ADVERTISEMENT

ವ್ಯಕ್ತಿ ಸಾವು: ಡೆಂಗೆ ಶಂಕೆ

​ಪ್ರಜಾವಾಣಿ ವಾರ್ತೆ
Published 19 ಜೂನ್ 2013, 12:33 IST
Last Updated 19 ಜೂನ್ 2013, 12:33 IST

ಮದ್ದೂರು: ತೀವ್ರ ಜ್ವರದಿಂದ ಬಳಲುತ್ತಿದ್ದ ತಾಲ್ಲೂಕಿನ ಕೊಪ್ಪ ಹೋಬಳಿ ಚಿಕ್ಕೋನಹಳ್ಳಿಯ ಸಿದ್ದೇಗೌಡ(65) ಸೋಮವಾರ ರಾತ್ರಿ ಮೃತಪಟ್ಟಿದ್ದಾರೆ.

ಇವರು ಡೆಂಗೆ ಜ್ವರದಿಂದ ಮೃತಪಟ್ಟಿದ್ದಾರೆ ಎಂದು ಶಂಕಿಸಲಾಗಿದೆ.

ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಇವರನ್ನು ವಾರದ ಹಿಂದೆ ಬೆಂಗಳೂರಿನ ಕೆಂಪೇಗೌಡ ಆಸ್ಪತ್ರೆಗೆ ದಾಖಲಿಸಲಾಗಿತ್ತು. 

  ಇವರ ಅಂತ್ಯಕ್ರಿಯೆ ಚಿಕ್ಕೋನಹಳಿಯಲ್ಲಿ ಮಂಗಳವಾರ ಮಧ್ಯಾಹ್ನ ನೆರವೇರಿತು.

ದೃಢಪಟ್ಟಿಲ್ಲ: ಸಿದ್ದೇಗೌಡ ಅವರು ಕಾಮಾಲೆಯಿಂದ (ಜಾಂಡಿಸ್) ಬಳಲುತ್ತಿದ್ದರು. ಇವರು ಡೆಂಗೆ ಜ್ವರದಿಂದ ಮೃತಪಟ್ಟಿದ್ದಾರೆ ಎಂಬುದು ದೃಢಪಟ್ಟಿಲ್ಲ ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ.ನಿರಂಜನ್ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.