
ನಾಗಮಂಗಲ: ತಾಲ್ಲೂಕಿನ ಬೆಳ್ಳೂರಿನಲ್ಲಿರುವ ಹತ್ತು ಹಲವು ವೈವಿಧ್ಯಗಳಲ್ಲಿ ಬಿ.ಜಿ. ನಗರದಲ್ಲಿರುವ ಬಿಜಿಎಸ್ ತಾಂತ್ರಿಕ ಮಹಾವಿದ್ಯಾಲಯವೂ ಒಂದು. ಇದರ ಮತ್ತೊಂದು ವಿಶೇಷವೆಂದರೆ ಈ ವಿದ್ಯಾಲಯವೂ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ಆಶ್ರಯದಲ್ಲಿ ನಡೆಯುತ್ತಿರುವುದು. ಈ ತಾಂತ್ರಿಕ ಮಹಾವಿದ್ಯಾಲಯವು ಭೈರವೈಕ್ಯ ಡಾ.ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರಿಂದ 2005ರಲ್ಲಿ ಸ್ಥಾಪಿಸಲ್ಪಟ್ಟಿತು.
ಇದುವರೆಗೂ ಈ ವಿದ್ಯಾಲಯದಿಂದ 5 ಬ್ಯಾಚ್‌ಗಳು ಪದವಿ ಪಡೆದು ಹೊರಹೋಗಿವೆ. ಈ ಕಾಲೇಜು ಎಲ್ಲಾ ವಿಷಯಗಳಲ್ಲೂ ಉತ್ತಮ ಸಾಧನೆ ಮಾಡಿದೆ. ಕರ್ನಾಟಕದ ಅನೇಕ ಪ್ರಮುಖ ಕಾಲೇಜುಗಳಲ್ಲಿ ಈ ಕಾಲೇಜು ಒಂದು. ಕಳೆದ 2 ವರ್ಷಗಳಿಂದ ‘ಟಾಪರ್ಸ್ ಆಫ್ ಆಲ್ ಟಾಫರ್ಸ್’ ಸ್ಥಾನವನ್ನು ಈ ಕಾಲೇಜಿನ ವಿದ್ಯಾರ್ಥಿಗಳು ಪಡೆದುಕೊಂಡಿದ್ದಾರೆ. ಪ್ರತಿ ವರ್ಷ ರ್‌್ಯಾಂಕ್ ಪಡೆದ ಕರ್ನಾಟಕದ ಎಲ್ಲಾ ವಿದ್ಯಾರ್ಥಿಗಳನ್ನು ಉದ್ದೇಶಿಸಿ ನಡೆವ ಪರೀಕ್ಷೆಯಲ್ಲಿ ಈ ಕಾಲೇಜಿನ ವಿದ್ಯಾರ್ಥಿಗಳು ಸತತವಾಗಿ ಪ್ರಥಮ ಸ್ಥಾನವನ್ನು ಕಾಯ್ದಿರಿಸಿಕೊಂಡಿದ್ದಾರೆ.
2011ನೇ ಸಾಲಿನಲ್ಲಿ ಜೆ. ಜ್ಯೋತಿ ಮೆಡಿಕಲ್ ಎಲೆಕ್ಟ್ರಾನಿಕ್ಸ್‌ನಲ್ಲಿ ಹಾಗೂ 2012ನೇ ಸಾಲಿನಲ್ಲಿ ಸಿ.ಎಸ್. ಉಮೇಶ್ ಕಂಪ್ಯೂಟರ್ ಸೈನ್ಸ್ ಮತ್ತು ಎಂಜಿನಿಯರಿಂಗ್‌ನಲ್ಲಿ ಸತತವಾಗಿ ಪ್ರಥಮ ಸ್ಥಾನವನ್ನು ಕಾಲೇಜಿಗೆ ತಂದುಕೊಟ್ಟಿದ್ದಾರೆ.
ಇದೆಲ್ಲದಕ್ಕೂ ಕಾರಣ ಬಿಜಿಎಸ್ ತಾಂತ್ರಿಕ ಮಹಾವಿದ್ಯಾಲಯ ವಿದ್ಯಾರ್ಥಿಗಳಿಗೆ ನೀಡುತ್ತಿರುವ ಗುಣಮಟ್ಟದ ಶಿಕ್ಷಣ. ಉತ್ತಮ ಪರಿಕರಗಳನ್ನು ಹೊಂದಿರುವ ಪ್ರಯೋಗಾಲಯಗಳು, ನುರಿತ ಶಿಕ್ಷಕರು ಹಾಗೂ ಸಿಬ್ಬಂದಿಗಳಿಂದ ವಿದ್ಯಾರ್ಥಿಗಳಿಗೆ ತರಬೇತಿ ನೀಡಲಾಗುತ್ತಿದೆ. ಪ್ರತಿ ವರ್ಷ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು ಉತ್ತಮ ತರಬೇತಿ ಹೊಂದಿ ಎಂಜಿನಿಯರ್ ಪದವೀಧರರಾಗಿದ್ದಾರೆ.
