ADVERTISEMENT

`ಶೌಚಾಲಯ ನಿರ್ಮಾಣಕ್ಕೆ ರೂ 9200 ನೆರವು'

​ಪ್ರಜಾವಾಣಿ ವಾರ್ತೆ
Published 14 ಡಿಸೆಂಬರ್ 2012, 6:33 IST
Last Updated 14 ಡಿಸೆಂಬರ್ 2012, 6:33 IST

ಶ್ರೀರಂಗಪಟ್ಟಣ: ಶೌಚಾಲಯ ನಿರ್ಮಿಸಿಕೊಳ್ಳುವ ಅರ್ಹ ಫಲಾನುಭವಿಗಳಿಗೆ ನಿರ್ಮಲ ಭಾರತ್ ಅಭಿಯಾನ ಹಾಗೂ ಉದ್ಯೋಗ ಖಾತ್ರಿ ಯೋಜನೆಗಳಡಿ ಒಟ್ಟು ರೂ.9200 ನೆರವು ಸಿಗಲಿದೆ ಎಂದು ನಿರ್ಮಲ ಭಾರತ್ ಯೋಜನೆಯ ನೋಡಲ್ ಅಧಿಕಾರಿ ದೊರೆಸ್ವಾಮಿ ತಿಳಿಸಿದರು.

ತಾಲ್ಲೂಕಿನ ಬಾಬುರಾಯನಕೊಪ್ಪಲು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗುರುವಾರ ಏರ್ಪಡಿಸಿದ್ದ ಸ್ವಚ್ಛತಾ ಉತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಸಣ್ಣ ಹಾಗೂ ಅತಿಸಣ್ಣ ರೈತರು, ಅಲ್ಪಸಂಖ್ಯಾತರು, ಅಂಗವಿಕಲರು, ಪರಿಶಿಷ್ಟ ಜಾತಿ ಸೇರಿದಂತೆ 7 ವರ್ಗದ ಜನರಿಗೆ ಈ ಸೌಲಭ್ಯ ಸಿಗಲಿದೆ. ಕೇಂದ್ರ ಸರ್ಕಾರ ಪ್ರಾಯೋಜಿತ ನಿರ್ಮಲ ಭಾರತ್ ಯೋಜನೆಯಡಿ ರೂ.4700 ಹಾಗೂ ಉದ್ಯೋಗ ಖಾತ್ರಿ ಯೋಜನೆಯಡಿ ರೂ.4500 ನೆರವು ನೀಡಲಾಗುವುದು ಎಂದು ಅವರು ಹೇಳಿದರು.

ಸಣ್ಣ, ಅತಿ ಸಣ್ಣ ರೈತರು ಸಬಂಧಿಸಿದವರಿಂದ ದೃಢೀಕರಣ ಸಲ್ಲಿಸಬೇಕು. ಎಪಿಎಲ್ ಪಟ್ಟಿಯಲ್ಲಿ ಇರುವವರು ಕೂಡ ಶೌಚಾಲಯ ನಿರ್ಮಾಣಕ್ಕೆ ಅಗತ್ಯ ನೆರವು ಪಡೆದುಕೊಳ್ಳಬಹುದು. ಭಾರತ್ ನಿರ್ಮಾಣ್ ಸ್ವಯಂ ಸೇವಕರು ಹಾಗೂ ಆಶಾ ಕಾರ್ಯಕರ್ತರ ಜತೆಗೂಡಿ ನಿರ್ಮಲ ಗ್ರಾಮ ಯೋಜನೆ ಯಶಸ್ಸಿಗೆ ಕಾರ್ಯಕ್ರಮ ರೂಪಿಸಲಾಗುತ್ತಿದೆ. ಗ್ರಾಮ ಪಂಚಾಯಿತಿ ಅಧ್ಯಕ್ಷರು, ಸದಸ್ಯರು ಹಾಗೂ ಸಿಬ್ಬಂದಿಗೆ ತರಬೇತಿ ನೀಡಲಾಗುವುದು ಎಂದರು. ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಕೆ.ವಿ.ಅಮರನಾಥ್, ಕಿರಂಗೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಪುಟ್ಟರಾಜು, ಜೆ.ನಂಜುಡಯ್ಯ, ಸುದರ್ಶನ್ ಇದ್ದರು.

ಉದ್ಘಾಟನೆ ಇಂದು
ಮದ್ದೂರು: ತಾಲ್ಲೂಕಿನ ಹೂತಗೆರೆ ಗ್ರಾಮ ಪಂಚಾಯಿತಿ ಆವರಣದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಭಾರತ್ ನಿರ್ಮಾಣ್ ರಾಜೀವ್‌ಗಾಂಧಿ ಸೇವಾ ಕೇಂದ್ರದ ಕಟ್ಟಡವನ್ನು ಶಾಸಕಿ ಕಲ್ಪನಾ ಸಿದ್ದರಾಜು ಶುಕ್ರವಾರ ಮಧ್ಯಾಹ್ನ 12 ಗಂಟೆಗೆ ಉದ್ಘಾಟಿಸುವರು.  ಗ್ರಾ. ಪಂ. ಅಧ್ಯಕ್ಷೆ ಪ್ರೀತಿ ಕೃಷ್ಣ ಅಧ್ಯಕ್ಷತೆ ವಹಿಸುವರು.  ಸಾರ್ವಜನಿಕರು ಪಾಲ್ಗೊಳ್ಳಬೇಕು ಎಂದು ಪಿಡಿಒ ಸಿ.ಚನ್ನಯ್ಯ ಕೋರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.