂದರ್ಭದಲ್ಲಿ ರಕ್ತದಾನಿಗಳಾದ ಚಿನ್ನಗಿರಿಕೊಪ್ಪಲು ಗ್ರಾಮದ ಸ್ವಾಮಿಗೌಡ, ರಾಜಮುನಿ ಹಾಗೂ ರಕ್ತ ದಾನ ಶಿಬಿರದ ಮೂಲಕ ರಕ್ತ ಸಂಗ್ರಹಿಸಿಕೊಟ್ಟಿರುವ ಜೀವಧಾರೆ ಟ್ರಸ್ಟ್‌ನ ನಟರಾಜು, ಮಳವಳ್ಳಿ ವಿಶ್ವಮಾನವ ಯುವಕರ ಸಂಘದ ಗೋಪಿ, ಪಿಇಎಸ್ ಎಂಜಿನಿಯರಿಂಗ್ ಕಾಲೇಜಿನ ಪರವಾಗಿ ಉಮೇಶ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

ರೆಡ್‌ಕ್ರಾಸ್ ಸಂಸ್ಥೆಯ ಮೀರಾ ಶಿವಲಿಂಗಯ್ಯ, ಜಿಲ್ಲಾ ಆರೋಗ್ಯಾಧಿಕಾರಿ ಡಾ. ಮರೀಗೌಡ, ಡಾ. ರೋಚನಾ, ಡಾ. ಮಂಜುನಾಥ್ ಸೇರಿದಂತೆ ಹಲವರು ಇದ್ದರು. ಸಮಾರಂಭದ ನಂತರ ಹಲವು ಮಂದಿ ರಕ್ತದಾನ ಮಾಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.