ಈ ಸಾಲಿನ ಬಿಇ, ಎಂಬಿಎ ಹಾಗೂ ಎಂಟೆಕ್ ತರಗತಿಗಳಿಗೆ 500ಕ್ಕೂ ಹೆಚ್ಚು ವಿದ್ಯಾರ್ಥಿಗಳು ದಾಖಲಾಗಿದ್ದಾರೆ.
ಕಾಲೇಜಿನಲ್ಲಿ ವ್ಯಾಸಂಗ ಮಾಡಲು ಅವಕಾಶ ಇರುವ ಕೋರ್ಸುಗಳು:
ಬಿಇ ವಿಭಾಗದಲ್ಲಿ: ಸಿವಿಲ್ ಎಂಜಿನಿಯರಿಂಗ್, ಮೆಕ್ಯಾನಿಕಲ್ ಎಂಜಿನಿಯರಿಂಗ್, ಕಂಪ್ಯೂಟರ್ ಸೈನ್ಸ್ ಅಂಡ್ ಎಂಜಿನಿಯರಿಂಗ್, ಇನ್ಫರ್ಮೇಷನ್ ಸೈನ್ಸ್ ಅಂಡ್ ಎಂಜಿನಿಯ ರಿಂಗ್, ಎಲೆಕ್ಟ್ರಾನಿಕ್ಸ್ ಅಂಡ್ ಕಮ್ಯುನಿಕೇಷನ್ ಎಂಜಿನಿಯರಿಂಗ್ ಕೋರ್ಸುಗಳು ಲಭ್ಯವಿವೆ.
ಎಂ.ಟೆಕ್ ವಿಭಾಗದಲ್ಲಿ: ವಿಎಲ್‌ಎಸ್‌ಐ ಡಿಸೈನ್ ಅಂಡ್ ಎಂಬೆಡೆಡ್ ಸಿಸ್ಟಮ್ಸ್, ಕಂಪ್ಯೂಟರ್ ಸೈನ್ಸ್ ಅಂಡ್ ಎಂಜಿನಿಯರಿಂಗ್, ಸ್ಟ್ರಕ್ಚರಲ್ ಎಂಜಿನಿಯರಿಂಗ್ ಕೋರ್ಸುಗಳು.
ಮಾಸ್ಟರ್ ಆಫ್ ಬಿಸಿನೆಸ್ ಅಡ್ಮಿನಿಸ್ಟ್ರೇಷನ್ ಪಿಎಚ್‌ಡಿ ಪ್ರೋಗ್ರಾಮ್ಸ್: ಎಲೆಕ್ಟ್ರಾನಿಕ್ಸ್ ಅಂಡ್ ಕಮ್ಯುನಿಕೇಷನ್ ಎಂಜಿನಿಯರಿಂಗ್, ಕಂಪ್ಯೂಟರ್ ಸೈನ್ಸ್ ಅಂಡ್ ಎಂಜಿನಿಯರಿಂಗ್, ಸಿವಿಲ್ ಎಂಜಿನಿಯರಿಂಗ್ ಕೋರ್ಸುಗಳು.
ಆರ್ ಅಂಡ್ ಡಿ ಸೆಂಟರ್ಸ್: ಎಲೆಕ್ಟ್ರಾನಿಕ್ಸ್ ಅಂಡ್ ಕಮ್ಯುನಿಕೇಷನ್ ಎಂಜಿನಿಯರಿಂಗ್, ಸಿವಿಲ್ ಎಂಜಿನಿಯರಿಂಗ್ ಕೋರ್ಸುಗಳು ಲಭ್ಯವಿವೆ.
ಒಟ್ಟಾರೆಯಾಗಿ ವರ್ಷದಿಂದ ವರ್ಷಕ್ಕೆ ಕಾಲೇಜು ಅಭಿವೃದ್ಧಿಯ ಪಥದತ್ತ ದಾಪುಗಾಲು ಹಾಕುತ್ತಿದೆ. ಕೇವಲ ಕರ್ನಾಟಕ ರಾಜ್ಯವಷ್ಟೆ ಅಲ್ಲದೇ ನೆರೆ ರಾಜ್ಯಗಳಿಂದಲೂ ಈ ಕಾಲೇಜಿಗೆ ವಿದ್ಯಾರ್ಥಿಗಳು ವ್ಯಾಸಂಗಕ್ಕೆ ಆಗಮಿಸುತ್ತಾರೆ. ಕಾಲೇಜು ಇಷ್ಟೆಲ್ಲಾ ಸಾಧನೆ ಮಾಡುವಲ್ಲಿ ಪೂಜ್ಯ ಬಾಲಗಂಗಾಧರನಾಥ ಸ್ವಾಮೀಜಿ ಅವರ ಆಶೀರ್ವಾದ ಹಾಗೂ ನೂತನ ಪೀಠಾಧ್ಯಕ್ಷ ನಿರ್ಮಲಾನಂದನಾಥ ಮಹಾಸ್ವಾಮೀಜಿ ಅವರ ಸಹಕಾರ ಸಾಕಷ್ಟಿದೆ ಎನ್ನುತ್ತಾರೆ ಕಾಲೇಜಿನ ಪ್ರಾಂಶುಪಾಲ ಡಾ.ಬಿ.ಕೆ. ನರೇಂದ್ರ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.