ಮಂಡ್ಯ: ಅಬಕಾರಿ ಇಲಾಖೆ ಅಧಿಕಾರಿಗಳು ಶುಕ್ರವಾರ ಜಿಲ್ಲೆಯ ಎರಡು ಕಡೆ ದಾಳಿ ನಡೆಸಿ 3.05 ಕೆ.ಜಿ ಗಾಂಜಾ ವಶಕ್ಕೆ ಪಡೆದು ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ತಾಲ್ಲೂಕಿನ ಹೆಮ್ಮೆಗೆ ಗ್ರಾಮದಲ್ಲಿ ಅಕ್ರಮವಾಗಿ ಗಾಂಜಾ ಸಂಗ್ರಹಿಸಿ ಇಟ್ಟಿದ್ದ ಮನೆಗೆ ದಾಳಿ ಮಾಡಿ ವ್ಯಕ್ತಿಯೊಬ್ಬನನ್ನು ಬಂಧಿಸಿ 500 ಗ್ರಾಂ ಗಾಂಜಾ, ಒಂದು ಬೈಕ್ ವಶಕ್ಕೆ ಪಡೆದಿದ್ದಾರೆ. ಆತ ನೀಡಿದ ಮಾಹಿತಿ ಆಧರಿಸಿ ಮಳವಳ್ಳಿ ತಾಲ್ಲೂಕು ಹೊಸದೊಡ್ಡಿ ಗ್ರಾಮದ ಮನೆಯೊಂದಕ್ಕೆ ದಾಳಿ ನಡೆಸಿ 2.5 ಕೆ.ಜಿ ಗಾಂಜಾ ವಶಕ್ಕೆ ಪಡೆದು ವ್ಯಕ್ತಿಯೊಬ್ಬರನ್ನು ಬಂಧಿಸಿದ್ದಾರೆ.
ಇಬ್ಬರು ಆರೋಪಿಗಳಲ್ಲಿ ಒಬ್ಬ ತಮಿಳುನಾಡು ಮೂಲದವನು ಎಂದು ತಿಳಿದು ಬಂದಿದೆ. ಆರೋಪಿಗಳ ವಿರುದ್ಧ ಎನ್‌ಡಿಪಿಎಸ್ ಕಾಯ್ದೆ ಅಡಿ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ. ಅಬಕಾರಿ ಇನ್‌ಸ್ಪೆಕ್ಟರ್ ಚಂದ್ರಕುಮಾರ್ ನೇತೃತ್ವದ ತಂಡ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.