ADVERTISEMENT

ಸಿ.ಎಂ.ಗೆ ಕಪ್ಪು ಬಾವುಟ ಪ್ರದರ್ಶನ: ಎಚ್ಚರಿಕೆ

​ಪ್ರಜಾವಾಣಿ ವಾರ್ತೆ
Published 12 ಮಾರ್ಚ್ 2018, 8:34 IST
Last Updated 12 ಮಾರ್ಚ್ 2018, 8:34 IST

ಮಂಡ್ಯ: ‘ಅಂಬೇಡ್ಕರ್ ಭವನ ಸೇರಿ ವಿವಿಧ ಕಾಮಗಾರಿಗಳ ಉದ್ಘಾಟನೆಗೆ ಬರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕಪ್ಪು ಬಾವುಟ ಪ್ರದರ್ಶನ ಮಾಡುತ್ತೇವೆ’ ಎಂದು ಡಾ.ಅಂಬೇಡ್ಕರ್ ಪೀಪಲ್ ಪಾರ್ಟಿ ಯುವ ರಾಜ್ಯ ಘಟಕದ ಅಧ್ಯಕ್ಷ ಸಿ.ಎಂ.ಕೃಷ್ಣ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ಸಂವಿಧಾನ ವಿರೋಧಿ ನಡೆಯ ಮೂಲಕ ಕಳೆದ 5 ವರ್ಷಗಳಲ್ಲಿ ಹಲವು ಜಾತಿಗಳಿಗೆ ಪ್ರತ್ಯೇಕ ನಿಗಮ ಸ್ಥಾಪಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದುರ್ಬಲ ಮುಖ್ಯಮಂತ್ರಿಯಾಗಿದ್ದು, ಅಧಿಕಾರದಲ್ಲಿ ರಾಜ್ಯದ ಪರಿಶಿಷ್ಟ ಜನಾಂಗಕ್ಕೆ ಸೂಕ್ತ ಭದ್ರತೆ ಒದಗಿಸಿಲ್ಲ. ಸ್ಪರ್ಶ ಜಾತಿಗಳನ್ನು ಕಾನೂನು ಬಾಹಿರವಾಗಿ ಎಸ್‌ಸಿ ಜಾತಿಗಳ ಪಟ್ಟಿಗೆ ಸೇರ್ಪಡೆ ಮಾಡಲು ಮುಂದಾಗಿದ್ದಾರೆ. ಮಾದಿಗ ಸಮುದಾಯಕ್ಕೆ ಪ್ರತ್ಯೇಕ ನಿಗಮ ಸ್ಥಾಪನೆಗೆ ಮುಂದಾಗಿರುವುದು ಸೂಕ್ತವಲ್ಲ’ ಎಂದು ದೂರಿದರು.

ವಕೀಲ ಜೆ.ರಾಮಯ್ಯ ಮಾತನಾಡಿ, ‘ಪರಿಶಿಷ್ಟ ಜಾತಿ ಮತ್ತು ಪಂಗಡದ ಅಭಿವೃದ್ಧಿಗೆ ಮೀಸಲಾಗಿದ್ದ ₹ 1 ಸಾವಿರ ಕೋಟಿ ಅನುದಾನ ಬಳಕೆಯಲ್ಲಿ ಸಚಿವ ಎಚ್.ಆಂಜನೇಯ ವಿಫಲವಾಗಿದ್ದಾರೆ. ಅನುದಾನವನ್ನು ರೈತರ ಸಾಲಮನ್ನಾ ಮಾಡಲು ಬಳಸಿರುವ ಕ್ರಮ ಖಂಡಿಸಿ ಮಾರ್ಚ್‌ 12ರಂದು ಮುಖ್ಯಮಂತ್ರಿ ಹಾಗೂ ಸಚಿವ ಎಚ್.ಆಂಜನೇಯ ಅವರಿಗೆ ಕಪ್ಪುಬಾವುಟ ಪ್ರದರ್ಶನ ಹಾಗೂ ಘೇರಾವ್ ಹಾಕುತ್ತೇವೆ’ ಎಂದರು. ಶ್ರೀಕಂಠ, ಪ್ರವೀಣ್, ವೆಂಕಟೇಶ್ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.