ADVERTISEMENT

ಹೆಣ್ಣು ಮಕ್ಕಳು ದೌರ್ಜನ್ಯದ ವಿರುದ್ಧ ಸಂಘಟಿತರಾಗಬೇಕು

ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಲಯದ ನ್ಯಾಯಾಧೀಶ ಸುಧೀರ್

​ಪ್ರಜಾವಾಣಿ ವಾರ್ತೆ
Published 18 ಅಕ್ಟೋಬರ್ 2025, 9:49 IST
Last Updated 18 ಅಕ್ಟೋಬರ್ 2025, 9:49 IST
ಕೆ.ಆರ್.ಪೇಟೆ ಪಟ್ಟಣದ ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿಶ್ವ ಮಾನಸಿಕ ಆರೋಗ್ಯ ದಿನ ಮತ್ತು ಅಂತರರಾಷ್ಟ್ರೀಯ ಹೆಣ್ಣು ಮಕ್ಕಳ ದಿನದ ಅಂಗವಾಗಿ ಆಯೋಜಿಸಿದ್ದ ಜಾಗೃತಿ ಕಾರ್ಯಕ್ರಮದಲ್ಲಿ ಭಾಗವಹಿಸಿರುವ ವಿದ್ಯಾರ್ಥನಿಯರು ಮತ್ತು ಪ್ರಾಧ್ಯಾಪಕರು
ಕೆ.ಆರ್.ಪೇಟೆ ಪಟ್ಟಣದ ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿಶ್ವ ಮಾನಸಿಕ ಆರೋಗ್ಯ ದಿನ ಮತ್ತು ಅಂತರರಾಷ್ಟ್ರೀಯ ಹೆಣ್ಣು ಮಕ್ಕಳ ದಿನದ ಅಂಗವಾಗಿ ಆಯೋಜಿಸಿದ್ದ ಜಾಗೃತಿ ಕಾರ್ಯಕ್ರಮದಲ್ಲಿ ಭಾಗವಹಿಸಿರುವ ವಿದ್ಯಾರ್ಥನಿಯರು ಮತ್ತು ಪ್ರಾಧ್ಯಾಪಕರು   

ಕೆ.ಆರ್. ಪೇಟೆ: ಹೆಣ್ಣು ಮಕ್ಕಳ ಮೇಲೆ ಪ್ರತಿದಿನವೂ ನಡೆಯುತ್ತಿರುವ ದಬ್ಬಾಳಿಕೆ, ದೌರ್ಜನ್ಯಗಳ ವಿರುದ್ಧ ಗಟ್ಟಿ ಧ್ವನಿಯಲ್ಲಿ ಪ್ರತಿಭಟಿಸುವ ಧೋರಣೆ ಅಳವಡಿಸಿಕೊಳ್ಳುವಂತೆ ಪಟ್ಟಣದ ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಲಯದ ನ್ಯಾಯಾಧೀಶ ಸುಧೀರ್ ಹೇಳಿದರು.

ಪಟ್ಟಣದ ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಗುರುವಾರ ತಾಲ್ಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಆರೋಗ್ಯ ಇಲಾಖೆ ಮತ್ತು ಮಹಿಳಾ ಮತ್ತು ಮಕ್ಕಳ ಇಲಾಖೆಯು ಆಯೋಜಿಸಿದ್ದ ವಿಶ್ವ ಮಾನಸಿಕ ಆರೋಗ್ಯ ದಿನ ಮತ್ತು ಅಂತರರಾಷ್ಟ್ರೀಯ ಹೆಣ್ಣು ಮಕ್ಕಳ ದಿನದ ಅಂಗವಾಗಿ ಆಯೋಜಿಸಿದ್ದ ಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕುಟುಂಬದಲ್ಲಿ ಜನಿಸುವ ಮಗು ಯಾವುದೇ ಇರಲಿ ಅದನ್ನು ಲಿಂಗತಾರತಮ್ಯ ಮಾಡುುದಾಗಲಿ, ಭೇದ ಭಾವದಿಂದ ನೋಡುವದನ್ನಾಗಲಿ ಪೋಷಕರು ಎಂದಿಗೂ ಮಾಡಬಾರದು. ಸಮಾನವಾಗಿ ಕಂಡು ಅವರಿಗೆ ಯೋಗ್ಯ ಶಿಕ್ಷಣ ನೀಡಿ, ತಮ್ಮ ಸ್ವಂತ ಬದುಕನ್ನು ಕಟ್ಟಿಕೊಳ್ಳಲು ಅವಕಾಶಗಳನ್ನು ಸೃಷ್ಟಿಸಿಕೊಡಬೇಕು. ನಾಗರಿಕ ಸಮಾಜದಲ್ಲಿ ಮಹಿಳಾ ಶಕ್ತಿಯ ಮುನ್ನಡೆಗೆ ಕಂಟಕವಾಗಿರುವ ಸಾಮಾಜಿಕ ಕಟ್ಟುಪಾಡುಗಳ ವಿರುದ್ಧ ಸಂಘಟಿತ ಹೋರಾಟ ನಡೆಸುವುದರೊಂದಿಗೆ ಹೆಣ್ಣು ಭ್ರೂಣ ಹತ್ಯೆಯನ್ನು ತಡೆಯಲು ಹೆಣ್ಣುಮಕ್ಕಳೇ ಸಂಕಲ್ಪ ಮಾಡಬೇಕೆಂದು ಸಲಹೆ ನೀಡಿದರು.

