ADVERTISEMENT

ಕಾವೇರಿ ನದಿಗೆ 1.70 ಲಕ್ಷ ಕ್ಯುಸೆಕ್ ಹೊರಹರಿವು: ಪ್ರವಾಸಿಗರಿಗೆ ಪ್ರವೇಶ ನಿರ್ಬಂಧ

ಪ್ರವಾಸಿ ಸ್ಥಳಗಳ ಪ್ರವೇಶ ನಿರ್ಬಂಧಿಸಿ ಜಿಲ್ಲಾಧಿಕಾರಿ ಆದೇಶ

​ಪ್ರಜಾವಾಣಿ ವಾರ್ತೆ
Published 31 ಜುಲೈ 2024, 16:18 IST
Last Updated 31 ಜುಲೈ 2024, 16:18 IST
<div class="paragraphs"><p>ಕೆಆರ್‌ಎಸ್‌</p></div>

ಕೆಆರ್‌ಎಸ್‌

   

- ಪ್ರಜಾವಾಣಿ ಚಿತ್ರ

ಮಂಡ್ಯ: ಜಿಲ್ಲೆಯ ಕಾವೇರಿ ಜಲಾನಯನ ಪ್ರದೇಶದಲ್ಲಿ ನಿರಂತರವಾಗಿ ಮಳೆಯಾಗುತ್ತಿದ್ದು, ಕೃಷ್ಣರಾಜ ಸಾಗರದ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿರುವುದರಿಂದ, ನದಿಯ ಹೊರಹರಿವು ತೀವ್ರವಾಗಿದ್ದು, ಜಲಾಶಯದಿಂದ ಜುಲೈ 31ರಂದು ಸುಮಾರು 1,70,000 ಕ್ಯುಸೆಕ್ ನೀರನ್ನು ಕಾವೇರಿ ನದಿಗೆ ಹರಿಸಲಾಗಿರುತ್ತದೆ.

ADVERTISEMENT

ಶ್ರೀರಂಗಪಟ್ಟಣ ತಾಲ್ಲೂಕು ವ್ಯಾಪ್ತಿಯಲ್ಲಿ ಬರುವ ಪ್ರವಾಸಿ ಸ್ಥಳಗಳಾದ ಕೆ.ಆರ್.ಎಸ್ ಜಲಾಶಯ, ಬೃಂದಾವನ ಉದ್ಯಾನ, ಪಶ್ಚಿಮವಾಹಿನಿ, ಗೋಸಾಯ್ ಘಾಟ್, ಬಲಮುರಿ ಎಡಮುರಿ, ವೆಲ್ಲೆಸ್ಲಿ ಸೇತುವೆ, ನಿಮಿಷಾಂಬ ದೇವಸ್ಥಾನದ ಪಕ್ಕದಲ್ಲಿರುವ ಸ್ನಾನ ಘಟ್ಟ, ರಂಗನತಿಟ್ಟು ಹಾಗೂ ಕೆ.ಆರ್.ಎಸ್ ಜಲಾಶಯದಿಂದ ಕಾವೇರಿ ನದಿಯ ಹೊರಹರಿವಿನ ಆಜು-ಬಾಜು ಸ್ಥಳಗಳ ವೀಕ್ಷಣೆಯನ್ನು ಕಾನೂನು ಸುವ್ಯವಸ್ಥೆ ಮತ್ತು ಸಾರ್ವಜನಿಕರ ಹಾಗೂ ಪ್ರವಾಸಿಗರ ಹಿತದೃಷ್ಟಿಯಿಂದ ಆಗಸ್ಟ್ 1 ಮತ್ತು 2 ರಂದು ಸಾರ್ವಜನಿಕರ ಹಾಗೂ ಪ್ರವಾಸಿಗರ ಪ್ರವೇಶವನ್ನು ನಿರ್ಬಂಧಿಸಿ ಜಿಲ್ಲಾಧಿಕಾರಿ ಕುಮಾರ ಅವರು ಆದೇಶ ಹೊರಡಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.