ADVERTISEMENT

ಸಮಾನ ಶಿಕ್ಷಣ ನೀತಿ ಜಾರಿಗೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 3 ಜುಲೈ 2012, 6:05 IST
Last Updated 3 ಜುಲೈ 2012, 6:05 IST

ಮಂಡ್ಯ: ದೇಶದಲ್ಲಿ ಏಕರೂಪ ಹಾಗೂ ಸಮಾನ ಶಿಕ್ಷಣ ನೀತಿ ಜಾರಿಗೊಳಿಸಬೇಕು ಎಂದ ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ನಗರದ ಜಿಲ್ಲಾಧಿಕಾರಿ ಕಚೇರಿ ಮುಂದೆ ಸೋಮವಾರ ಪ್ರತಿಭಟನೆ ನಡೆಸಿದರು.

ಜಾತಿ, ಲಿಂಗ, ವರ್ಗ ರಹಿತವಾದ ಸರ್ವರಿಗೂ ಸಮಾನವಾಗಿ ಶಿಕ್ಷಣ ನೀಡಲು ಕೇಂದ್ರ ಸರ್ಕಾರ, ಶಿಕ್ಷಣವನ್ನು ರಾಷ್ಟ್ರೀಕರಣಗೊಳಿಸಬೇಕು. ರಾಜ್ಯ ಸರ್ಕಾರದ ವ್ಯಾಪಾರೀಕರಣ ಹಾಗೂ ಕೇಸರೀಕರಣ ಶಿಕ್ಷಣದ ಮನುವಾದಿ ನೀತಿಯನ್ನು ರದ್ದುಪಡಿಸಬೇಕು ಎಂದ ಆಗ್ರಹಿಸಿದರು.

ಭಾಷಾವಾರು ಪ್ರಾಂತ್ಯಗಳ ಭಾಷಾ ನೀತಿಗೆ ಧಕ್ಕೆಯಾಗದಂತೆ ದೇಶದಲ್ಲಿ ಏಕರೂಪ ಮತ್ತು ಸಮಾನ ಶಿಕ್ಷಣ ನೀತಿ ಜಾರಿಗೊಳಿಸಬೇಕು.

ಭಾಷಾ ತಜ್ಞರಿಂದ ತಂತ್ರಾಂಶ ಅಭಿವೃದ್ಧಿಪಡಿಸಿ, ಶಿಕ್ಷಣದಲ್ಲಿ ಅಳವಡಿಸಬೇಕು ಎಂದು ಒತ್ತಾಯಿಸಿದರು. ರಾಜ್ಯ ಸಂಚಾಲಕ ವೆಂಕಟಗಿರಿಯಯ್ಯ, ಜಿಲ್ಲಾ ಸಂಚಾಲಕ ಅಂದಾನಿ ಸೋಮನಹಳ್ಳಿ, ಬಿ.ಎಂ. ಸತ್ಯ, ಡಿ. ಅಂಕಯ್ಯ, ಡಿ.ವೆಂಕಟೇಶ್, ಕಂಚಿನಕೋಟೆ ಮೂರ್ತಿ ಮುಂತಾದವರು ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.