ADVERTISEMENT

‘ರಾಷ್ಟ್ರ ರಕ್ಷಣೆಯಲ್ಲಿ ಶಿಕ್ಷಕರ ಪಾತ್ರ ಹಿರಿದು’

​ಪ್ರಜಾವಾಣಿ ವಾರ್ತೆ
Published 21 ಸೆಪ್ಟೆಂಬರ್ 2013, 5:11 IST
Last Updated 21 ಸೆಪ್ಟೆಂಬರ್ 2013, 5:11 IST

ನಾಗಮಂಗಲ: ಸೈನಿಕರು ದೇಶವನ್ನು ಸಂರಕ್ಷಿಸುವ ಕೆಲಸ ಮಾಡಿದರೆ ಶಿಕ್ಷಕರು ಮಕ್ಕಳಿಗೆ ಗುಣಾತ್ಮಕ ಶಿಕ್ಷಣ ನೀಡುವುದರೊಂದಿಗೆ ರಾಷ್ಟ್ರವನ್ನು ರಕ್ಷಣೆ ಮಾಡುವಂತಹ ಕೆಲಸ ಮಾಡಬೇಕು ಎಂದು ಆದಿಚುಂಚನಗಿರಿ ಪೀಠಾಧ್ಯಕ್ಷ ನಿರ್ಮಲಾನಂದನಾಥ ಸ್ವಾಮೀಜಿ ತಿಳಿಸಿದರು.

ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮತ್ತು ಶಿಕ್ಷಕರ ದಿನಾಚರಣೆ ಆಚರಣಾ ಸಮಿತಿ ವತಿಯಿಂದ ಶುಕ್ರವಾರ ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಸಾನಿಧ್ಯ ವಹಿಸಿ ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಸಕ ಎನ್‌. ಚಲುವರಾಯಸ್ವಾಮಿ ಮಾತನಾಡಿ, ಪ್ರಸ್ತುತ ಸನ್ನಿವೇಶದಲ್ಲಿ ಅದನ್ನು ಉಳಿಸುವ ನಿಟ್ಟಿನಲ್ಲಿ ಶಿಕ್ಷಕರು ಕಾರ್ಯೋನ್ಮುಖರಾಗಿದ್ದಾರಾ ಎಂದು ಅವರು ಆತ್ಮಾವಲೋಕನ ಮಾಡಿಕೊಳ್ಳ ಬೇಕು. ನಿವೃತ್ತ ಶಿಕ್ಷಕ ಶಿಕ್ಷಕಿಯರನ್ನು ಸನ್ಮಾನಿಸಲಾಯಿತು.

ಲತಾಶ್ರೀ ಭರತನಾಟ್ಯ ಪ್ರದರ್ಶಿಸಿದರು. ಶಿಕ್ಷಣ ಇಲಾಖೆ ವತಿಯಿಂದ ಸ್ವಾಮೀಜಿ ಹಾಗೂ ಶಾಸಕರನ್ನು ಸನ್ಮಾನಿಸಲಾಯಿತು. ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಬಸವಯ್ಯ, ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಜೆ. ಕುಮಾರ್‌, ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಆರ್‌. ಅನಂತರಾಜು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.