ADVERTISEMENT

‘ಉದ್ಯೋಗ ಖಾತರಿ ಗ್ರಾಮ ಅಭಿವೃದ್ಧಿಗೆ ವರದಾನ’

​ಪ್ರಜಾವಾಣಿ ವಾರ್ತೆ
Published 13 ಡಿಸೆಂಬರ್ 2013, 3:58 IST
Last Updated 13 ಡಿಸೆಂಬರ್ 2013, 3:58 IST

ಕೃಷ್ಣರಾಜಪೇಟೆ: ಉದ್ಯೋಗ ಖಾತರಿ  ಯೋಜನೆ ದೇಶದ ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗೆ ವರದಾನವಾಗಿದೆ ಎಂದು ಮಾಜಿ ಶಾಸಕ ಕೆ.ಬಿ.ಚಂದ್ರಶೇಖರ್‌ ಹೇಳಿದರು.

ತಾಲ್ಲೂಕಿನ ಹರಳಹಳ್ಳಿ ಗ್ರಾಮ ಪಂಚಾ­ಯಿತಿ ಕೇಂದ್ರದಲ್ಲಿ ನಿರ್ಮಿಸಿರುವ ರಾಜೀವ್‌ಗಾಂಧಿ ಸೇವಾ ಕೇಂದ್ರವನ್ನು ಗುರುವಾರ ಉದ್ಘಾಟಿಸಿ ಅವರು ಮಾತನಾಡಿದರು.

ಇತ್ತೀಚಿನ ದಿನಗಳಲ್ಲಿ ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗೆ ಸರ್ಕಾರಗಳು ಅನೇಕ ಯೋಜನೆಗಳನ್ನು ರೂಪಿಸುತ್ತಿವೆ. ಜನರಿಗೆ ಆರೋಗ್ಯ, ಶಿಕ್ಷಣ, ಮೂಲ  ಸೌಲಭ್ಯ ಒದಗಿಸುವುದು ಸರ್ಕಾರಗಳು ಪ್ರಮುಖ ಕರ್ತವ್ಯವಾಗಿದೆ ಎಂದು ಹೇಳಿದರು.

ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷ ಕೆ.ಎಸ್‌. ಪ್ರಭಾಕರ್‌ ಮಾತನಾಡಿ, ಹಿಂದುಳಿದ ವರ್ಗಗಳ ಜನರಿಗಾಗಿ ಸರ್ಕಾರ ರೂಪಿಸಿರುವ ಯೋಜನೆಗಳ ಫಲವು ಅರ್ಹ ಫಲಾನುಭವಿಗಳಿಗೆ ತಲುಪುವಂತೆ ನೋಡಿಕೊಳ್ಳುವುದು ಸರ್ಕಾರಿ ಅಧಿಕಾರಿಗಳ ಜವಾಬ್ದಾರಿ ಯಾಗಿದೆ ಎಂದರು.

ಗ್ರಾಮಪಂಚಾಯಿತಿ ಅಧ್ಯಕ್ಷೆ ಪ್ರೇಮಮ್ಮ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಮಾತನಾಡಿದರು.
ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಆರ್‌.ಕೆ. ಕುಮಾರ್‌, ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಶಾಂತಮ್ಮ, ಉಪಾಧ್ಯಕ್ಷೆ ಭುವನೇಶ್ವರಿ, ಗ್ರಾಮ ಪಂಚಾಯಿತಿ ಉಪಾಧ್ಯಕ್ಷ  ಸುಬ್ಬೇಗೌಡ  ಇತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.