ADVERTISEMENT

130 ವಿದ್ಯಾರ್ಥಿಗಳಿಗೆ ಕನ್ನಡಕ ವಿತರಣೆ

​ಪ್ರಜಾವಾಣಿ ವಾರ್ತೆ
Published 29 ಮಾರ್ಚ್ 2018, 7:29 IST
Last Updated 29 ಮಾರ್ಚ್ 2018, 7:29 IST
ಕೊಪ್ಪ ಹೋಬಳಿಯ ಬೆಸಗರಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ಮಂಗಳವಾರ ಶ್ರೀ ಸತ್ಯಸಾಯಿ ಸೇವಾ ಸಂಸ್ಥೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಕನ್ನಡಕ ವಿತರಿಸಲಾಯಿತು
ಕೊಪ್ಪ ಹೋಬಳಿಯ ಬೆಸಗರಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ಮಂಗಳವಾರ ಶ್ರೀ ಸತ್ಯಸಾಯಿ ಸೇವಾ ಸಂಸ್ಥೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಕನ್ನಡಕ ವಿತರಿಸಲಾಯಿತು   

ಕೊಪ್ಪ: ಮಂಡ್ಯದ ಶ್ರೀ ಸತ್ಯಸಾಯಿ ಸೇವಾ ಸಂಸ್ಥೆಯವರು ಹೋಬಳಿಯ ಬೆಸಗರಹಳ್ಳಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಕ್ಲಸ್ಟರ್‌ ವ್ಯಾಪ್ತಿಯ 2 ಸಾವಿರ ವಿದ್ಯಾರ್ಥಿಗಳ ನೇತ್ರ ತಪಾಸಣೆ ಮಾಡಿ, ದೃಷ್ಟಿದೋಷವಿರುವ 130 ವಿದ್ಯಾರ್ಥಿಗಳಿಗೆ ಉಚಿತ ಕನ್ನಡಕ ವಿತರಿಸಲಾಯಿತು.

ಶ್ರೀ ಸತ್ಯಸಾಯಿ ಸೇವಾ ಸಂಸ್ಥೆಯ ಸೇವಾ ಪ್ರತಿನಿಧಿ ಕೆರೆಮೇಗಲದೊಡ್ಡಿ ವೆಂಕಟೇಶ್‌ ಮಾತನಾಡಿ, 50 ವಿದ್ಯಾರ್ಥಿಗಳನ್ನು ನಮ್ಮ ಸಂಸ್ಥೆಯಿಂದ ಉಚಿತವಾಗಿ ಮೈಸೂರಿನ ಮಹಾವೀರ ಕಣ್ಣಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುವುದು ಶಿಕ್ಷಣ, ಆರೋಗ್ಯ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಸಂಸ್ಥೆ ಸೇವೆ ಸಲ್ಲಿಸುತ್ತಿದೆ ಎಂದು ಹೇಳಿದರು.

ಮುಖ್ಯ ಶಿಕ್ಷಕ ನಾಗೇಶ, ಎಸ್‌ಡಿಎಂಸಿ ಅಧ್ಯಕ್ಷ ರಮೇಶ್, ಸೇವಾ ಪ್ರತಿನಿಧಿ ಬಿ.ಎಸ್‌. ಶಿವಪ್ಪ, ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.