ADVERTISEMENT

ವಿಶೇಷ ಪ್ಯಾಕೇಜ್‌ಗೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 3 ಜೂನ್ 2013, 7:00 IST
Last Updated 3 ಜೂನ್ 2013, 7:00 IST

ಮಂಡ್ಯ: ರಾಜ್ಯ ಸರ್ಕಾರವು ಬಜೆಟ್‌ನಲ್ಲಿ ಹಿಂದುಳಿದ ವರ್ಗಗಳ ಅಭಿವೃದ್ಧಿಗೆ 3 ಸಾವಿರ ಕೋಟಿ ರೂಪಾಯಿಗಳ ವಿಶೇಷ ಪ್ಯಾಕೇಜ್ ಘೋಷಿಸಬೇಕು ಎಂದು ಡಿ. ದೇವರಾಜ ಅರಸು ಸ್ವಾಭಿಮಾನಿ ಹಿಂದುಳಿದ ವರ್ಗಗಳ ವೇದಿಕೆ ಅಧ್ಯಕ್ಷ ಎಂ.ಪಿ. ಅರುಣ್‌ಕುಮಾರ್ ಆಗ್ರಹಿಸಿದರು.

ನಗರದಲ್ಲಿ ಇತ್ತೀಚೆಗೆ ವೇದಿಕೆ ಸಭೆಯಲ್ಲಿ ರಾಜ್ಯದಲ್ಲಿ ಶೇ 50 ರಷ್ಟು ಜನರು ಜನಾಂಗದವರಿದ್ದು, ಸಾಮಾ ಜಿಕ, ಆರ್ಥಿಕ, ಶೈಕ್ಷಣಿಕವಾಗಿ ತೀರ ಹಿಂದುಳಿದಿದ್ದಾರೆ. ಅವರ ಅಭಿವೃದ್ಧಿಗೆ ಆದ್ಯತೆ ನೀಡಬೇಕು ಎಂದು ಮನವಿ ಮಾಡಿದರು. ಡಿ. ದೇವರಾಜ ಅರಸು ಅಭಿವೃದ್ಧಿ ನಿಗಮದ ವತಿಯಿಂದ ವಿವಿಧ ಕಾರ್ಯಕ್ಕೆ ನೀಡುವ ಸಾಲವನ್ನು 20 ಸಾವಿರದಿಂದ 50 ಸಾವಿರಕ್ಕೆ ಹೆಚ್ಚಿಸಬೇಕು.

ಸಹಾಯ ಧನವನ್ನೂ ದ್ವಿಗುಣಗೊಳಿಸಬೇಕು ಎಂದು ಒತ್ತಾಯಿಸಿದರು. ಮುಖಂಡರಾದ ಎನ್. ಸೋಮಶೇಖರ್, ಎಂ. ಕುಮಾರ್, ನಾಗರತ್ನ ಉಪ್ಪಾರ, ಅಶೋಕ್, ರಾಜೇಶ್, ಮಹೇಶ್ ಮತ್ತಿತರರು ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT