ಕೆ.ಆರ್.ಪೇಟೆ: ತಾಲ್ಲೂಕಿನ ಕತ್ತರಘಟ್ಟ ಗ್ರಾಮದ ಬಳಿ ಇರುವ ಬಿ.ಬಿ ಕಾವಲು ಸಮೀಪದ ಅರಣ್ಯ ಪ್ರದೇಶಕ್ಕೆ ಶುಕ್ರವಾರ ಬೆಂಕಿ ತಗುಲಿ ಸುಮಾರು 25 ಎಕರೆಯಷ್ಟು ಅರಣ್ಯ ಪ್ರದೇಶ ಸುಟ್ಟು ಹೋಗಿದೆ.
ಒಣಗಿರುವ ಎಲೆಗಳಿಗೆ ಹಾಕಿದ್ದ ಬೆಂಕಿ ವ್ಯಾಪಕವಾಗಿ ಹರಡಿದೆ. ವಿಷಯ ತಿಳಿದ ಅಗ್ನಿಶಾಮಕ ತಂಡ ಸ್ಥಳಕ್ಕೆ ಧಾವಿಸಿ ಸತತ ಮೂರು ಗಂಟೆ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದ್ದಾರೆ.
ಅಗ್ನಿಶಾಮಕ ಠಾಣಾಧಿಕಾರಿ ಶಿವಣ್ಣ, ಸೋಮಶೇಖರಗೌಡ, ಪ್ರಮೋದ್, ಕುಮಾರಸ್ವಾಮಿ, ಶ್ರೀಕಾಂತ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.