ADVERTISEMENT

ಸರ್ಕಾರಿ ಜಮೀನಿನಲ್ಲಿ ಯೋಧ ಗುರು ಅಂತ್ಯಕ್ರಿಯೆ– ಜಿಲ್ಲಾಡಳಿತ

ಯೋಧನ ಅಂತ್ಯ ಕ್ರಿಯೆ

​ಪ್ರಜಾವಾಣಿ ವಾರ್ತೆ
Published 15 ಫೆಬ್ರುವರಿ 2019, 14:31 IST
Last Updated 15 ಫೆಬ್ರುವರಿ 2019, 14:31 IST
ಹುತಾತ್ಮ ಯೋಧ ಗುರು
ಹುತಾತ್ಮ ಯೋಧ ಗುರು   

ಮಂಡ್ಯ: ಯೋಧ ಗುರು ಕುಟುಂಬಕ್ಕೆ ಗುಡಿಗೆರೆ ಕಾಲೊನಿಯಲ್ಲಿ ತುಂಡು ಭೂಮಿಯೂ ಇಲ್ಲ. ಸ್ಥಳಕ್ಕೆ ಭೇಟಿ ಪರಿಶೀಲಿಸಿದ ಜಿಲ್ಲಾಧಿಕಾರಿ ಎನ್‌.ಮಂಜುಶ್ರೀ, ಗ್ರಾಮದ ಎಳನೀರು ಮಾರುಕಟ್ಟೆ ಎದುರಿನ ಸರ್ಕಾರಿ ಭೂಮಿಯಲ್ಲಿ ಅಂತ್ಯಸಂಸ್ಕಾರ ಮಾಡುವುದಾಗಿ ತಿಳಿಸಿದರು.

ಇದಕ್ಕೆ ವಿರೋಧಿಸಿದ ಗ್ರಾಮಸ್ಥರು, ಭಾರತೀನಗರದ ಪ್ರಮುಖ ಸ್ಥಳ ಅಥವಾ ಮಳವಳ್ಳಿ– ಮದ್ದೂರು ಮುಖ್ಯರಸ್ತೆಯಲ್ಲಿ ಅಂತ್ಯಸಂಸ್ಕಾರ ನೆರವೇರಿಸಬೇಕು. ಗುರು ಪುತ್ಥಳಿ ಹಾಗೂ ಸ್ಮಾರಕ ನಿರ್ಮಿಸಬೇಕು ಎಂದು ಒತ್ತಾಯಿಸಿದರು. ಮುಖ್ಯಮಂತ್ರಿ, ಉಸ್ತುವಾರಿ ಸಚಿವರೊಂದಿಗೆ ಚರ್ಚಿಸಿ ನಿರ್ಧಾರ ಪ್ರಕಟಿಸಲಾಗುವುದು. ಶನಿವಾರ ನಸುಕಿನಲ್ಲಿ ಮೃತದೇಹ ಗ್ರಾಮಕ್ಕೆ ಬರುವ ನಿರೀಕ್ಷೆ ಇದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

‘ಪತ್ನಿಗೆ ಸರ್ಕಾರಿ ಉದ್ಯೋಗ’

ADVERTISEMENT

‘ಗುರು ಕುಟುಂಬಕ್ಕೆ ಸರ್ಕಾರದ ನೆರವಿನ ಜೊತೆಗೆ ಅವರ ಪತ್ನಿಗೆ ಉದ್ಯೋಗ ಕೊಡುವ ಸಂಬಂಧ ಪರಿಶೀಲನೆ ನಡೆಸುವಂತೆ ಮಂಡ್ಯ ಉಸ್ತುವಾರಿ ಸಚಿವರಿಗೆ ಸೂಚಿಸಿದ್ದೇನೆ’ ಎಂದು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಚನ್ನರಾಯಪಟ್ಟಣದಲ್ಲಿ ಸುದ್ದಿಗಾರರಿಗೆ ತಿಳಿಸಿದರು.

* ಇವನ್ನೂ ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.