ADVERTISEMENT

100 ಅಡಿ ತಲುಪಿದ ಕೆಆರ್‌ಎಸ್

​ಪ್ರಜಾವಾಣಿ ವಾರ್ತೆ
Published 14 ಆಗಸ್ಟ್ 2012, 9:10 IST
Last Updated 14 ಆಗಸ್ಟ್ 2012, 9:10 IST

ಶ್ರೀರಂಗಪಟ್ಟಣ: ತಾಲ್ಲೂಕಿನ ಪ್ರಸಿದ್ಧ ಕೃಷ್ಣರಾಜ ಸಾಗರ ಜಲಾಶಯ ಸೋಮವಾರ ಸಂಜೆ ವೇಳೆ 100 ಅಡಿ ದಾಟಿದೆ.

ಜಲಾಶಯದಲ್ಲಿ 100.30 ಅಡಿ ನೀರು ಸಂಗ್ರಹವಾಗಿದೆ. ಜಲಾಶಯಕ್ಕೆ 14,455 ಕ್ಯೂಸೆಕ್ ನೀರು ಹರಿದು ಬರುತ್ತಿದೆ. 341 ಕ್ಯೂಸೆಕ್ ನೀರನ್ನು ಹೊರಕ್ಕೆ ಹರಿಯ ಬಿಡಲಾಗಿದೆ. ಕಳೆದ ವರ್ಷ ಇದೇ ದಿನ ಜಲಾಶಯದಲ್ಲಿ 123 ಅಡಿ ನೀರು ಸಂಗ್ರಹವಾಗಿತ್ತು. 11,512 ಕ್ಯೂಸೆಕ್ ಒಳ ಹರಿವು ಹಾಗೂ 8502 ಕ್ಯೂಸೆಕ್ ಹೊರ ಹರಿವು ಇತ್ತು. ಜಲಾಶಯ 110 ಅಡಿ ಮುಟ್ಟುವ ವರೆಗೆ ನಾಲೆಗಳಿಗೆ ನೀರು ಹರಿಸುವುದಿಲ್ಲ ಎಂದು ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.