ADVERTISEMENT

ಗರುಡನ ಉಕ್ಕಡಕ್ಕೆ 24 ಗಂಟೆಯೂ ನೀರು: ಶಾಸಕ ರಮೇಶ ಬಂಡಿಸಿದ್ದೇಗೌಡ

​ಪ್ರಜಾವಾಣಿ ವಾರ್ತೆ
Published 19 ಜೂನ್ 2025, 14:35 IST
Last Updated 19 ಜೂನ್ 2025, 14:35 IST
<div class="paragraphs"><p>ಶ್ರೀರಂಗಪಟ್ಟಣ ತಾಲ್ಲೂಕಿನ ಗರುಡನ ಉಕ್ಕಡ ಗ್ರಾಮದಲ್ಲಿ ಜೆಜೆಎಂ ಯೋಜನೆಯಡಿ&nbsp;24x7&nbsp;ಕುಡಿಯುವ ನೀರು ಸರಬರಾಜು ಯೋಜನೆಗೆ ಶಾಸಕ ರಮೇಶ ಬಂಡಿಸಿದ್ದೇಗೌಡ ಗುರುವಾರ ಚಾಲನೆ ನೀಡಿದರು</p></div>

ಶ್ರೀರಂಗಪಟ್ಟಣ ತಾಲ್ಲೂಕಿನ ಗರುಡನ ಉಕ್ಕಡ ಗ್ರಾಮದಲ್ಲಿ ಜೆಜೆಎಂ ಯೋಜನೆಯಡಿ 24x7 ಕುಡಿಯುವ ನೀರು ಸರಬರಾಜು ಯೋಜನೆಗೆ ಶಾಸಕ ರಮೇಶ ಬಂಡಿಸಿದ್ದೇಗೌಡ ಗುರುವಾರ ಚಾಲನೆ ನೀಡಿದರು

   

ಶ್ರೀರಂಗಪಟ್ಟಣ: ‘ತಾಲ್ಲೂಕಿನ ಗರುಡನ ಉಕ್ಕಡ ಗ್ರಾಮದಲ್ಲಿ ಜೆಜೆಎಂ ಯೊಜನೆಯಡಿ 24x7 ಕುಡಿಯುವ ನೀರು ಸರಬರಾಜು ಯೋಜನೆ ಅನುಷ್ಠಾನಗೊಂಡಿದ್ದು, ಇದು ದಿನದ 24 ಗಂಟೆಯೂ ಕುಡಿಯುವ ನೀರು ಪಡೆದ ಜಿಲ್ಲೆಯ ಪ್ರಥಮ ಗ್ರಾಮವಾಗಿದೆ’ ಎಂದು ಶಾಸಕ ರಮೇಶ ಬಂಡಿಸಿದ್ದೇಗೌಡ ತಿಳಿಸಿದರು.

ತಾಲ್ಲೂಕಿನ ಕೆ.ಶೆಟ್ಟಹಳ್ಳಿ ಗ್ರಾ.ಪಂ. ವ್ಯಾಪ್ತಿಯ ಗರುಡ ಉಕ್ಕಡ ಗ್ರಾಮದಲ್ಲಿ ಜಲ ಜೀವನ್‌ ಮಿಷನ್‌ ಯೋಜನೆಯಡಿ ಮನೆ– ಮನೆಗೆ 24x7 ಕುಡಿಯುವ ನೀರು ಸರಬರಾಜು ಯೋಜನೆಯ ಅನುಷ್ಠಾನಕ್ಕೆ ಗುರುವಾರ ಚಾಲನೆ ನೀಡಿ ಅವರು ಮಾತನಾಡಿದರು. 

ADVERTISEMENT

ಗರುಡನ ಉಕ್ಕಡ ಗ್ರಾಮವನ್ನು ಮಾದರಿ ಗ್ರಾಮ ಮಾಡುವ ಉದ್ದೇಶದಿಂದ ₹ 56 ಲಕ್ಷ ವೆಚ್ಚದಲ್ಲಿ ಈ ಯೋಜನೆ ರೂಪಿಸಲಾಗಿದೆ. ಗ್ರಾಮದ 95 ಮನೆಗಳಿಗೂ ನಲ್ಲಿ ಸಂಪರ್ಕ ಕಲ್ಪಿಸಲಾಗಿದೆ. ₹25 ಲಕ್ಷ ಲೀಟರ್‌ ನೀರು ಸಂಗ್ರಹ ಸಾಮರ್ಥ್ಯದ ಟ್ಯಾಂಕ್‌ನಿಂದ ಪ್ರತಿ ಮನೆಗೆ ನಿರಂತರವಾಗಿ ನೀರು ಸರಬರಾಜಾಗಲಿದೆ ಎಂದು ಹೇಳಿದರು.

