ADVERTISEMENT

ಶೌಚಾಲಯ ಕಾಮಗಾರಿಗೆ ಶಾಸಕ ಚಾಲನೆ

​ಪ್ರಜಾವಾಣಿ ವಾರ್ತೆ
Published 4 ಡಿಸೆಂಬರ್ 2012, 6:30 IST
Last Updated 4 ಡಿಸೆಂಬರ್ 2012, 6:30 IST

ಶ್ರೀರಂಗಪಟ್ಟಣ: ಪಟ್ಟಣದ ಮಿನಿ ವಿಧಾನಸೌಧ ಬಳಿ ಸಾರ್ವಜನಿಕ ಶೌಚಾಲಯ ನಿರ್ಮಾಣ ಕಾಮಗಾರಿಗೆ ಶಾಸಕ ರಮೇಶ ಬಂಡಿಸಿದ್ದೇಗೌಡ ಸೋಮವಾರ ಗುದ್ದಲಿ ಪೂಜೆ ನೆರವೇರಿಸಿದರು.

ನಂತರ ಮಾತನಾಡಿದ ಅವರು, ಮಿನಿ ವಿಧಾನಸೌಧ ಬಳಿ ಶೌಚಾಲಯ ಇಲ್ಲ ಎಂಬ ದೂರು ಕೇಳಿ ಬರುತ್ತಿದ್ದವು. ತಾಲ್ಲೂಕಿನ ವಿವಿಧೆಡೆಗಳಿಂದ ಇಲ್ಲಿಗೆ ಬರುವ ಜನರು ತೊಂದರೆ ಅನುಭವಿಸುತ್ತಿದ್ದರು. ಹಾಗಾಗಿ ಮಹಿಳೆಯರಿಗೆ ಹಾಗೂ ಪುರುಷರಿಗೆ ಪ್ರತ್ಯೇಕ ಶೌಚಾಲಯ ನಿರ್ಮಿಸಲಾಗುತ್ತಿದೆ. ಸ್ನಾನಗೃಹ ಕೂಡ ಇರುತ್ತದೆ ಎಂದರು.

ಪುರಸಭೆ ಮುಖ್ಯಾಧಿಕಾರಿ ಎಂ.ರಾಜಣ್ಣ ಮಾತನಾಡಿ, ಶೌಚಾಲಯ ಹಾಗೂ ಸ್ನಾನದ ಗೃಹಗಳನ್ನು ಸಮರ್ಪಕವಾಗಿ ನಿರ್ವಹಿಸುವ ಉದ್ದೇಶದಿಂದ ಸಿವಿಕ್ ಇಂಟರ್‌ನ್ಯಾಷನಲ್ ಸಂಸ್ಥೆಗೆ ವಹಿಸಲಾಗುವುದು ಎಂದು ತಿಳಿಸಿದರು. ತಹಶೀಲ್ದಾರ್ ಅರುಳ್‌ಕುಮಾರ್, ಪುರಸಭೆ ಅಧ್ಯಕ್ಷೆ ಭಾಗ್ಯಮ್ಮ ಕೃಷ್ಣಪ್ಪ, ಸದಸ್ಯರಾದ ಎಂ.ಎಲ್.ದಿನೇಶ್, ಎಂ.ನಂದೀಶ್, ಎಸ್.ಪ್ರಕಾಶ್, ಜಯರಾಂ, ಎಂಜಿನಿಯರ್ ರೂಪಾ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.