ADVERTISEMENT

ಶಿಕ್ಷಕರಿಂದ ಆದರ್ಶ ಸಮಾಜ ನಿರ್ಮಾಣ ಸಾಧ್ಯ

​ಪ್ರಜಾವಾಣಿ ವಾರ್ತೆ
Published 10 ಮೇ 2012, 8:55 IST
Last Updated 10 ಮೇ 2012, 8:55 IST

ಭಾರತೀನಗರ: ಶಿಕ್ಷಕರು ತಮ್ಮ ಕರ್ತವ್ಯವನ್ನು ನಿಷ್ಠೆ ಮತ್ತು ಪ್ರಾಮಾಣಿಕತೆಯಿಂದ ನಿರ್ವಹಿಸಿದರೆ ಆದರ್ಶ ಸಮಾಜ ನಿರ್ಮಾಣ ಸಾಧ್ಯ ಎಂದು ಭಾರತೀ  ಪದವಿ ಕಾಲೇಜಿನ ಪ್ರಾಧ್ಯಾಪಕ ಪ್ರೊ.ವಿ.ಆರ್.ಅನಂತನ್ ಹೇಳಿದರು.

ನಗರದ ಭಾರತೀ ಶಿಕ್ಷಣ ಮಹಾವಿದ್ಯಾಲಯದ ಇಗ್ನೋ ಅಧ್ಯಯನ ಕೇಂದ್ರದಲ್ಲಿ ಬಿ.ಇಡಿ ಪ್ರಶಿಕ್ಷಣಾರ್ಥಿಗಳಿಗಾಗಿ ನಡೆಯುತ್ತಿರುವ 12ದಿನಗಳ ಕಾರ್ಯಾಗಾರವನ್ನು ಮಂಗಳವಾರ ಉದ್ಘಾಟಿಸಿ ಮಾತನಾಡಿದರು.

ಜಾಗತೀಕರಣದ ಹಿನ್ನಲೆಯಲ್ಲಿ ಮುಕ್ತ ವಿಶ್ವವಿದ್ಯಾನಿಲಯಗಳ ಮೂಲಕ ಗ್ರಾಮೀಣ ಪ್ರದೇಶದ ಸಾಮಾನ್ಯ ಜನತೆಯ ಮನೆ ಬಾಗಿಲಿಗೆ ಉನ್ನತ ಶಿಕ್ಷಣ ತಲುಪುತ್ತಿದೆ. ಇದರಲ್ಲಿ ಇಗ್ನೋ ಪಾತ್ರ ಹೆಚ್ಚಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. 1987ರಲ್ಲಿ ಕೇವಲ ನಾಲ್ಕು ಸಾವಿರ ವಿದ್ಯಾರ್ಥಿಗಳನ್ನು ಹೊಂದಿದ್ದ ಇಗ್ನೋ ಇಂದು ಪ್ರತಿ ವರ್ಷ 40 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ವಿವಿಧ ವಿಷಯಗಳಲ್ಲಿ ಪದವಿ ನೀಡುತ್ತಿದ್ದು, ರಾಷ್ಟ್ರದಲ್ಲಿ 12ನೇ ಸ್ಥಾನದಲ್ಲಿದೆ ಎಂದರು.

ಪ್ರಾಂಶುಪಾಲ ಪ್ರೊ.ಎಸ್.ಎಲ್.ಸುರೇಶ್ ಕಾರ್ಯಾಗಾರದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪ್ರಾಧ್ಯಾಪಕರಾದ ಡಾ.ಪಿ.ಉಮಾದೇವಿ, ಅಂಥೋಣಿಪೌಲ್ ಉಪನ್ಯಾಸಕರಾದ ಎ.ಸಿ.ಮಾನಸ ಮಹದೇವಸ್ವಾಮಿ, ಡಿ.ಎಲ್.ಅನಿಲ್  ಕುಮಾರ್, ರಂಜಿತಾ, ಕಚೇರಿ ಸಹಾಯಕ ರಾಜಕುಮಾರ್ ಸೇರಿದಂತೆ ಇತರರು ಹಾಜರಿದ್ದರು.

ಅರ್ಜಿ ಆಹ್ವಾನ
ಮಂಡ್ಯ: ಮೈಸೂರಿನ ಎನ್.ಆರ್.ಮೊಹಲ್ಲಾದ ಟಿಎನ್‌ಎನ್ ಆದರ್ಶ ವಿದ್ಯಾರ್ಥಿ ನಿಲಯಕ್ಕೆ 2012-13ನೇ ಶೈಕ್ಷಣಿಕ ಸಾಲಿನ ಪ್ರವೇಶಕ್ಕೆ 5 ರಿಂದ 10ನೇ ತರಗತಿವರೆಗೆ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಜೂ.10 ಕಡೇ ದಿನ. ಹೆಚ್ಚಿನ ಮಾಹಿತಿಗೆ ಮೊ.ಸಂ. 9739385079, 9945415294 ಸಂಪರ್ಕಿಸಿ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.