ಊರಿನ ಪ್ರತಿ ವ್ಯಕ್ತಿಗೆ ದಿನಕ್ಕೆ 55 ಲೀಟರ್‌ ನೀರು ಸಿಗಲಿದೆ. ಗರುಡನ ಉಕ್ಕಡದಲ್ಲಿ ಎಲ್ಲ ರಸ್ತೆ ಮತ್ತು ಚರಂಡಿಗಳು ಅಭಿವೃದ್ಧಿಯಾಗಿವೆ. ಶಾಲೆ ಮತ್ತು ಅಂಗನವಾಡಿ ಕಟ್ಟಡಗಳನ್ನೂ ನಿರ್ಮಿಸಿದ್ದು, ಮಾದರಿ ಗ್ರಾಮವನ್ನಾಗಿ ಅಭಿವೃದ್ಧಿ ಮಾಡಲಾಗಿದೆ ಎಂದು ತಿಳಿಸಿದರು.

ಜಿಲ್ಲಾಧಿಕಾರಿ ಕುಮಾರ ಹಾಗೂ ಜಿ.ಪಂ. ಸಿಇಒ ಕೆ.ಆರ್‌. ನಂದಿನಿ ಕೂಡ ಗರುಡನ ಉಕ್ಕಡಕ್ಕೆ ಗುರುವಾರ ಮಧ್ಯಾಹ್ನ ಭೇಟಿ ನೀಡಿ 24x7 ಕುಡಿಯುವ ನೀರು ಯೋಜನೆಯನ್ನು ಪರಿಶೀಲಿಸಿದರು.

ತಾಲ್ಲೂಕು ಪಂಚಾಯಿತಿ ಇಒ ವೇಣು, ಎಇ ರಾಕೇಶ್, ಜೆಜೆಎಂ ಜಿಲ್ಲಾ ಸಂಯೋಜಕ ಯೋಗೇಶ್, ತಾಂತ್ರಿಕ ಸಂಯೋಜಕರಾದ ಲೋಹಿತ್‌, ರಶ್ಮಿ, ಬಿಇಒ ಆರ್‌.ಪಿ. ಮಹೇಶ್, ಗ್ರಾ.ಪಂ. ಅಧ್ಯಕ್ಷೆ ಹರ್ಷಿತಾ, ಪಿಡಿಒ ಶೋಭಾರಾಣಿ, ಕಾರ್ಯದರ್ಶಿ ತಿಮ್ಮರಾಜು, ಉಪಾಧ್ಯಕ್ಷೆ ಕವಿತಾ, ಸದಸ್ಯರಾದ ರಂಜಿನಿ, ನರಸಿಂಹಯ್ಯ, ಕೆ. ಶೆಟ್ಟಹಳ್ಳಿ ಅಪ್ಪಾಜಿ, ರಾಜು, ಯಶೋಧಾ ಇದ್ದರು.

ಸದ್ಯ ಕೊಳವೆ ಬಾವಿಯಿಂದ 25 ಲಕ್ಷ ಲೀಟರ್‌ ನೀರು ಸಂಗ್ರಹ ಸಾಮರ್ಥ್ಯದ ಟ್ಯಾಂಕ್‌ಗೆ ನೀರು ತುಂಬಿಸುತ್ತಿದ್ದು ಕೆಲವೇ ದಿನಗಳಲ್ಲಿ ಬಹುಗ್ರಾಮ ಕುಡಿಯುವ ನೀರು ಯೋಜನೆಯ ಸಂಪರ್ಕ ನೀಡಲಾಗುತ್ತದೆ.
- ರಾಮಕೃಷ್ಣೇಗೌಡ ಎಇಇ ಗ್ರಾಮೀಣ ಕುಡಿಯುವ ನೀರು ಸರಬರಾಜು ಯೋಜನೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.