ADVERTISEMENT

10ರಿಂದ ನಾಲೆಗಳಿಗೆ ನೀರು ಹರಿಸಲು ನಿರ್ಧಾರ

​ಪ್ರಜಾವಾಣಿ ವಾರ್ತೆ
Published 9 ಸೆಪ್ಟೆಂಬರ್ 2017, 8:31 IST
Last Updated 9 ಸೆಪ್ಟೆಂಬರ್ 2017, 8:31 IST

ಮಂಡ್ಯ: ಕೆಆರ್‌ಎಸ್‌ ಜಲಾಶಯದಿಂದ ಜಿಲ್ಲೆಯ ವಿಶ್ವೇಶ್ವರಯ್ಯ ನಾಲೆಗಳಿಗೆ ಇದೇ 10ರಿಂದ 18 ದಿನಗಳ ಕಾಲ ನೀರು ಹರಿಸಲು ಶುಕ್ರವಾರ ನಡೆದ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು.‌

ಜಿಲ್ಲಾ ಉಸ್ತುವಾರಿ ಸಚಿವ ಎಂ.ಕೃಷ್ಣಪ್ಪ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಹೇಮಾವತಿ ಜಲಾಶಯದ ವ್ಯಾಪ್ತಿಗೆ ಬರುವ ಜಿಲ್ಲೆಯ ಕೆ.ಆರ್.ಪೇಟೆ, ನಾಗಮಂಗಲ ಹಾಗೂ ಪಾಂಡವಪುರ ನಾಲೆಗಳಿಗೆ ಹೇಮಾವತಿ ಜಲಾಶಯದಿಂದ 15 ದಿನಗಳ ಕಾಲ ನೀರು ಬಿಡುಗಡೆ ಮಾಡಲು ನಿರ್ಣಯ ಕೈಗೊಳ್ಳಲಾಯಿತು.

ಅಲ್ಲದೆ ಅಚ್ಚುಕಟ್ಟು ವ್ಯಾಪ್ತಿಯ ಕೆರೆಗಳನ್ನು ಶೇ 100 ರಷ್ಟು ತುಂಬಿಸಲು ಅಗತ್ಯ ಕ್ರಮ ಕೈಗೊಳ್ಳಲು ಹಾಗೂ ಅರೆ ನೀರಾವರಿ ಬೆಳೆ ಬೆಳೆಯಲು ರೈತರಿಗೆ ಮಾರ್ಗದರ್ಶನ ಮಾಡಲು ಅಧಿಕಾರಿಗೆ ಸೂಚನೆ ನೀಡಲು ತೀರ್ಮಾನಿಸಲಾಯಿತು.

ADVERTISEMENT

ಈ ಸಂದರ್ಭದಲ್ಲಿ ಶಾಸಕರಾದ ಎನ್‌.ಚಲುವರಾಯಸ್ವಾಮಿ, ನರೇಂದ್ರಸ್ವಾಮಿ, ರಮೇಶ್ ಬಂಡಿಸಿದ್ದೇಗೌಡ, ಕೆ.ಎಸ್.ಪುಟ್ಟಣ್ಣಯ್ಯ, ಡಿ.ಸಿ.ತಮ್ಮಣ್ಣ, ಜಿಲ್ಲಾಧಿಕಾರಿ ಎನ್.ಮಂಜುಶ್ರೀ ಹಾಜರಿದ್ದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.