ADVERTISEMENT

ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಅಜಿತ್ ಮಾತನಾಡಿ ಇಂದಿನ ಒತ್ತಡದ ಜೀವನದಲ್ಲಿ ಯಂತ್ರಗಳಂತೆ ಕೆಲಸ ಮಾಡುವ ನಾವು ನಮ್ಮ ಮಾನಸಿಕ ಆರೋಗ್ಯದ ಕಡೆಗೂ ಗಮನಹರಿಸಬೇಕು. ಮಾನಸಿಕ ಖಿನ್ನತೆಗೆ ಒಳಗಾಗದೆ, ಒತ್ತಡಗಳಿಂದ ಮುಕ್ತರಾಗಿ ನೆಮ್ಮದಿಯಿಂದ ಜೀವನ ನಡೆಸುವುದನ್ನು ಅಳವಡಿಸಿಕೊಳ್ಳಬೇಕೆಂದರು.

ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ಕೆ.ವಿ. ಅರ್ಪಿತಾ, ದೇವರಾಜು ಮಾತನಾಡಿದರು. ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲೆ ಪ್ರೊ.ಅನುರಾಧ ಅಧ್ಯಕ್ಷತೆ ವಹಿಸಿ ಮಾತನಾಡಿದರು. ವಕೀಲರ ಸಂಘದ ಅಧ್ಯಕ್ಷ ನಾಗೇಗೌಡ, ಕಾರ್ಯದರ್ಶಿ ಮಂಜೇಗೌಡ, ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ಮಂಜುಳಾ, ಸಹಾಯಕ ಶಿಶು ಅಭಿವೃದ್ಧಿ ಅಧಿಕಾರಿ ಪದ್ಮಜಗದೀಶ್, ಸಾರ್ವಜನಿಕ ಆಸ್ಪತ್ರೆಯ ಆಪ್ತ ಸಮಾಲೋಚಕಿ ಯಮುನಾ, ಐ.ಆರ್‌.ಟಿ ಕೇಂದ್ರದ ಸಮಾಲೋಚಕ ಸತೀಶ್, ತಾಲ್ಲೂಕು ಆರೋಗ್ಯ ನಿರೀಕ್ಷಕ ಶೀಳನೆರೆ ಸತೀಶ್ ಇದ್ದರು.

ಕೆ.ಆರ್.ಪೇಟೆ  ಪಟ್ಟಣದ ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿಶ್ವ ಮಾನಸಿಕ ಆರೋಗ್ಯ ದಿನ ಮತ್ತು ಅಂತರರಾಷ್ಟ್ರೀಯ ಹೆಣ್ಣು ಮಕ್ಕಳ ದಿನದ ಅಂಗವಾಗಿ ಆಯೋಜಿಸಿದ್ದ ಜಾಗೃತಿ ಕಾರ್ಯಕ್ರಮವನ್ನು ನ್ಯಾಯಾಧೀಶ ಸುಧೀರ್ ಉದ್ಘಾಟಿಸಿ ಮಾತನಾಡಿದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.