ADVERTISEMENT

‘ಮಕ್ಕಳಲ್ಲಿ ಸಾಂಸ್ಕೃತಿಕ ಪ್ರಜ್ಞೆ ಬೆಳಸಿ’

​ಪ್ರಜಾವಾಣಿ ವಾರ್ತೆ
Published 9 ಜನವರಿ 2014, 9:26 IST
Last Updated 9 ಜನವರಿ 2014, 9:26 IST

ಮಂಡ್ಯ: ಮಕ್ಕಳಲ್ಲಿ ಸಾಂಸ್ಕೃತಿಕ ಪ್ರಜ್ಞೆಯನ್ನು ಬೆಳೆಸಬೇಕು ಎಂದು ಮಂಡ್ಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ನಿರ್ದೇಶಕಿ ಡಾ.ಪುಷ್ಪಾ ಸರ್ಕಾರ್‌ ಹೇಳಿದರು. ಅನಂತಕುಮಾರ್‌ ಸ್ವಾಮೀಜಿ, ಡಾ.ಎಚ್‌.ಎಸ್‌. ಮುದ್ದೇಗೌಡ, ಎಂ.ಶಿವಕುಮಾರ್‌ ಇದ್ದಾರೆ.

ನಗರದ ಕಲಾ ಮಂದಿರದಲ್ಲಿ ಮಂಗಳವಾರ ನಡೆದ ಅಭಿನವ ಭಾರತಿ ವಿದ್ಯಾಕೇಂದ್ರ ಸಮೂಹ ಸಂಸ್ಥೆಗಳ ವತಿಯಿಂದ ಹಮ್ಮಿಕೊಂಡಿದ್ದ ಸಾಂಸ್ಕೃತಿಕ ಸಂಜೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಅನಂತಕುಮಾರ್‌ ಸ್ವಾಮೀಜಿ ವಾರಣಾಸಿಯಿಂದ ಮಂಡ್ಯಕ್ಕೆ ಸಾಂಸ್ಕೃತಿಕ ರಾಯಭಾರಿಯಾಗಿ ಬಂದಿದ್ದಾರೆ. ಮಕ್ಕಳಲ್ಲೂ ಅದನ್ನು ಬೆಳೆಸುವ ಕೆಲಸ ಮಾಡುತ್ತಿದ್ದಾರೆ ಎಂದರು. ಮುಖ್ಯ ಅತಿಥಿಯಾಗಿದ್ದ ಕಸಾಪ ಜಿಲ್ಲಾ ಘಟಕದ ಮಾಜಿ ಅಧ್ಯಕ್ಷ ಡಾ.ಎಚ್‌.ಎಚ್‌. ಮುದ್ದೇಗೌಡ ಮಾತನಾಡಿ, ಮಕ್ಕಳಿಗೆ ಶಿಕ್ಷಣ ಜೊತೆಗೆ ಸಾಂಸ್ಕೃತಿಕ ಚಟುವಟಿಕೆಗೂ ಪ್ರೋತ್ಸಾಹ ನೀಡಬೇಕು ಎಂದು ಹೇಳಿದರು.
ಅಭಿನವ ಭಾರತಿ ವಿದ್ಯಾಕೇಂದ್ರದ ಅಧ್ಯಕ್ಷ ಡಿ. ರಾಮಲಿಂಗಯ್ಯ, ಸಂಸ್ಥಾಪಕ ಅನಂತಕುಮಾರ್‌ ಸ್ವಾಮೀಜಿ, ಪತ್ರಕರ್ತ ಎಂ.ಶಿವ ಕುಮಾರ್‌, ಪ್ರೊ.ಶಿವನಂಜೇಗೌಡ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.